ದುಬಾರಿ ಬೆಲೆಗೆ ಮಾಸ್ಕ್ ಮಾರಾಟ: ದಂಡ
Team Udayavani, Apr 1, 2020, 3:11 PM IST
ಕೋಲಾರ: ಕೋವಿಡ್ 19 ವೈರಸ್ ತಡೆಯಲು ಸುರಕ್ಷತೆಗಾಗಿ ಬಳಸುವ ಮಾಸ್ಕ್ ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ನಾಲ್ಕು ಔಷಧಿ ಅಂಗಡಿ ಗಳಿಗೆ ತಲಾ 5 ಸಾವಿರ ರೂ. ದಂಡವನ್ನು ವಿಧಿಸಲಾಗಿದೆ.
ಆಹಾರ ನಿರೀಕ್ಷಕರು, ತೂಕ ಮತ್ತು ಅಳತೆ ಇಲಾಖೆ ಸಿಬ್ಬಂದಿ ಹಾಗೂ ಔಷಧಿ ನಿಯಂತ್ರಣಾಧಿಕಾರಿಗಳ ಸಹಭಾಗಿತ್ವದಲ್ಲಿ ಕಾರ್ಯಾಚರಣೆ ನಡೆದು ನಗರದ ಏಳು ಔಷಧಿ ಅಂಗಡಿಗಳಿಗೆತೆರಳಿ ಪರಿಶೀಲಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ದುಬಾರಿ ಬೆಲೆಗೆ ಮಾಸ್ಕ್ಗಳನ್ನು ಮಾರಾಟ ಮಾಡುತ್ತಿದ್ದ ಜಂ ಜಂ ಮೆಡಿಕಲ್ಸ್, ಆನಂದ್‌ಫಾರ್ಮ್, ಲಕ್ಷ್ಮೀ ಮೆಡಿಕಲ್ಸ್ ಹಾಗೂ ಶ್ರೀಕರ ಮೆಡಿಕಲ್ಸ್‌ಗಳಿಗೆ ತಲಾ 5 ಸಾವಿರ ರೂ. ದಂಡವನ್ನು ವಿಧಿಸಲಾಗಿದೆ.
ಜಿಲ್ಲೆಯ ಎಲ್ಲಾ ಔಷಧಿ ಅಂಗಡಿ ಮಾಲಿಕರು ಮಾಸ್ಕ್ ಹಾಗೂ ಸ್ಯಾನಿಟೈಜರ್ ಗಳನ್ನು ಸರಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡದೆಂದು, ಮಾಡಿದ್ದು ಕಂಡು ಬಂದರೆ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.