ಜಿಲ್ಲೆಯ 6 ಕ್ಷೇತ್ರದಲ್ಲಿ ಬಿಜೆಪಿಯೇ ಗೆಲ್ಲಬೇಕು
Team Udayavani, Sep 19, 2022, 4:08 PM IST
ಕೋಲಾರ: ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲೂ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ಗೆಲ್ಲಲು ಪಣ ತೊಟ್ಟಿದ್ದೇವೆ. ಪ್ರಬಲ ಪೈಪೋಟಿ ನೀಡುವ ಮೂಲಕ ಗೆಲುವು ಸಾಧಿಸಿಯೇ ಸಿದ್ದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಘೋಷಿಸಿದರು.
ಬಿಜೆಪಿಯ ಜನಸ್ಪಂದನಾ ಸಮಾವೇಶ ಯಶಸ್ವಿ ಯಾದ ಹಿನ್ನೆಲೆಯಲ್ಲಿ ಕೋಲಾರ ತಾಲೂಕಿನ ಕೆಂದಟ್ಟಿ ಸಮೀಪ ನಡೆದ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಕೋಲಾರ ಕ್ಷೇತ್ರದ 14 ಗ್ರಾಪಂನಲ್ಲಿ ಬಿಜೆಪಿ ಧ್ವಜ ಹಾರಾಡಿದೆ ಎಂದು ಹೇಳಿದರು.
ಸೂಕ್ತ ವ್ಯಕ್ತಿಗೆ ಬಿ ಫಾರಂ: ಕೋಲಾರ ಕ್ಷೇತ್ರದಿಂದ ಶಾಸಕರು ಬರಲೇಬೇಕು. ಅದು ನಿಮ್ಮಗಳ ಮುಖಾಂತರ ಆಗಬೇಕು. ನೀವಿಲ್ಲದಿದ್ದರೆ ನಾವಿಲ್ಲ. ಸಂಘಟನೆ ಬಲಪಡಿಸಿ ವಿಧಾನಸಭೆ ಪ್ರವೇಶಿಸಲು ಸಹಕರಿಸಿ. ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿಯಾಗಿ ನೆಲೆಯೂರುತ್ತಿದೆ. ನಾನು ಅನ್ನುವ ಬದಲು ನಾವು ಅಂದುಕೊಂಡು ಎಲ್ಲರೂ ಒಟ್ಟಿಗೆ ಹೋಗೋಣ. ಪಕ್ಷವು ಸೂಕ್ತ ವ್ಯಕ್ತಿಗಳಿಗೇ ಬಿ ಫಾರಂ ನೀಡುತ್ತದೆ. ಅದರ ಬಗ್ಗೆ ಚಿಂತೆ ಬೇಡ ಎಂದು ಹೇಳಿದರು.
ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆ: ಜಿಲ್ಲೆಯ 5 ತಾಲೂಕುಗಳಲ್ಲಿ ಸರ್ವಾಧಿಕಾರಿ ಧೋರಣೆ ಇದೆ. ಎಲ್ಲಾ ಕಡೆ ಬಿಜೆಪಿ ಗೆಲ್ಲಿಸುವ ಮೂಲಕ ಕಡಿವಾಣ ಹಾಕೋಣ. ಅಭಿವೃದ್ಧಿ ಕಡೆಗೆ ಆದ್ಯತೆ ನೀಡುವ ಜನಪ್ರತಿನಿ ಧಿಗಳು ಗೆಲ್ಲಬೇಕು. ನಿಮ್ಮನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ. ಚುನಾವಣೆಗೆ ಬಳಸಿಕೊಂಡು ಕೈಬಿಡುವುದು ಸರಿಯಲ್ಲ ಎಂದ ಅವರು, ಬಿಜೆಪಿ ಜನಸ್ಪಂದನಾ ಸಮಾವೇಶಕ್ಕೆ ನಮ್ಮ ವರ್ತೂರು ಪ್ರಕಾಶ್ ಹಾದಿಯಾಗಿ ಪ್ರತಿಯೊಬ್ಬರೂ ಶ್ರಮಿಸಿರು ವುದಾಗಿ ಹೇಳಿದರು.
