ರಾಜ್ಯೋತ್ಸವದಂದೇ ನಗರಸಭೆ ಗಾದಿಗೆ ಚುನಾವಣೆ
ಚುನಾವಣಾ ಫಲಿತಾಂಶ ಪ್ರಕಟಣೆಗೆ ಹೈಕೋರ್ಟ್ ತಡೆಯಾಜ್ಞೆ
Team Udayavani, Oct 31, 2020, 4:12 PM IST
ಕೋಲಾರ: ಕೋಲಾರ ನಗರಸಭೆಗೆ ನ.1ಕನ್ನಡ ರಾಜ್ಯೋತ್ಸವದಂದು ಅಧ್ಯಕ್ಷ, ಉಪಾಧ್ಯಕ್ಷ ಗಾದಿಯ ಚುನಾವಣೆ ನಿಗದಿಯಾಗಿದ್ದು, ಫಲಿತಾಂಶ ಪ್ರಕಟಣೆಗೆ ಹೈಕೋರ್ಟ್ ತಡೆಯಾಜ್ಞೆಯ ತೂಗುಗತ್ತಿ ನೇತಾಡುವಂತಾಗಿದೆ.
ಮೀಸಲಾತಿಗೆ ಸದಸ್ಯೆ ಆಕ್ಷೇಪ: ಕೀಲುಕೋಟೆ ವಾರ್ಡ್ ನ ನಗರಸಭಾ ಸದಸ್ಯೆ ಎನ್.ಎಂ.ಭಾಗ್ಯಮ್ಮ ಜಯರಾಂ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಿಗದಿಯಾಗಿರುವ ಮೀಸಲಾತಿ ಕುರಿತು ಆಕ್ಷೇಪಣೆ ಸಲ್ಲಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇವರ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್ ಕೋಲಾರ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆಸಲು ವೇಳಾಪಟ್ಟಿಯ ಪ್ರಕಾರ ಅವಕಾಶ ಕಲ್ಪಿಸಿದ್ದು, ನ್ಯಾಯಾಲಯದ ಮುಂದಿನ ಆದೇಶ ಪ್ರಕಟವಾಗುವವರೆಗೂ ಫಲಿತಾಂಶ ಪ್ರಕಟಣೆಗೆ ತಡೆಯಾಜ್ಞೆ ವಿಧಿಸಿದೆ. ಇದು ಚುನಾವಣೆ ಗೆದ್ದು ಫಲಿತಾಂಶ ಘೋಷಿಸಿ ಅಂದೇ ಅಧಿಕಾರ ಸ್ವೀಕರಿಸಬೇಕೆಂಬ ಉತ್ಸಾಹದಲ್ಲಿದ್ದವರಿಗೆ ತಣ್ಣೀರು ಎರಚಿದಂತಾಗಿದೆ.
ಬಲಾಬಲ: ಒಟ್ಟು 35 ಸದಸ್ಯ ಬಲ ಹೊಂದಿರುವ ನಗರಸಭೆಗೆ 12 ಮಂದಿ ಕಾಂಗ್ರೆಸ್ ಚಿಹ್ನೆಯಡಿ ಗೆದ್ದಿದ್ದು, ಜೆಡಿಎಸ್‌ನಿಂದ 8, ಬಿಜೆಪಿ-3, ಎಸ್‌ಡಿಪಿಐ-4, ಪಕ್ಷೇತರರು 8 ಮಂದಿ ಆಯ್ಕೆಯಾಗಿದ್ದು ಜತೆಗೆ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಸೇರಲಿದ್ದು, ಒಟ್ಟಾರೆ ಯಾರಿಗೂ ಬಹುಮತವಿಲ್ಲ. ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ 48 ಗಂಟೆ ಬಾಕಿ ಇರುವ ಸಂದರ್ಭದಲ್ಲಿ ಕಾಂಗ್ರೆಸ್‌ನ 12 ಸದಸ್ಯರ ಪೈಕಿ ಮೂವರು ಸದಸ್ಯರು ಪಕ್ಷದ ಮುಖಂಡರ ಕೈಗೆ ಸಿಗದೆ ನಾಪತ್ತೆಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ಸದಸ್ಯರ ಬಲ 9 ಕ್ಕೆ ಕುಸಿದಿದೆ. ಜೆಡಿಎಸ್ ಸದಸ್ಯರು 8 ಮಂದಿ ಸದ್ಯಕ್ಕೆ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಎಸ್‌ಡಿಪಿಐ ನಾಲ್ವರು ಜೆಡಿಎಸ್ ಬೆಂಬಲಕ್ಕೆ ನಿಂತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನ ಕೆಲವರು ಒಗ್ಗೂಡುವ ಪ್ರಯತ್ನದಲ್ಲಿದ್ದಾರೆ. ಪಕ್ಷೇತರ 8 ಮಂದಿ ಪೈಕಿ ಮೂವರು ಕಾಂಗ್ರೆಸ್ ಬುಲಾವ್‌ಗಾಗಿ ಕಾಯುತ್ತಿದ್ದಾರೆ. ಐದು ಮಂದಿ ಜೆಡಿಎಸ್ ತೆಕ್ಕೆಗೆ ಸೇರಿದ್ದಾರೆ.
