ಕಾನೂನು ನೆರವು ಸದ್ಬಳಕೆ ಮಾಡಿಕೊಳ್ಳಿ

'ಫ್ರೆಂಟ್ ಆಫೀಸ್‌'ಗೆ ನ್ಯಾಯಾಧೀಶೆ ಬಿ.ಎಸ್‌.ರೇಖಾ ಚಾಲನೆ

Team Udayavani, Jul 24, 2019, 5:08 PM IST

kolar-tdy-4

ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಆವರಣದಲ್ಲಿ 'ಫ್ರೆಂಟ್ ಆಫೀಸ್‌' ವಿಭಾಗವನ್ನು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್‌.ರೇಖಾ ಲೋಕಾರ್ಪಣೆ ಮಾಡಿದರು.

ಕೋಲಾರ: ಉಚಿತ ಕಾನೂನು ನೆರವು ಬಯಸಿ ಬರುವ ಕಕ್ಷಿದಾರರಿಗೆ ನೆರವಾಗಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನ್ಯಾಯಾಲಯದ ಆವರಣದಲ್ಲಿ ‘ಫ್ರೆಂಟ್ ಆಫೀಸ್‌’ ವಿಭಾಗವನ್ನು ಆರಂಭಿಸಿದ್ದು ಸದ್ಬಳಕೆ ಮಾಡಿಕೊಳ್ಳಬೇಕೆಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್‌.ರೇಖಾ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಫ್ರೆಂಟ್ ಆಫೀಸ್‌ವಿಭಾಗವನ್ನು ಸಾರ್ವಜನಿಕ ಸೇವೆಗೆ ಸಮರ್ಪಣೆ ಮಾಡಿ ಮಾತನಾಡಿದರು.

ಸದ್ಬಳಕೆ ಆಗಲಿ: ರಾಜ್ಯ ಕಾನೂನು ಪ್ರಾಧಿಕಾರದ ಆದೇಶದ ಮೇರೆಗೆ ಉಚಿತ ಕಾನೂನು ಬಯಸಿ ಬರುವ ಕಕ್ಷಿದಾರರಿಗೆ ತಮ್ಮ ಪ್ರಕರಣಗಳಿಗೆ ಸಂಬಂಧಿಸಿದಂತೆ ಅವಶ್ಯಕವಿರುವ ಅರ್ಜಿಗಳನ್ನು ಕಾನೂನು ನೋಟಿಸ್‌, ಕೋರ್ಟ್‌ಮನವಿ ಪತ್ರ, ಅವಶ್ಯಕ ಅರ್ಜಿ ಸಿದ್ಧಪಡಿಸಿಕೊಡುವ ಮತ್ತು ಇತರೆ ಕಾನೂನು ಸೇವೆ ಒದಗಿಸುವ ದೃಷ್ಟಿಯಿಂದ ಈ ಕಚೇರಿ ಆರಂಭಿಸಲಾಗಿದೆ ಎಂದರು.

ಅರಿವು: ಈಗಾಗಲೇ ಶಾಲಾ ಕಾಲೇಜು, ಸಂಘ-ಸಂಸ್ಥೆಗಳು, ಸಾರ್ವಜನಿಕರು, ಕಾರ್ಮಿಕರಿಗೆ ಕಾನೂನು ಸೇವಾ ಪ್ರಾಧಿಕಾರ ಕಾನೂನಿನ ಅರಿವು ನೆರವು ಒದಗಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ ಎಂದು ಹೇಳಿದರು.

ಅವಶ್ಯಕ ಅರ್ಜಿ ಸಿದ್ಧಪಡಿಸುತ್ತಾರೆ: ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಎಚ್.ಗಂಗಾಧರ ‘ಫ್ರೆಂಟ್ ಆಫೀಸ್‌, ಕಚೇರಿ ದಿನಗಳಲ್ಲಿ ಬೆಳಗ್ಗೆ 10.30 ರಿಂದ ಸಂಜೆ 6 ಗಂಟೆವರೆಗೂ ಕಾರ್ಯನಿರ್ವ ಹಿಸಲಿದೆ. ಕಕ್ಷಿದಾರರಿಗೆ, ಸಾರ್ವಜನಿಕರ ಪ್ರಕರಣಗಳಿಗೆ ಸಂಬಂಧಿಸಿದ ಅವಶ್ಯಕ ಅರ್ಜಿ ಹಾಗೂ ನೋಟಿಸ್‌ಗಳನ್ನು ಉಚಿತವಾಗಿ ಸಿದ್ಧಪಡಿಸಿಕೊಡುತ್ತಾರೆ. ಅದರಲ್ಲೂ ಮಹಿಳೆ, ವಿಕಲಚೇತನರು, ಆದಾಯದ ಮಿತಿಯೊಳಗೆ ಇರುವವರು ಯಾರೇ ಬಂದರೂ ಸೌಲಭ್ಯ ಪಡೆದುಕೊಳ್ಳಬಹುದೆಂದರು. ವಕೀಲರ ಸಂಘದ ಅಧ್ಯಕ್ಷ ಟಿ.ಆರ್‌.ಜಯರಾಮ್‌, ಪ್ಯಾನಲ್ ವಕೀಲ ಕೆ.ಆರ್‌.ಧನರಾಜ್‌, ಎಂ.ನಾರಾಯಣಸ್ವಾಮಿ, ಸೋಮಶೇಖರ್‌, ವೆಂಕಟಾಚಲಪತಿ, ಶ್ರೀನಿವಾಸ್‌, ವಿಶಾಲಾಕ್ಷಿ ,ಸಂಧ್ಯಾ ಮತ್ತಿತರರಿದ್ದರು.

ಟಾಪ್ ನ್ಯೂಸ್

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.