ಔಷಧಿ ಚೀಟಿ ಬರೆದರೆ ಕ್ರಮ
Team Udayavani, May 17, 2019, 3:13 PM IST
ಮುಳಬಾಗಿಲು: ರೋಗಿಗಳಿಗೆ ಹೊರಗಡೆಯಿಂದ ಔಷಧಿ ತರಲು ಚೀಟಿ ಬರೆದುಕೊಟ್ಟರೆ ಆ ವೈದ್ಯರ ವಿರುದ್ಧ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಯಾರೇ ಆಗಲೀ ಕೆರೆಗಳಲ್ಲಿ ಏನೇ ಚಟುವಟಿಕೆ ಕೈಗೊಳ್ಳಬೇಕಾದರೂ ಸರ್ಕಾರದಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕೆಂದು ಜಿಪಂ ಸಿಇಒ ಜಿ.ಜಗದೀಶ್ ಎಚ್ಚರಿಕೆ ನೀಡಿದರು.
ಗುರುವಾರ ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಅವರು, ಮೆಡಿಕಲ್ ಸ್ಟೋರ್‌ನಲ್ಲಿ ನಾಯಿ ಕಡಿತಕ್ಕೆ ಔಷಧಿ ದಾಸ್ತಾನು ಇಲ್ಲವೆಂದು ನಾಮಫಲಕ ಹಾಕಿದ್ದನ್ನು ಕಂಡು ಫಾರ್ಮಾಸಿಸ್ಟ್ ಜಮೀರ್‌ಅಹಮದ್‌ರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಅಲ್ಲದೇ, ಔಷಧಿಗಳ ಖರೀದಿಸಲು ಈಗಾಗಲೇ ಜಿಪಂ ಅನುದಾನ 10 ಲಕ್ಷ ಲಭ್ಯವಿದ್ದರೂ ಔಷಧಿಗಳನ್ನು ದಾಸ್ತಾನು ಮಾಡಿಕೊಳ್ಳುವುದನ್ನು ಬಿಟ್ಟು ನಾಮಫಲಕ ಹಾಕಿರುವುದೇಕೆ ಎಂದು ಪ್ರಶ್ನಿಸಿ, ನಾಮಫಲಕ ತೆಗೆಸಿಹಾಕಿ 24 ಗಂಟೆಯೊಳಗಾಗಿ ಎಲ್ಲಾ ಔಷಧಿಗಳನ್ನು ದಾಸ್ತಾನು ಮಾಡಿಕೊಳ್ಳಲು ಗಡುವು ನೀಡಿದರು.
ಸ್ವಚ್ಛತೆ ಕಾಪಾಡಿ: ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಅಭಾವ ಕಂಡು ಪೌರಾಯುಕ್ತ ಎಸ್.ರಾಜು ಅವರನ್ನು ಸ್ಥಳಕ್ಕೆ ಕರೆಸಿ ಪ್ರತಿನಿತ್ಯ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು. ಹೆರಿಗೆ ವಿಭಾಗ ಪರಿಶೀಲಿಸಿ ರೋಗಿಗಳಿಂದ ಮಾಹಿತಿ ಪಡೆದು ಮಹಿಳಾ ವೈದ್ಯರು ಉತ್ತಮವಾಗಿ ಕಾರ್ಯನಿರ್ವಹಿಸಿರುವುದನ್ನು ಕಂಡು ಅಭಿನಂದಿಸಿದರಲ್ಲದೇ ತಾವು ಮುಂದಿನ ವಾರ ಬರುವಷ್ಟರಲ್ಲಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕೆಂದು ತಾಕೀತು ಮಾಡಿದರು.
ದೇವರಾಯಸಮುದ್ರ ಗ್ರಾಪಂ ವ್ಯಾಪ್ತಿಯ ಮಲಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ನೀರಿನ ಸಮಸ್ಯೆ ಪರಿಶೀಲಿಸಿದರು. ಗ್ರಾಮದಲ್ಲಿ ಈಗಾ ಗಲೇ ಸರ್ಕಾರದಿಂದ ಕುಡಿಯುವ ನೀರಿನ ಸೌಕರ್ಯಕ್ಕಾಗಿ 5 ಕೊಳವೆ ಬಾವಿ ಕೊರೆಸ ಲಾಗಿದ್ದು 3 ಕೊಳವೆ ಬಾವಿಗಳು ಬತ್ತಿ ಹೋಗಿ ವೆ. ಇನ್ನೆರಡರಲ್ಲಿ ನೀರು ಬರುತ್ತಿದೆ. ಆದರೂ ನೀರು ಕೊರತೆಯುಂಟಾಗಿದ್ದು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಗ್ರಾ ಮದಲ್ಲಿ 500 ರೂ.ಗಳಿಗೆ ನೀರು ಸರಬರಾಜು ಮಾಡಲು ಟ್ಯಾಂಕರ್‌ಗಳು ಯಾರೂ ಬರುತ್ತಿಲ್ಲ ಎಂದು ಪಿಡಿಒ ತಿಳಿಸಿದ್ದಾರೆ.
ಹೀಗಾಗಿ ಬೇರೆ ಗ್ರಾಮಗಳಿಂದ ಟ್ಯಾಂಕರ್ ತರಿಸಿ ನೀರು ಸರಬರಾಜು ಮಾಡುವಂತೆ ತಿಳಿಸಿದರಲ್ಲದೇ ಮಲ್ಲಪನಹಳ್ಳಿ ಕೆರೆಯಲ್ಲಿ ಗುತ್ತಿಗೆದಾರನೊಬ್ಬ ಅನಧಿಕೃತವಾಗಿ ಗೋಕುಂಟೆ ಮಾಡಲಾಗಿದ್ದು ಅವರ ವಿರುದ್ಧ ಪ್ರಕರಣ ದಾಖಲು ಮಾಡಲು ಪಿಡಿಒ ರಘುಪತಿಗೆ ಸೂಚಿಸಿದರು.
ಅಲ್ಲದೇ ಮಂಡಿಕಲ್ ಗ್ರಾಮದ ಕಲ್ಯಾಣಿ ಅಭಿವೃದ್ಧಿ ಕುರಿತು ಪ್ರತಿಕ್ರಿಯಿಸಿದ ಸಿಇಒ ಈ ವರ್ಷ ಜಲಾಮೃತ ಯೋಜನೆಯಲ್ಲಿ ಹಳ್ಳಿಗಳಲ್ಲಿನ ಕಲ್ಯಾಣಿ ಮತ್ತು ಗೋಕುಂಟೆ ಪುನಶ್ಚೇತನಗೊಳಿಸಿ ಜಲಮೂಲಗಳನ್ನು ಸಂರಕ್ಷಣೆ ಮಾಡಲಾಗುವುದೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.