ಅಧ್ಯಕ್ಷ – ಉಪಾಧ್ಯಕ್ಷ: ಅಧ್ಯಕ್ಷ ಸ್ಥಾನ ಬಿಸಿಎಂ ಬಿ ವರ್ಗದ ಮಹಿಳೆಗೂ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೂ ಮೀಸಲು ನಿಗದಿಯಾಗಿದೆ. ಇದರಿಂದ ಜೆಡಿಎಸ್ ಒಂದನೇ ವಾರ್ಡ್‌ನ ಶ್ವೇತಾ ಶಬರೀಶ್ ಅಧ್ಯಕ್ಷ ಸ್ಥಾನದ ನೆಚ್ಚಿನ ಅಭ್ಯರ್ಥಿಯಾಗಿದ್ದಾರೆ. ಮೀಸಲಾತಿ ನಿಗದಿಯಾದಾಗಿನಿಂದಲೂ ಸದಸ್ಯರನ್ನು ತಮ್ಮತ್ತ ಸೆಳೆಯಲು ಶ್ವೇತಾ ಕುಟುಂಬದವರು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿ ಬಹುಮತದ ಸದಸ್ಯರನ್ನು ಪ್ರವಾಸಕ್ಕೆ ಕಳುಹಿಸಿದ್ದಾರೆ.
ಇಷ್ಟೆಲ್ಲಾ ಘಟನಾವಳಿಗಳನ್ನು ಮೌನದಿಂದಲೇ ನೋಡುತ್ತಿದ್ದ ಕಾಂಗ್ರೆಸ್ ಯುದ್ಧ ಕಾಲೇ ಶಸ್ತ್ರಾಭ್ಯಾಸ ಎಂಬಂತೆ ಚುನಾವಣೆಗೆ ಎರಡು ಮೂರು ದಿನಗಳ ಬಾಕಿ ಇರುವಂತೆ ಪ್ರಯತ್ನ ಶುರು ಮಾಡಿದ್ದಾರೆ. ವಿಧಾನಪರಿಷತ್ ಸದಸ್ಯ ನಜೀರ್ ಅಹಮದ್ ಪ್ರವೇಶದಿಂದ ವಾತಾವರಣ ಕೊಂಚ ಬದಲಾಗಿದೆ. ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರಿಗೆ ಅವಕಾಶವೋ, ಪಾವನಾ ಜನಾರ್ದನ್ ಅಭ್ಯರ್ಥಿಯೋ ಗೊಂದಲ ಮುಂದುವರಿದಿದೆ.
ಕಾಂಗ್ರೆಸ್ ಅಧ್ಯಕ್ಷರಿಂದ ಸದಸ್ಯರಿಗೆ ವಿಪ್ ಜಾರಿ: ಅಧಿಕಾರ ಹಿಡಿಯಲು ಕೊನೆ ದಿನಗಳಲ್ಲಿ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಚಂದ್ರಾರೆಡ್ಡಿ ಮೂಲಕ ಕೋಲಾರ, ಕೆಜಿಎಫ್ ಹಾಗೂಮುಳಬಾಗಿಲಿನ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿಸಿದೆ. ವಿಪ್ ಉಲ್ಲಂ ಸಿದಲ್ಲಿ ಸದಸ್ಯತ್ವ ಅನರ್ಹಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ಆದರೂ ಪಕ್ಷದಿಂದ ಹೊರಕ್ಕೆ ಕಾಲಿಟ್ಟವರು ವಿಪ್‌ಗೆ ಹೆದರುತ್ತಿಲ್ಲ. ಮುಖಂಡರ ಸಂಪರ್ಕಕ್ಕೂ ಸಿಗುತ್ತಿಲ್ಲ. ತೋರಿಕೆಗಾಗಿ ಪ್ರತಿಷ್ಠೆ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯನ್ನು ನಸೀರ್ ಅಹ್ಮದ್ ಕೊನೆ ಕ್ಷಣದಲ್ಲಿ ತೋರಿಕೆಗಾಗಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಸಹ ಅಷ್ಟೇತೋರಿಕೆಗೆ ಪಕ್ಷವನ್ನು ಕೋಲಾರ ನಗರಸಭೆಯಲ್ಲಿ ಅಧಿಕಾರಕ್ಕೆ ತರಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
