ರಾಜ್ಯದ ಸಮಗ್ರ ಅಭಿವೃದ್ಧಿ ಎಚ್‌ಡಿಕೆ ಪಣ


Team Udayavani, Mar 26, 2023, 3:26 PM IST

tdy-18

ಕೋಲಾರ: ಡಾ.ಬಿ.ಆರ್‌.ಅಂಬೇಡ್ಕರರ ಸಂವಿಧಾನದ ಆಶಯಗಳನ್ನು ಸಮಾಜಕ್ಕೆ ನೀಡುವಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ವಿಫಲವಾಗಿವೆ ಎಂದು ಶಾಸಕ ಬೋಜೇಗೌಡ ಅಸಮಧಾನ ವ್ಯಕ್ತಪಡಿಸಿದರು.

ನಗರದ ಬೈರೇಗೌಡ ನಗರದ ಮೈದಾನದಲ್ಲಿ ಪ್ರಜ್ಞಾವಂತ ದಲಿತ ಸಂಘಟನೆಗಳ ಒಕ್ಕೂಟದಿಂದ ಶನಿವಾರ ನಡೆದ ಜೆಡಿಎಸ್‌ ಎಸ್ಸಿ ,ಎಸ್ಟಿ ವಿಭಾಗದ ಬೃಹತ್‌ ಸಮಾವೇಶದಲ್ಲಿ ಮಾತನಾಡಿ, ಆಸೆಗಾಗಿ ಎಚ್‌.ಡಿ.ಕುಮಾರಸ್ವಾಮಿ ಸಿಎಂ ಆಗುತ್ತಿಲ್ಲ. ರಾಜ್ಯದ ಸಮಗ್ರ ಅಭಿವೃದ್ಧಿ ಮಾಡಬೇಕೆಂದು ಪಣ ತೊಟ್ಟಿದ್ದಾರೆ. ಎಚ್‌ಡಿಕೆ ಸಿಎಂ ಆಗಬೇಕೆಂದು ನೀವೆಲ್ಲರೂ ಮಾತಿನಲ್ಲಿ ಹೇಳಿದರೆ ಸಾಲದು. ಕೋಲಾರ ಕ್ಷೇತ್ರದಲ್ಲಿ ಅಭ್ಯರ್ಥಿ ಸಿಎಂಆರ್‌ ಶ್ರೀನಾಥ್‌ ಅಲ್ಲ, ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಭಾವಿಸಿ ಮತ ನೀಡಬೇಕೆಂದು ಕೋರಿದರು.

ಪ್ರಾದೇಶಿಕ ಪಕ್ಷಗಳಿಂದ ಸಾಕಷ್ಟು ಅಭಿವೃದ್ಧಿ : ಕೊಟ್ಟ ಮಾತಿನಂತೆ ನಡೆಯುವ ಏಕೈಕ ನಾಯಕ ಎಚ್‌ಡಿಕೆ ಆಗಿದ್ದು, ಪಂಚರತ್ನ ಯೋಜನೆ ಕಾರ್ಯಗತ ಮಾಡಲು ಮತ ನೀಡಿ ಗೆಲ್ಲಿಸಬೇಕೆಂದು ಕೋರಿದ ಅವರು, ನೆರೆಯ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳಿಂದ ಸಾಕಷ್ಟು ಅಭಿವೃದ್ಧಿ ಆಗಿದೆ. ಹಾಗಾಗಿ ಈ ಬಾರಿ ಜೆಡಿಎಸ್‌ಗೆ ಅಧಿಕಾರ ನೀಡಿ ಎಂದರು.

ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ದಲಿತ ಸಮುದಾಯಗಳನ್ನು ಬಹಳಷ್ಟು ಬಳಸಿಕೊಂಡು ಅನ್ಯಾಯ ಮಾಡಿರುವ ನಿದರ್ಶನಗಳಿವೆ. ಆದರೆ ದಲಿತ, ಸಾಮಾನ್ಯ ಕೂಲಿ ಕಾರ್ಮಿಕನ ಮಗನಾದ ನನಗೆ ಟಿಕೆಟ್‌ ನೀಡಿ ಶಾಸಕ ಸ್ಥಾನ ನೀಡಿದ್ದು ದೇವೇಗೌಡ ಹಾಗೂ ಕುಮಾರಸ್ವಾಮಿ ಎಂದು ಹೇಳಿದರು.

