ಚಿದಾನಂದ್‌ರ ಗೆಲುವಿಗೆ ಸಹಕರಿಸಲು ಮನವಿ
Team Udayavani, Oct 3, 2020, 2:29 PM IST
ಶ್ರೀನಿವಾಸಪುರ: ಕಳೆದ 13 ವರ್ಷಗಳಿಂದ ಶಿಕ್ಷಣ, ಸಾಮಾಜಿಕ, ಇತರೆ ಸಮಸ್ಯೆಗಳಿಗೆ ಸದನದ ಒಳಗೆ ಮತ್ತು ಹೊರಗೆ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಬಿಜೆಪಿ ಪಕ್ಷ ನನಗೆ ಕೊಟ್ಟ ಗೌರವಕ್ಕೆ ಆಭಾರಿಯಾಗಿದ್ದೇನೆ. ಅದೇ ಗೌರವ ಉಳಿಯಲು ಶಿಕ್ಷಣ ಕ್ಷೇತ್ರದಲ್ಲಿನ ಸಂಘಗಳು ಈ ಬಾರಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಬಿಜೆಪಿ ಪಕ್ಷದ ಅಭ್ಯರ್ಥಿ ಚಿದಾನಂದ್ ಎಂ.ಗೌಡ ಅವರನ್ನು ಗೆಲ್ಲಿಸಿಕೊಡಬೇಕೆಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದರು.
ಶ್ರೀನಿವಾಸಪುರ ತಾಲೂಕು ಪುಂಗನೂರು ಕ್ರಾಸ್‌ನಲ್ಲಿರುವ ಶ್ರೀ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಚಿದಾನಂದ್‌ಎಂ.ಗೌಡ ಪರವಾಗಿ ಶಿಕ್ಷಣ ಸಂಘದ ಪ್ರತಿನಿಧಿಗಳ ಕರೆದಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ನಾನು ಸ್ಪರ್ಧೆ ಮಾಡಿದ ಹಿಂದಿನ ಎಲ್ಲಾ ಚುನಾವಣೆಗಳಲ್ಲಿ ನನ್ನನ್ನು ಬೆಂಬಲಿಸಿ ಆಶೀರ್ವಾದ ಮಾಡಿದ್ದೀರಿ. ನಿಮ್ಮ ಸಹಕಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡಲು ಸಾಧ್ಯವಾಗಿದೆ ಎಂದರೆ ನೀವು ಕೊಟ್ಟ ಶಕ್ತಿಯಾಗಿದೆ. ಅದೇ ರೀತಿ ಬಿಜೆಪಿ ಸರ್ಕಾರ ನನ್ನ ಮೇಲೆ ವಿಶ್ವಾಸವಿರಿಸಿ ಸ್ಥಾನಮಾನ ಕೊಟ್ಟಿದೆ. ಹಾಗಾಗಿ ತಾನು ಸೇರಿದಂತೆ ನೀವು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಬೇಕಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್‌ಮಾತನಾಡಿ, ವೈ.ಎ.ನಾರಾಯಣಸ್ವಾಮಿರವರು ಕಳೆದ ಅಧಿಕಾರಅವಧಿಗಳಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆಮಾತ್ರ ಮೀಸಲಾಗದೆ ಕೋಲಾರ ಜಿಲ್ಲೆಯಲ್ಲಿ ರೈತರ, ನೀರಾವರಿ ಸಮಸ್ಯೆ ಸೇರಿ ಇತ್ಯಾದಿಯಾಗಿ ಜಟಿಲ ಸಮಸ್ಯೆಗಳಬಗ್ಗೆ ಗಮನಹರಿಸಿ ಕೆಲಸ ಮಾಡಿದ್ದಾರೆ ಎಂದರು.
ವೈ.ನಾರಾಯಣಸ್ವಾಮಿ ರವರು ನಮಗೆ ನಾಯಕರು. ಅವರಹಾದಿಯಲ್ಲಿ ನಡೆಯಬೇಕು. ಗೆಲುವಿನವಿಶ್ವಾಸದಿಂದ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಯನ್ನು ಕರೆತಂದಿದ್ದಾರೆ.ಅವರನ್ನು ಗೆಲ್ಲಿಸಬೇಕುಎಂದುಕೋರಿದರು. ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದ್ ಗೌಡ ಮತಯಾಚಿಸಿದರು. ಶಿಕ್ಷಕರ ಹಾಗೂ ನೌಕರರ ಸಂಘದ ಪ್ರತಿನಿಧಿಗಳಾದ ಅಶೋಕ್, ಎಂ.ನಾಗರಾಜ್,ಜಿ.ಎನ್.ಗೋವಿಂದರೆಡ್ಡಿ, ಕೆ.ಎನ್.ರಾಮಚಂದ್ರ, ಆರ್. ಸುಬ್ರಹ್ಮಣಿ, ಮುಖಂಡ ಕೆ.ಕೆ.ಮಂಜು, ಕಿಟ್ಟಣ್ಣ,ಬಲರಾಮೇಗೌಡ, ತಿಪ್ಪಣ್ಣ, ಶಂಕರ್ ಡಿ.ಆರ್. ರಘುನಾಥರೆಡ್ಡಿ, ಅಶ್ವತ್ಥರೆಡ್ಡಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.