ನೀರಿನ ವಿಚಾರಕ್ಕೆ ಗ್ರಾಮಗಳ ಕಿತ್ತಾಟ
Team Udayavani, May 3, 2020, 6:00 PM IST
ಕೋಲಾರ: ತಾಲೂಕಿನ ತೊಟ್ಲಿ ಗ್ರಾಪಂ ವ್ಯಾಪ್ತಿಯ ಶೆಟ್ಟಿಕುಂಟೆ ಮತ್ತು ಕೆಂಬತ್ತನಹಳ್ಳಿ ಗ್ರಾಮಗಳ ಗ್ರಾಮಸ್ಥರ ನಡುವೆಯೇ ನೀರಿಗಾಗಿ ಕಿತ್ತಾಟ ನಡೆದಿದ್ದು, ಕೊನೆಗೆ ಗ್ರಾಮಾಂತರ ಠಾಣೆ ಪೊಲೀಸರು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಿದ್ದಾರೆ.
ಕಳೆದ 2 ವರ್ಷಗಳಿಂದಲೂ ಶೆಟ್ಟಿಕುಂಟೆ ಗ್ರಾಮದ ಬೋರ್‌ವೆಲ್‌ನಿಂದ ಕೆಂಬತ್ತನಹಳ್ಳಿ ಗ್ರಾಮಕ್ಕೆ ನೀರು ಪೂರೈಸಲಾಗುತ್ತಿದ್ದು, ಇದೀಗ ಶೆಟ್ಟಿಕುಂಟೆ ಗ್ರಾಮದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ನೀರು ನೀಡುವಂತೆ ಕೆಂಬತ್ತನಹಳ್ಳಿಯವರನ್ನು ಕೇಳಲಾಗಿ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಎರಡೂ ಗ್ರಾಮಗಳ ಗ್ರಾಮಸ್ಥರ ನಡುವೆ ಮಾತಿನ ಚಕಮಕಿಗಳು ಆರಂಭವಾಗಿವೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಕಿರಣ್ ಮತ್ತು ಸಿಬ್ಬಂದಿ ಭೇಟಿ ನೀಡಿ ಗುಂಪು ಚದುರಿಸಿ, ಎರಡೂ ಗ್ರಾಮಗಳ ಮುಖಂಡರನ್ನು ಸೇರಿಸಿ, ಬೋರ್‌ವೆಲ್‌ಅನ್ನು ತಲಾ ಒಂದೊಂದು ದಿನದಂತೆ 15 ದಿನಗಳು ಬಳಸಿಕೊಳ್ಳಿ, ಆ ವೇಳೆಗೆ ಗ್ರಾಪಂನಿಂದ ಹೊಸ ಬೋರ್‌ವೆಲ್ ಕೊರೆಯಿಸಿದರೆ ಅನುಕೂಲವಾಗುತ್ತದೆ ಎಂದು ತಿಳಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.