ಅಲ್ವಾವಧಿಯಲ್ಲಿ ಏನು ಮಾಡಲು ಸಾಧ್ಯವಿಲ್ಲ: ಎತ್ತಿನಹೊಳೆ ಮೂಲಕ ಶುದ್ಧ ನೀರು ಈ ಭಾಗಕ್ಕೆ ಹರಿಸಲು ಸಿಎಂ ಆಗಿದ್ದ ವೇಳೆ ಮುಂದಾದರೂ ಅಲ್ವಾವಧಿಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಅವರಿಗೆ ಅಧಿಕಾರ ನೀಡಿದರೆ 1 ವರ್ಷದಲ್ಲಿ ಪೂರ್ಣಗೊಳಿಸಲಿದ್ದಾರೆ. ಸಿಎಂಆರ್‌ ಶ್ರೀನಾಥ್‌ ಉತ್ತಮ ವ್ಯಕ್ತಿಯಾಗಿದ್ದು, 5 ವರ್ಷಕ್ಕೆ ಸಿಗುವ ವ್ಯಕ್ತಿಯಲ್ಲ, ಪ್ರತಿದಿನ ಸಿಗುವ ವ್ಯಕ್ತಿ ಹಾಗಾಗಿ ಗೆಲ್ಲಿಸಿಕೊಳ್ಳಿ ಎಂದರು.

ಶಾಸಕ ಇಂಚರ ಗೋವಿಂದರಾಜು ಮಾತನಾಡಿ, ಎರಡೂ ಜಿಲ್ಲೆಗಳ ಜವಾಬ್ದಾರಿ ನನಗೆ ನೀಡಿ ಪಕ್ಷ ಸಂಘಟಿಸಲು ಎಚ್‌ಡಿಕೆ ಸೂಚಿಸಿದ್ದರು. ಅಂತೆಯೇ ಜೆಡಿಎಸ್‌ ಬಲಗೊಂಡಿದೆ. ಚುನಾವಣೆಯಲ್ಲಿ ಜಿಲ್ಲೆಯ 6 ಅಭ್ಯರ್ಥಿಗಳನ್ನು ಗೆಲ್ಲಿಸಲು ಪಣತೊಡಬೇಕೆಂದು ಮನವಿ ಮಾಡಿದರು.

ಕೋಲಾರ ಅಭ್ಯರ್ಥಿ ಸಿಎಂಆರ್‌ ಶ್ರೀನಾಥ್‌ ಮಾತನಾಡಿ, ಕಳೆದ 15 ವರ್ಷಗಳಿಂದ ಆಸೆ ಆಮಿಷ ತೋರಿಸಿ ಆಡಳಿತ ನಡೆಸಿದ ಪಕ್ಷಗಳು ನಗರವನ್ನು ಅಭಿವೃದ್ಧಿ ವಿಚಾರದಲ್ಲಿ ಹಾಳು ಮಾಡಿರುವುದು ದುರಂತದ ಸಂಗತಿ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿ ಕೋಲಾರವನ್ನು ಅಭಿವೃದ್ಧಿಯಲ್ಲಿ ಮಿನಿ ಬೆಂಗಳೂರನ್ನಾಗಿ ಅಭಿವೃದ್ಧಿಪಡಿಸಲು ಸಿದ್ಧನಿದ್ದು, ಮತ ನೀಡಿ ಒಂದು ಬಾರಿ ಅವಕಾಶ ನೀಡಿ ಎಂದರು. ಮುಳಬಾಗಿಲು ಅಭ್ಯರ್ಥಿ ಸಮೃದ್ಧಿ ಮಂಜುನಾಥ್‌ ಮಾತನಾಡಿದರು.

ವೇದಿಕೆಯಲ್ಲಿ ಜೆಡಿಎಸ್‌ ಜಿಲ್ಲಾಧ್ಯಕ್ಷ ಬಣಕನಹಳ್ಳಿ ನಟರಾಜ್‌, ಮಾಜಿ ಎಂಎಲ್ಸಿ ತೂಪಲ್ಲಿ ಚೌಡರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ತಿರುಮಲೇಶ್‌, ತಾಲೂಕು ಅಧ್ಯಕ್ಷೆ ಕುರ್ಕಿ ರಾಜೇಶ್ವರಿ, ಕೋಚಿಮುಲ್‌ ನಿರ್ದೇಶಕ ವಡಗೂರು ಡಿ.ವಿ.ಹರೀಶ್‌, ಡಾ.ರಮೇಶ್‌, ವಕ್ಕಲೇರಿ ರಾಮು, ಮುಖಂಡರಾದ ಜಮೀರ್‌ ಪಾಷಾ ಬಾಲಾಜಿ ಚನ್ನಯ್ಯ, ಹೂಹಳ್ಳಿ ಪ್ರಕಾಶ್‌, ಬಾಲಗೋವಿಂದ್‌, ಬಾಬು ಮೌನಿ, ರಾಜು ಶ್ರೀನಿವಾಸಪ್ಪ ಮುಂತಾದವರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.