40% ಬಿಜೆಪಿ ಸರ್ಕಾರದವರು ನಮ್ಮ ಮೇಲೆ ಲಂಚದ ಆರೋಪ ಮಾಡ್ತಾರೆ
Team Udayavani, Mar 18, 2023, 2:56 PM IST
ಮಾಸ್ತಿ: ನನಗೆ ಸಿಕ್ಕಂತಹ ಅವಕಾಶದಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುವುದರ ಜತೆಗೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ ನಂಬಿಕೆ ಉಳಿಸಿಕೊಂಡಿದ್ದೇನೆ. ಮತ್ತೂಮ್ಮೆ ಅವಕಾಶ ನೀಡಿದರೆ ಮತ್ತಷ್ಟು ಅಭಿವೃದ್ಧಿ ಕಾರ್ಯ ಮಾಡುತ್ತೇನೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ಮಾಸ್ತಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ, ಆರೂವರೆ ಸಾವಿರ ಮತಗಳ ಲೀಡ್ ಕೊಟ್ಟು ನನ್ನ ಗೆಲುವಿಗೆ ಸಹಕಾರ ನೀಡಿದ ಮಾಸ್ತಿಗೆ ಹೆಚ್ಚಿನ ಕಾಳಜಿ ವಹಿಸಿ ವಿಶೇಷ ಅನುದಾನ ತಂದು ಅಭಿವೃದ್ಧಿಪಡಿಸಿದ್ದೇನೆ ಎಂದು ವಿವರಿಸಿದರು.
ಪ್ರವಾಸಿ ತಾಣವಾಗಿ ಅಭಿವೃದ್ಧಿ: ಡಾ.ಮಾಸ್ತಿ ಹೆಸರಿನಲ್ಲಿ ವಸತಿ ಶಾಲೆಗೆ 25 ಕೋಟಿ ರೂ. ಬಿಡುಗಡೆ, ರಸ್ತೆ ಕಾಮಗಾರಿ, ಹೈಮಾಸ್ಟ್ ದೀಪ, ಕೊಳವೆಬಾವಿ ಸೇರಿ ಹತ್ತು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಮುಂದೆ ಅವಕಾಶ ನೀಡಿದರೆ ಮಾಸ್ತಿಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುತ್ತೇನೆ ಎಂದು ಭರವಸೆ ನೀಡಿದರು.
ಸರ್ಕಾರ ಇದ್ದಾಗ ಏನ್ ಮಾಡಿದೆ ತಿಳಿಯಲಿ: ಚುನಾವಣೆ ಸಮೀಪಿಸುತ್ತಿದೆ, ಶಾಸಕರಾಗ ಬೇಕೆಂಬ ಆಸೆಯಿಂದ ಬಿಜೆಪಿ ನಾಯಕರು ಭಾಷಣದಲ್ಲಿ ನಂಜೇಗೌಡರು ತಾಲೂಕಿನ ರಸ್ತೆಗಳ ಗುಂಡಿ ಮುಚ್ಚಲಿಲ್ಲ, ಬಡವರಿಗೆ ಮನೆ ಕೊಟ್ಟಿಲ್ಲ ಎಂದು ಹೇಳುತ್ತಿದ್ದಾರೆ. ನನ್ನ ಸರ್ಕಾರ ಇದ್ದಾಗ ನಾನು ಏನು ಮಾಡಿದ್ದೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು ಎಂದು ತಿರುಗೇಟು ನೀಡಿದರು.
ನೀವು ಏನು ಮಾಡಿದ್ದೀರಿ ಪಟ್ಟಿ ಕೊಡಿ: ಸರ್ಕಾರ ನನಗೆ ಕೊಟ್ಟಂತಹ ಅವಕಾಶವನ್ನು ಬಳಸಿ ಕೊಂಡು, ನಾನು ಕೆಲಸ ಮಾಡಿದ್ದೇನೆ. ಇನ್ನು ಬಿಜೆಪಿಯಲ್ಲಿ ಅಭ್ಯರ್ಥಿಗಳಾಗಬೇಕೆಂದು ಬಂದಿರುವ ನಿಮಗೆ, ಕೇಂದ್ರದಲ್ಲಿ ನಿಮ್ಮದೇ ಸರ್ಕಾರ ಇದೆ. ಒಬ್ಬ ಪಾರ್ಲಿಮೆಂಟ್ ಸದಸ್ಯ ಇದ್ದಾರೆ. ರಾಜ್ಯ ಸರ್ಕಾರ ನಿಮ್ಮದೇ ಇದೆ. ಎಲ್ಲವೂ ಇರುವಾಗ ನೀವು ಏನು ಮಾಡಿದೀರಿ ಎಂಬುದನ್ನು ಪಟ್ಟಿ ಕೊಡಿ, ನಾವು ಮಾಡಿರುವಂತಹ ಅಭಿವೃದ್ಧಿ ಕೆಲಸಗಳ ಪಟ್ಟಿ ನೀಡುತ್ತೇವೆ ಎಂದು ಬಿಜೆಪಿಗೆ ಸವಾಲು ಹಾಕಿದರು.
