ಪುರಸಭೆ ಅಧ್ಯಕ್ಷ ಗುಣಶೀಲನ್, ಉಪಾಧ್ಯಕ್ಷ ಷಫಿ
Team Udayavani, Jun 21, 2018, 11:49 AM IST
ಬಂಗಾರಪೇಟೆ: ಬಂಗಾರಪೇಟೆ ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಎಂ.ಗುಣಶೀಲನ್(ಅಣ್ಣಾದೊರೈ) ಮತ್ತು ಉಪಾಧ್ಯಕ್ಷರಾಗಿ ಷಫಿ ನಿರೀಕ್ಷೆಯಂತೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪುರಸಭೆಯ ಒಟ್ಟು 23 ಸದಸ್ಯರ ಪೈಕಿ 17ಕ್ಕೂ ಹೆಚ್ಚು ಸದಸ್ಯರು ಕಾಂಗ್ರೆಸ್ ಪಕ್ಷದವರಾಗಿದ್ದಾರೆ. ಹಾಗಾಗಿ, ಪಕ್ಷಕ್ಕೆ ಬಹುಮತ ಇರುವುದರಿಂದ ಪರಸಭೆ ಅಧಿಕಾರವನ್ನು ಎಲ್ಲಾ ಸದಸ್ಯರಿಗೆ ಸಮನಾಗಿ ಹಂಚಿಕೆ ಮಾಡಬೇಕೆಂಬ ಶಾಸಕ ಎಸ್.ಎನ್ .ನಾರಾಯಣಸ್ವಾಮಿ ನಿರ್ದೇಶನದಂತೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಂ.ಗುಣಶೀಲನ್(ಅಣ್ಣಾದೊರೈ) ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಷಫಿ ನಾಮಪತ್ರ ಸಲ್ಲಿಸಿದ್ದರು.
ಅವಿರೋಧ ಆಯ್ಕೆ: ಇವರಿಬ್ಬರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ಗಳನ್ನು ಪರಿಶೀಲನೆ ನಡೆಸಿದ ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ಬಿ.ಕೆ.ಚಂದ್ರ
ಮೌಳೇಶ್ವರ, ನಾಮಪತ್ರಗಳು ಕ್ರಮಬದ್ಧವಾಗಿವೆ. ಹಾಗಾಗಿ, ಅಧ್ಯಕ್ಷ ಸ್ಥಾನಕ್ಕೆ ಎಂ.ಗುಣಶೀಲನ್
(ಅಣ್ಣಾದೊರೈ)ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಷಫಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.
ಪುರಸಭೆ ಎರಡನೇ ಅವಧಿಯ ಅಧ್ಯಕ್ಷ ಸ್ಥಾನ ಎಸ್ಸಿಗೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎಂ ಎ ಗೆ ಮೀಸಲಿರಿಸಿದ್ದು, ಈಗಾಗಲೇ ಅಧ್ಯಕ್ಷರಾಗಿ ಡಿ.ಕುಮಾರ್, ಸಿ.ರಮೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಸ್ಲಂ ಪಾಷ, ಆರೋಗ್ಯರಾಜನ್ ಅವಧಿ ಮುಗಿದಿದೆ. ಕಾಂಗ್ರೆಸ್ ಮುಖಂಡರ ಒಪ್ಪಂದದಂತೆ ಅಧ್ಯಕ್ಷ ಸ್ಥಾನಕ್ಕೆ ಎಂ.ಗುಣಶೀಲನ್ ಹಾಗೂ ಉಪಾಧ್ಯಕ್ಷ
ಸ್ಥಾನಕ್ಕೆ ಷಫಿ ಆಯ್ಕೆಯಾಗುವುದು ಈಗಾಗಲೇ ತೀರ್ಮಾನವಾಗಿರುವುದರಿಂದ ಹೊಸಬರ ಆಯ್ಕೆ
ಅವಿರೋಧವಾಗಿ ನಡೆಯಿತು.
ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನೆ: ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಚಂದ್ರಾರೆಡ್ಡಿ, ಮುಖ್ಯಾಧಿಕಾರಿ ಶ್ರೀಧರ್ ಪುರಸಭೆ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಬಂಗಾರಪೇಟೆ ಪುರಸಭೆ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಅವಧಿ ಮುಗಿದ ನಂತರ ಎಲ್ಲರೂ ಚುನಾವಣೆಗೆ ಹೋಗಬೇಕಾಗಿರುವುದರಿಂದ ಎಚ್ಚರಿಕೆಯಿಂದ ಆಡಳಿತ ನಡೆಸಬೇಕಾಗಿದೆ. ಕಾಂಗ್ರೆಸ್‌ನಿಂದ ಗೆದ್ದಿರುವ ಎಲ್ಲಾ ಹಾಲಿ ಸದಸ್ಯರು ಮತ್ತೆ ಮರು ಆಯ್ಕೆಯಾಗುವ ರೀತಿಯಲ್ಲಿ ತಮ್ಮ ವಾರ್ಡುಗಳಲ್ಲಿ ಪ್ರಾಮಾಣಿಕ ಸೇವೆ ಮಾಡಬೇಕು.
ಮುಂದಿನ ಪುರಸಭೆ ಚುನಾವಣೆಯಲ್ಲಿ 27ಕ್ಕೆ 27 ಸ್ಥಾನಗಳನ್ನು ಗೆಲ್ಲಬೇಕು.
ಎಸ್.ಎನ್.ನಾರಾಯಣಸ್ವಾಮಿ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.