ದುಷ್ಟ ಶಕ್ತಿಗಳ ಸಂಹಾರ ಮಾಡಿ: ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ಡಿಸಿಸಿ ಬ್ಯಾಂಕ್ ಮೂಲಕ ಸರ್ಕಾರದ ಹಣವನ್ನು ತಮ್ಮದೆನ್ನುವ ರೀತಿ ಸಾಲ ನೀಡುತ್ತಿರುವ ದುಷ್ಟ ಶಕ್ತಿಗಳ ಸಂಹಾರಕ್ಕಾಗಿ ನಿಮಗೆ ಖಡ್ಗ ನೀಡಲಾಗಿದೆ. ಆ ಮೂಲಕ ಅವರ ಆಟಗಳಿಗೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದರು. ಔತಣಕೂಟ ಏರ್ಪಾಟು: ಸಮಾವೇಶಕ್ಕೆ 900 ಬಸ್ ಕರೆದುಕೊಂಡು ಹೋಗಿದ್ದ ಹಿನ್ನೆಲೆಯಲ್ಲಿ ಕೃತಜ್ಞತೆ ಸಭೆ ಆಯೋಜಿಸುವಂತೆ ಮಂತ್ರಿಗಳು ಆದೇಶ ಮಾಡಿ ದ್ದರು. ಅವರದ್ದೇ ಖರ್ಚಿನಲ್ಲಿ ಪಕ್ಷದ ಶಿಸ್ತಿನ ಸಿಪಾಯಿ ಯಾಗಿ ಔತಣಕೂಟ ಏರ್ಪಾಟು ಮಾಡಿದ್ದಾರೆ ಎಂದರು.
ಸಚಿವರೇ ಜಿಲ್ಲೆಗೆ ಸುಪ್ರಿಂ ನಾಯಕ: ಕೆಜಿಎಫ್ ಮಾಜಿ ಶಾಸಕ ವೈ.ಸಂಪಂಗಿ ಮಾತನಾಡಿ, ಉಸ್ತುವಾರಿ ಸಚಿವರು ನಮ್ಮ ಜಿಲ್ಲೆಯಲ್ಲಿ ಸ್ಪರ್ಧಿಸಲ್ಲ. ಆದರೂ, ಪಕ್ಷ ಬಲಪಡಿಸಲು ಪಣತೊಟ್ಟು ಇಲ್ಲಿಗೆ ಬಂದಿದ್ದಾರೆ. ಇವರೇ ನಮ್ಮ ಜಿಲ್ಲೆಗೆ ಸುಪ್ರೀಂ. ಯಾರು, ಯಾರಿಗೂ ಅಂಜಬೇಕಾಗಿಲ್ಲ ಎಂದು ತಿಳಿಸಿದರು.
ಸಚಿವರ ನೇತೃತ್ವದಲ್ಲೇ ಚುನಾವಣೆ ನಡೆಯಬೇಕು. ನಾಟಕಗಳು ಬೇಡ, ಸಂಸದರಾಗಲಿ, ನಾನಾಗಲಿ, ಇನ್ನೊಬ್ಬರಾಗಲಿ ಉಸ್ತುವಾರಿ ಸಚಿವರಿಗೆ ಗೌರವ ಕೊಡಲೇ ಬೇಕು. ಚುನಾವಣೆಗೆ ಹೋದಾಗ ಜನರ ಆಶೀರ್ವಾದ ಇದ್ದರೆ ಗೆಲ್ಲುತ್ತೇವೆ ಎಂದು ಹೇಳಿದರು.
