ಅಧಿಕಾರದಲ್ಲಿದ್ದಾಗ ಜನಪರವಾಗಿರಬೇಕು
ನಮ್ಮ ಕೆಲಸ ನೋಡಿ ಗೌರವ ನೀಡುವಂತರಬೇಕು: ಮಾಜಿ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್
Team Udayavani, Aug 20, 2019, 5:18 PM IST
ರಮೇಶ್‌ಕುಮಾರ್ ಜಿಲ್ಲಾಸ್ಪತ್ರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.
ಕೋಲಾರ: ಯಾವುದೇ ಅಧಿಕಾರ ಸ್ಥಾನದಲ್ಲಿ ದ್ದಾಗ ಅದನ್ನು ಜನರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ನಾನು ಸ್ಪೀಕರ್ ಸ್ಥಾನದಲ್ಲಿ ಈಗ ಇಲ್ಲವಾದರೂ ಗೌರವ ನೀಡು ವಂತಿರಬೇಕಷ್ಟೇ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ಹೇಳಿದರು.
ಕೋಲಾರದ ಎಸ್ಸೆನ್ನಾರ್ ಜಿಲ್ಲಾಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಹಿತ ಬಂದಾಗ ತಾವೆಲ್ಲರೂ ಒಂದಾಗಬೇಕು. ರಾಜಕೀಯಕ್ಕೆ ಸಂಬಂಧಿ ಸಿದಂತೆ ಯಾವುದೇ ಪ್ರತಿಕ್ರಿಯೆ ನಾವು ನೀಡು ವುದಿಲ್ಲ. ಬಿಜೆಪಿ ಸಂಸದರು, ಜೆಡಿಎಸ್ ಶಾಸಕರು, ನಾನೂ, ನಜೀರ್‌ಅಹಮದ್ ಕಾಂಗ್ರೆಸ್ ಪಕ್ಷದವರು. ಇಲ್ಲಿ ಸಭೆ ನಡೆಸುತ್ತಿ ದ್ದೇವೆ. ಆದರೆ, ಯಾವುದೇ ರಾಜಕೀಯ ಬೆರೆಸುತ್ತಿಲ್ಲ ಎಂದು ಹೇಳಿದರು.
ಕರ್ನಾಟಕದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ದೃಷ್ಟಹೀನರೂ ಯಾರೂ ಇಲ್ಲ. ಉತ್ತರ ಕರ್ನಾಟಕದಲ್ಲಿ ನೀರಿನ ಪ್ರವಾಹ ಆದರೆ, ಇಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಬದುಕೇ ನಾಶದ ಅಂಚಿನಲ್ಲಿದೆ. ಇಂತಹ ಸಮ ಯದಲ್ಲಿ ನಾನು ರಾಜಕೀಯ ಮಾಡಿಕೊಂ ಡಿರಲು ಸಾಧ್ಯವಿಲ್ಲ. ನಮ್ಮನ್ನು ಕೆಣಕಬೇಡಿ ಎಂದು ಮಾಧ್ಯಮದವರಿಗೆ ಮನವಿ ಮಾಡಿದರು.
ಜೈಲಿಗೆ ಹಾಕ್ತೀವಿ: ಕೆ.ಸಿ. ವ್ಯಾಲಿ ನೀರು ಒಳ ಹರಿವು ಕಡಿಮೆಯಾಗಿಲ್ಲ. ಆದರೆ, ಕೆಲವು ಸ್ವಾರ್ಥಿಗಳು ಮೋಟರ್‌ಗಳನ್ನಿಟ್ಟು ನೀರನ್ನು ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಈಗಲೂ ಬದಲಾಗದಿದ್ದರೆ ಜೈಲಿನಲ್ಲಿ ಇಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಎತ್ತಿನಹೊಳೆ ಭೂಸಾಧೀನಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಅಂಕಿತವೂ ಆಗಿದೆ. ಶತಾಯಗತಾಯ 2020ಕ್ಕೆ ನೀರು ತರಲು ತೀವ್ರ ಪ್ರಯತ್ನ ನಡೆಸುತ್ತಿದ್ದೇವೆ ಎಂದರು. ರೈಲ್ವೇ ಕೋಚ್ ಫ್ಯಾಕ್ಟರಿ ಕೈಬಿಟ್ಟಿಲ್ಲ. ಇಲ್ಲಸಲ್ಲದ ಊಹಾಪೋಹಗಳಿಗೆ ಕಿವಿಗೊಡಬೇಡಿ. ಕೇಂದ್ರ ಸರಕಾರವು ಯಾವುದೇ ಯೋಜನೆ ಜಾರಿ ಮಾಡುವ ಮುನ್ನ ಎಲ್ಲ ಪ್ರಕ್ರಿಯೆಗಳನ್ನು ನಡೆಸಿದ ಬಳಿಕವೇ ಶಂಕುಸ್ಥಾಪನೆ ಮಾಡಲಾಗುತ್ತದೆ. ಭೂಸಾಧೀನ ವಿಚಾರವಾಗಿ ತಡವಾಗಿದೆ ಹೊರತು ಬೇರೆ ಏನೂ ಇಲ್ಲ ಎಂದರು.
ಸ್ವಲ್ಪ ಹೆಚ್ಚಿಗೆ ಹಣ ಬರುತ್ತದೆ ಎನ್ನುವ ಆಸೆಯಿಂದಾಗಿ ಕೆಲವರು ಇಲ್ಲಸಲ್ಲದ ಅರ್ಜಿಗಳನ್ನು ನೀಡಿದ್ದಾರೆ. ಸ್ವಲ್ಪ ಹೆಚ್ಚಾ ಕಡಿಮೆಯಾದರೂ ಯೋಜನೆ ಜಾರಿ ಆಗೇ ಆಗುತ್ತದೆ ಎಂದರು. ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ಯೋಜನೆ ಜಾರಿ ಆಗುವುದಿಲ್ಲ ಎಂದು ನಾನು ಹೇಳಿಲ್ಲ. ಕೋಚ್ ಕಾರ್ಖಾನೆ ಬದಲಿಗೆ ವರ್ಕ್‌ಶಾಪ್ ಮಾಡುವ ಕುರಿತು ಹೇಳಿದ್ದೇನಷ್ಟೇ ಎಂದರು. ಶಾಸಕ ಕೆ.ಶ್ರೀನಿವಾಸಗೌಡ, ಎಂಎಲ್ಸಿ ನಜೀರ್ ಅಹಮದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.