ದಿನ್ನಹಳ್ಳಿ: ಕೂಲಿ ಕಾರ್ಮಿಕರಿಗೆ ನರೇಗಾ ವರದಾನ
Team Udayavani, Jun 23, 2021, 11:00 PM IST
ಮಾಸ್ತಿ: ಲಾಕ್‌ಡೌನ್‌ನಿಂದ ಕೈಗೆ ಕೆಲಸವಿಲ್ಲದೆ ಜೀವನನಿರ್ವಹಣೆ ಮಾಡಲು ಪರದಾಡುತ್ತಿದ್ದವರಿಗೆ ನರೇಗಾದಡಿ ಉದ್ಯೋಗ ನೀಡಿ ಹೋಬಳಿಯ ದಿನ್ನಹಳ್ಳಿ ಗ್ರಾಪಂ ನೆರವಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಆಸಕ್ತಿಯುಳ್ಳ ರೈತರಿಗೆ ಬದು ನಿರ್ಮಾಣ,ಕೃಷಿ ಹೊಂಡ, ರಾಜಕಾಲುವೆ ಅಭಿವೃದ್ಧಿ, ಕೆರೆ ಹೂಳು ತೆಗೆಯುವುದು, ರಸ್ತೆ ಸೇರಿ ಇತರೆ ಅಭಿವೃದ್ಧಿ ಕೆಲಸಗಳನ್ನು ಮಾಡಿಸಲಾಗುತ್ತಿದೆ.
ದಿನಕ್ಕೆ 289 ರೂ.ಕೂಲಿಯಂತೆ ಕೆಲಸ ನೀಡಿದ್ದು, ಜನರು ಕೂಡಖುಷಿಯಿಂದ ತೊಡಗಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಪ್ರತಿ ದಿನ ನೂರಾರು ಮಂದಿ ಕೆಲಸಕ್ಕೆ ಬರುತ್ತಿದ್ದು, ಅವರ ಗ್ರಾಮದ ಸುತ್ತಮುತ್ತಲಿನಲ್ಲೇ ಕೆಲಸ ಕೊಡಲಾಗುತ್ತಿದೆ. ಅಲ್ಲದೆ, ಕೊರೊನಾ ನಿಯಮಪಾಲಿಸುತ್ತೇನೆ ಎಂಬ ಪ್ರತಿಜ್ಞೆ ಮಾಡಿಸಲಾಗುತ್ತಿದೆ.
ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರಕಾಯ್ದುಕೊಂಡು ಮುಂಜಾಗ್ರತಾ ಕ್ರಮ ವಹಿಸಿದ್ದಾರೆ ಎಂದು ದಿನ್ನಹಳ್ಳಿ ಪ್ರಭಾರ ಪಿಡಿಒ ರವೀಂದ್ರ. ಹೇಳಿದರು. ಕೊರೊನಾದಿಂದ ಸಂಕಷ್ಟ ಸಿಲುಕಿದ್ದ ಕುಟುಂಬಗಳಿಗೆ ಉದ್ಯೋಗ ಖಾತ್ರಿ ಯೋಜನೆ ಆಸರೆಯಾಗಿದ್ದು, ಈ ಭಾಗದ ಬಡ ಕುಟುಂಬಗಳಿಗೆ ಬದುಕುವ ಆಸೆಹುಟ್ಟಿಸಿದಂತಾಗಿದೆ.
ಎಂ.ಮೂರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.