1 ಲಕ್ಷ ಜನಕ್ಕೆ ನಾನೇ ಊಟ ಹಾಕಿಸುತ್ತೇನೆ: ಮಾಜಿ ಶಾಸಕ ಕೆ.ಎಸ್.ಮಂಜುನಾಥ್‌ಗೌಡ ಮಾತನಾಡಿ, ಎಂಎಲ್ಸಿ ಚುನಾವಣೆ, ದೊಡ್ಡಬಳ್ಳಾಪುರದ ಸಮಾವೇಶ ನಮ್ಮಲ್ಲಿ ಹುಮ್ಮಸ್ಸು ತಂದಿದೆ. ಮೊದಲು ಬಿಜೆಪಿ ಹೀಗೆ ಇರಲಿಲ್ಲ. ಮುಂದಿನ ಚುನಾವಣೆಯಲ್ಲಿ ಕನಿಷ್ಠ 4 ಸ್ಥಾನ ಗೆಲ್ಲಿಸಿಕೊಳ್ಳಬೇಕಿದೆ. ಮುಂದೆ 1 ಲಕ್ಷ ಜನಕ್ಕೆ ನಾನೇ ಊಟ ಹಾಕಿಸುತ್ತೇನೆ. ನೀವೂ ಹಾಗೂ ಸಚಿವ ಡಾ. ಸುಧಾಕರ್ ಜವಾಬ್ದಾರಿ ತೆಗೆದುಕೊಂಡರೆ ಎರಡೂ ಜಿಲ್ಲೆಗಳಲ್ಲಿ ಇನ್ನಷ್ಟು ಸ್ಥಾನ ಗೆಲ್ಲಬಹುದು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್, ಡಬಲ್ ಎಂಜಿನ್ ಸರಕಾರ ತ್ರಿಬಲ್ ಎಂಜಿನ್ ಸರಕಾರ ಆಗಬೇಕಾದರೆ ಮುಂದಿನ ಚುನಾವಣೆಗಳಲ್ಲಿ ಇನ್ನಷ್ಟು ನಾವು ಅಭಿವೃದ್ಧಿ ಹೊಂದಬೇಕು ಎಂದು ಕರೆ ನೀಡಿದರು. ಸಭೆಗೂ ಮುನ್ನ ಸಚಿವರಿಗೆ ಸೇಬಿನ ಹಾರವನ್ನು ಕ್ರೇನ್ ಮೂಲಕ ಹಾಕಿ ತೆರೆದ ವಾಹನದಲ್ಲಿ ವೇದಿಕೆ ಬಳಿಗೆ ಕರೆತರಲಾಯಿತು. ಸಭೆಯಲ್ಲಿ ಮಾಜಿ ಶಾಸಕರಾದ ಬಿ.ಪಿ.ವೆಂಕಟ ಮುನಿಯಪ್ಪ, ಎಂ.ನಾರಾಯಣಸ್ವಾಮಿ, ಮಾವು ಅಭಿವೃದ್ಧಿ ಮಂಡಳಿ ಅಧ್ಯಕ್ಷ ವಾಸುದೇವ್, ಕೆಯುಡಿಎ ಅಧ್ಯಕ್ಷ ವಿಜಯ್‌ಕುಮಾರ್, ಜಿಪಂ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಮಾಜಿ ಸದಸ್ಯರಾದ ಅರುಣ್ ಪ್ರಸಾದ್, ರೂಪಶ್ರೀ ಮಂಜುನಾಥ್, ಅಶ್ವಿನಿ ಸಂಪಂಗಿ, ವೆಂಕಟೇಶ್‌ಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಡಿ. ರಾಮಚಂದ್ರೇಗೌಡ, ಕೆಜಿಎಫ್ ಟಿಎಪಿಸಿಎಂಎಸ್ ಅಧ್ಯಕ್ಷ ಪ್ರವೀಣ್, ಮುಖಂಡರಾದ ನಾರಾಯಣ ಸ್ವಾಮಿ, ಬೆಗ್ಲಿ ಸೂರ್ಯಪ್ರಕಾಶ್, ಬಂಕ್ ಮಂಜು, ಮಮತಮ್ಮ, ಸರಸ್ವತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.