7ರಂದು ಅಬಕಾರಿ ಸಚಿವರ ವಿರುದ್ಧ ಪ್ರತಿಭಟನೆ
Team Udayavani, Mar 5, 2020, 4:36 PM IST
ಮುಳಬಾಗಿಲು: ತಾಲೂಕಿನಲ್ಲಿರುವ ಕೆರೆಗಳ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿ ಪಡಿಸಬೇಕು. ಕೆ.ಸಿ.ವ್ಯಾಲಿ ನೀರನ್ನು ಕೆರೆಗಳಿಗೆ ಹರಿಸಲು ಸಂಬಂಧಿಸಿದಂತೆ ಮೌನ ತಾಳಿರುವ ಅಬಕಾರಿ ಸಚಿವರ ವಿರುದ್ಧ ಮಾ.7ರಂದು ಶಾಸಕರ ಕಚೇರಿ ಎದುರು ಪ್ರತಿಭಟನೆ ನಡೆಸಲು ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ರೈತ ಸಂಘದ ಕಾರ್ಯಕರ್ತರ ಸಭೆಯಲ್ಲಿ ತೀರ್ಮಾನಿಸಿದರು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ತಾಲೂಕಿನಲ್ಲಿ ಸತತವಾಗಿ 20 ವರ್ಷಗಳಿಂದ ಭೀಕರ ಬರಗಾಲ ಉಂಟಾಗಿರುವುದರಿಂದ ಕೃಷಿಗೆ ನೀರಿಲ್ಲದೆ ಸಾವಿರಾರು ರೈತರು ಕೃಷಿಯಿಂದ ವಿಮುಖರಾಗಿ, ಬೆಂಗಳೂರು ಹಾಗೂ ಮತ್ತಿತರ ದೊಡ್ಡ ದೊಡ್ಡ ನಗರಗಳತ್ತ ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದಾರೆ. ಆದರೆ ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸಬೇಕಾದ ಅಧಿಕಾರಿಗಳು, ರಾಜಕಾರಣಿಗಳ ಗುಲಾಮರಾಗಿದ್ದು, ರಾಜಕಾರಣಿಗಳು ಕರೆದರೇ ನಿಮಿಷಗಳಲ್ಲಿ ಸ್ಥಳದಲ್ಲಿರುತ್ತಾರೆ. ಆ ನಂತರ ಕಚೇರಿಗಳಲ್ಲಿ ಜನರ ಕೈಗೆ ಸಿಗದೆ ಓಡಾಡುತ್ತಿರುವುದರಿಂದ ತಾಲೂಕು ಆಡಳಿತ ಸಂಪೂರ್ಣವಾಗಿ ನಿಷ್ಕ್ರೀಯವಾಗಿದೆ ಎಂದು ಆರೋಪಿಸಿದರು.
ದಿ.ಡಿ.ಕೆ.ರವಿ ರವರ ಕನಸಿನ ಕೂಸಾದ ಕೆ.ಸಿ.ವ್ಯಾಲಿ ನೀರನ್ನು ಸಂಸ್ಕರಿಸಿ ಕೋಲಾರದ 126 ಕೆರೆಗಳಿಗೆ ಹರಿಸಬೇಕೆಂದು ಕಂಡಿದ್ದ ಕನಸನ್ನು ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶ್‌ಕುಮಾರ್ ಸರ್ಕಾರದ ಮೇಲೆ ಒತ್ತಡ ಹಾಕಿ ಕೆರೆಗಳಿಗೆ ನೀರು ಹರಿಸುತ್ತಿರುವುದು ಸ್ವಾಗರ್ತಾಹ. ಅಂತೆಯೇ ಜಿಲ್ಲೆಯ ಎಲ್ಲಾ ಶಾಸಕರು ತಮ್ಮ ಕ್ಷೇತ್ರಗಳ ವ್ಯಾಪ್ತಿಗಳಲ್ಲಿನ ಕೆರೆಗಳಿಗೆ ನೀರು ಹರಿಸುತ್ತಿದ್ದರೆ, ಅಬಕಾರಿ ಸಚಿವ ಎಚ್.ನಾಗೇಶ್ ಅವರು ಮೌನವಾಗಿರುವುದು ಏಕೆ? ಅಸಮಾನಧಾನ ವ್ಯಕ್ತಪಡಿಸಿದರು.
ತಾಲೂಕು ಗೌರವಾದ್ಯಕ್ಷ ಅಣ್ಣಿಹಳ್ಳಿ ನಾಗರಾಜ್ ಮಾತನಾಡಿ, ಪೂರ್ವಜರು ಕಟ್ಟಿ ಉಳಿಸಿರುವ ಕೆರೆಗಳನ್ನು ಸರ್ಕಾರ ಹಾಗೂ ಅಧಿಕಾರಿಗಳು ರಕ್ಷಿಸದೇ ನಿರ್ಲಕ್ಷ್ಯದಿಂದ ವರ್ತಿಸುತ್ತಿರುವುದರಿಂದ ದಿನೇ ದಿನೆ ಕಣ್ಮರೆಯಾಗುತ್ತಿವೆ. ಆದರೆ ತಾಲೂಕು ಆಡಳಿತ ಮಾತ್ರ ಕೆರೆಗಳ ಒತ್ತುವರಿ, ತೆರವು ಮಾಡಿ ಅಭಿವೃದ್ಧಿಗೊಳಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾದ್ಯಕ್ಷ ಮರಗಲ್ ಶ್ರೀನಿವಾಸ್, ತಾಲೂಕು ಅಧ್ಯಕ್ಷ ಫಾರೂಕ್ ಪಾಷ, ಯಲುವಳ್ಳಿ ಪ್ರಭಾಕರ್, ಜಿಲ್ಲಾಧ್ಯಕ್ಷೆ ಎ.ನಳಿನಿ, ಜಗದೀಶ್, ರವಿ, ವಿನೋದ್, ಸುಧಾಕರ್, ಹೆಬ್ಬಣಿ ಆನಂದರೆಡ್ಡಿ, ಕೇಶವ, ವೇಣು, ನವೀನ್, ಜುಬೇರ್ ಪಾಷ, ಮಂಜುನಾಥ್, ವಡ್ಡಹಳ್ಳಿ ಮಂಜುನಾಥ್, ಐತಾಂಡಹಳ್ಳಿ ಮಂಜುನಾಥ್, ಹರೀಶ್, ನಾರಾಯಣಸ್ವಾಮಿ ವೆಂಕಟೇಶ್, ಅನಿಲ್, ವೆಂಕಟರಾಮಪ್ಪ, ರಾಜು, ಪ್ರಸಾದ್, ಕುಮಾರ್ ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.