40 ಪರ್ಸೆಂಟ್ ಸರ್ಕಾರ: ರಾಜ್ಯ ಹಾಗೂ ಕೇಂದ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸದೇ ಬಿಜೆಪಿ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಅಧಿಕಾರಿಗಳು ಲಂಚ ಪಡೆಯುತ್ತಾರೆ. ತಹಶೀಲ್ದಾರ್ ಕಚೇರಿ, ಯಾವುದೇ ಕಚೇರಿಗೆ ಹೋದರೆ ಲಂಚ ಎಂದು ಬಿಜೆಪಿಯವರು ಭಾಷಣ ಮಾಡುತ್ತಾರೆ. ಆದರೆ, ಅವರದೇ ಸರ್ಕಾರ, ಅವರೇ ಲಂಚ ಪಡೆಯುತ್ತಾರೆ. 40 ಪರ್ಸೆಂಟ್ ಸರ್ಕಾರ ಎಂದು ಹೆಸರು ಪಡೆದಿರುವ ನೀವೇ ಲಂಚ ಪಡೆದು ಬೇರೊಬ್ಬರ ಮೇಲೆ ಹೇಳುತ್ತೀರಿ ಎಂದು ಛೇಡಿಸಿದರು. ಭಾರತದಲ್ಲಿ 40 ಪರ್ಸೆಂಟ್ ಸರ್ಕಾರ ಎಲ್ಲಿ ಎಂದು ಕೇಳಿದರೆ ಅದು ಕರ್ನಾಟಕ ಎಂದು ಹೇಳುತ್ತಾರೆ. ಇದು ಕಾಂಗ್ರೆಸ್‌ನವರು ಹೇಳುವುದಲ್ಲ. ಗುತ್ತಿಗೆದಾರರು ಹೇಳಿರುವ ಮಾತು. ಬಿಜೆಪಿಯವರು ಲಂಚ ಪಡೆ ಯುವುದಕ್ಕೆ ಅಂತಿಮ ಎನ್ನುವುದು ಇಲ್ಲ ಎಂದು ಹೇಳಿದರು.
ಈಗಾಗಲೇ ಗ್ಯಾರಂಟಿ ಕಾರ್ಡ್ ವಿತರಣೆ: ಕಾಂಗ್ರೆಸ್ ಪಕ್ಷ ಏನು ಹೇಳಿದೇ ಅದನ್ನೇ ಮಾಡುತ್ತದೆ. ಆದರೆ, ಬಿಜೆಪಿಯಂತೆ ಸುಳ್ಳು ಹೇಳುವುದಿಲ್ಲ. ನಮ್ಮ ಸರ್ಕಾರ ಬಂದ ತಕ್ಷಣ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಗೃಹಿಣಿಗೆ 2000 ರೂ., ಪ್ರತಿಯೊಬ್ಬರಿಗೂ 10 ಕೇಜಿ ಅಕ್ಕಿ ವಿತರಿಸಲಾಗುತ್ತದೆ. ಇದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಆಗಿದೆ. ಈಗಾಗಲೇ ಗ್ಯಾರಂಟಿ ಕಾರ್ಡ್ ವಿತರಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಬೆಂಬಲ ನೀಡುವ ಮೂಲಕ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಚನ್ನರಾಯಪ್ಪ, ಜಿಪಂ ಮಾಜಿ ಸದಸ್ಯ ಆನೇಪುರ ಹನುಮಂತಪ್ಪ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್. ಎಂ.ವಿಜಯನರಸಿಂಹ, ಗ್ರಾಪಂ ಅಧ್ಯಕ್ಷ ಇಮ್ರಾನ್, ಸಬ್ದಾರ್‌ಬೇಗ್, ಕೃಷ್ಣಕುಮಾರ್, ಶ್ರೀನಿವಾಸ್, ಶೌಕತ್ತುಲ್ಲಾ ಬೇಗ್, ಮೋಹನ್ ರಾವ್, ಚೇತನ್, ನಾಗರಾಜ್, ಮುನಿಸ್ವಾಮಿ ಗೌಡ, ವೆಂಕಟೇಶ್, ಎಂ.ಸಿ.ನಾರಾಯಣ ಸ್ವಾಮಿ, ತಿಮ್ಮೇಗೌಡ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.