ಸರ್ಕಾರಿ ಆಸ್ಪತ್ರೆ ಜನಸ್ನೇಹಿಯಾಗಲಿ; ಆರೋಗ್ಯರಕ್ಷಾ ಸಮಿತಿಗೆ 8 ಮಂದಿ ನಾಮನಿರ್ದೇಶನ
ಬಡ ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಹೆಚ್ಚಿನ ನಿಗಾ ವಹಿಸಬೇಕು.
Team Udayavani, Nov 18, 2022, 4:27 PM IST
ಕೋಲಾರ: ಸರ್ಕಾರಿ ಆಸ್ಪತ್ರೆಗಳನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ಮೂಲಕ ಬಡ ರೋಗಿಗಳಿಗೆ ಉತ್ತಮ ಸೌಲಭ್ಯಗಳು ಸಿಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪ್ರತಿ ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ರಚಿಸಿ 8 ಮಂದಿಯನ್ನು ನಾಮನಿರ್ದೇಶನ ಮಾಡಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇದೇ ಮೊದಲ ಬಾರಿಗೆ ನಡೆದ ಆರೋಗ್ಯ ರಕ್ಷಾ ಸಮಿತಿಯ ಮೊದಲ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಸರ್ಕಾರಿ ಆಸ್ಪತ್ರೆಗಳ ಸುಧಾರಣೆ ಹಾಗೂ ಜನಸ್ನೇಹಿಯಾಗಿಸುವ ಪ್ರಯತ್ನವನ್ನು ಸರ್ಕಾರ ನಡೆಸಿದೆ. ಸರ್ಕಾರದಿಂದ ಸಿಗುವ ಆರೋಗ್ಯ ಸೌಲಭ್ಯಗಳನ್ನು ಬಡ ಜನತೆಗೆ ತಲುಪಿಸುವಲ್ಲಿ ಯಾವುದೇ ಲೋಪವಾಗದಂತೆ ಕ್ರಮವಹಿಸಲು ಆರೋಗ್ಯ ರಕ್ಷಾ ಸಮಿತಿ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಸ್ವಚ್ಛತೆಗೆ ಆದ್ಯತೆ ನೀಡಿ: ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಬಡ ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಹೆಚ್ಚಿನ ನಿಗಾ ವಹಿಸಬೇಕು. ಆಸ್ಪತ್ರೆಯಲ್ಲಿ ಮೂಲಸೌಲಭ್ಯ ಗಳ ಅಭಿವೃದ್ಧಿಗೆ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ವೆಂಕಟ್‌ರಾಜ, ನೂತನ ಆರೋಗ್ಯ ರಕ್ಷಾ ಸಮಿತಿ ಸದಸ್ಯರನ್ನು ಅಭಿನಂದಿಸಿ, ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡೋಣ, ಯಾವುದೇ ಲೋಪಗಳಾಗ ದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.
ಆರೋಗ್ಯ ರಕ್ಷ ಸಮಿತಿ ನಾಮನಿರ್ದೇಶಿತರು:
ರಾಜ್ಯ ಸರ್ಕಾರ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಮಾಲೂರು ತಾಲೂಕಿನ ದೊಡ್ಡಶಿವಾರದ ಬಾಬು ರೆಡ್ಡಿ, ನಗರದ ಗೌರಿಪೇಟೆಯ ಸಿ.ಮಂಜುನಾಥ್, ಬೇತಮಂಗಲದ ಅರುಣ್ ಕುಮಾರ್, ಕೋಲಾರದ ರಾಮದೇವರ ಗುಡಿ ಬೀದಿಯ ಕೆ.ಎಲ್.ಜಗದೀಶ್, ಮಾಲೂರು ತಾಲೂಕು ಎಳೆಸಂದ್ರಹಳ್ಳಿಯ ವೈ.ಎನ್. ತಿಮ್ಮ ರಾಯಪ್ಪ, ಬಂಗಾರಪೇಟೆ ತಾಲೂಕು ದೊಡ್ರಹಳ್ಳಿಯ ವೆಂಕಟರತ್ನಮ್ಮ, ಮುಳಬಾಗಿ ಲಿನ ಎಂ. ಪ್ರಸಾದ್, ಕೋಲಾರದ ಮಿಥುನ್ ಎಂ.ಜೈನ್ ಅವರನ್ನು ನಾಮ ನಿರ್ದೇಶನ ಗೊಳಿಸಿದ್ದಾರೆ.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮಾ, ದಿಶಾ ಸಮಿತಿ ಸದಸ್ಯ ಅಪ್ಪಿನಾರಾಯಣಸ್ವಾಮಿ ಸೇರಿದಂತೆ ಎಲ್ಲ ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ತಾಲೂಕು ವೈದ್ಯಾಧಿಕಾರಿಗಳು, ತಾಲೂಕು ಆಸ್ಪತ್ರೆಗಳ ಮುಖ್ಯಸ್ಥರು ಹಾಜರಿದ್ದರು.
ಆಸ್ಪತ್ರೆಯಲ್ಲಿನ ಸೇವೆಯನ್ನು ಮಾನವೀಯ ನೆಲಗಟ್ಟಿನಲ್ಲಿ ಜೀವ ಉಳಿಸುವ ಕೆಲಸವೆಂದು ಬದ್ಧತೆಯಿಂದ ಮಾಡಬೇಕು. ಯಾವುದೇ ಆಮಿಷಗಳಿಗೆ ಒಳಗಾಗದಿರಿ. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಮತ್ತಷ್ಟು ಸೌಲಭ್ಯಗಳು ರೋಗಿಗಳಿಗೆ ಸಿಗುವಂತಾಗಬೇಕು.
●ಎಸ್.ಮುನಿಸ್ವಾಮಿ, ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.