ಕಾದು ನೋಡುವ ತಂತ್ರ: ಅಧ್ಯಕ್ಷ,ಉಪಾಧ್ಯಕ್ಷರಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬ ತೀರ್ಮಾನ ಕಾಂಗ್ರೆಸ್ ಬಿಜೆಪಿಯಲ್ಲಿ ಆಗಿಲ್ಲ. ಜೆಡಿಎಸ್ ಈ ವಿಚಾರದಲ್ಲಿ ಸ್ಪಷ್ಟವಾಗಿದೆ. ಅಧ್ಯಕ್ಷ ಸ್ಥಾನವನ್ನು ತಾನಿಟ್ಟುಕೊಂಡು ತನ್ನನ್ನು ಬೆಂಬಲಿಸುವ ಎಸ್‌ಡಿಪಿಐಡಿಗೆ ಉಪಾಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಿದ್ಧವಿದೆ. ಕೊನೆ ಘಳಿಗೆ ವರೆಗೂ ಕಾದು ನೋಡುವ ತಂತ್ರಕ್ಕೆ ಒಳಗಾಗಿದ್ದಾರೆ. ಕನ್ನಡ ರಾಜ್ಯೋತ್ಸವ ಯಾರಿಗೆ ಕೋಲಾರ ನಗರಸಭೆ ಗಾದಿಯ ಅದೃಷ್ಟ ತರುವುದೋ ಕಾದು ನೋಡಬೇಕಷೆ.
ಎಸ್‌ಡಿಪಿಐ ಉಪಾಧ್ಯಕ್ಷ ಸ್ಥಾನದ ಮೇಲೆ ಕಣ್ಣು : ಜೆಡಿಎಸ್‌ಗೆ ಬೆಂಬಲ ಸೂಚಿಸಿರುವ ಎಸ್‌ಡಿಪಿಐ ಉಪಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದೆ. ಹೇಗಾದರೂ ಮಾಡಿ ಉಪಾಧ್ಯಕ್ಷ ಸ್ಥಾನವನ್ನಾದರೂ ಉಳಿಸಿಕೊಂಡು ಆಡಳಿತಾರೂಢ ಪಕ್ಷದ ಸಾಮರ್ಥ್ಯ ತೋರಿಸಬೇಕೆಂದು ಬಿಜೆಪಿ ಹವಣಿಸುತ್ತಿದೆ. ಕಾಂಗ್ರೆಸ್‌ನ ಮಂಜುನಾಥ್ ಇತರರು ಉಪಾಧ್ಯಕ್ಷ ಸ್ಥಾನಕ್ಕಾಗಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನಲ್ಲಿ ನಾಯಕತ್ವದ ಕೊರತೆ ಎದ್ದು ಕಾಣಿಸುತ್ತಿದೆ. ಘಟಾನುಘಟಿ ನಾಯಕರು ಸದಸ್ಯರನ್ನು ಆಟವಾಡಲು ಬಿಟ್ಟು ತಮಾಷೆ ನೋಡುತ್ತಿದ್ದಾರೆ.
ಕುರುಬ, ಅಲ್ಪಸಂಖ್ಯಾತರಿಗೆ ಅವಕಾಶ ನೀಡಲು ಚರ್ಚೆ : ಕೋಲಾರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತ ಅಥವಾ ಕುರುಬ ಸಮುದಾಯಕ್ಕೆ ಅವಕಾಶ ಮಾಡಿಕೊಡಲು ಚರ್ಚೆ ನಡೆಯುತ್ತಿದೆ. ಈ ಎರಡು ಸ್ಥಾನದಲ್ಲಿ ಕುರುಬ ಸಮುದಾಯಕ್ಕೆ ಅವಕಾಶ ಮಾಡಿಕೊಟ್ಟಲ್ಲಿ ಬಿಜೆಪಿ, ಜೆಡಿಎಸ್ ಮತ್ತು ಪಕ್ಷೇತರರಾಗಿ ಗೆದ್ದಿರುವ ಕುರುಬ ಸಮುದಾಯದ ಸದಸ್ಯರು ಒಗ್ಗೂಡಿ ಬೆಂಬಲಿಸುವ ಸಾಧ್ಯತೆ ಕುರಿತಂತೆ ಶುಕ್ರವಾರ ಇಡೀ ದಿನ ಚಟುವಟಿಕೆಗಳು ನಡೆಯುತ್ತಿದ್ದವು. ಆದರೆ, ನಿರೀಕ್ಷಿತ ಸೂಚನೆಗಳು ಸಂಜೆಯವರೆಗೂ ಕಂಡು ಬಂದಿಲ್ಲ.
–ಕೆ.ಎಸ್.ಗಣೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.