ಹುಳದೇನಹಳ್ಳಿಯಲ್ಲಿ ನರೇಗಾ ಜಾಗೃತಿ
Team Udayavani, Oct 19, 2019, 4:49 PM IST
ಟೇಕಲ್: ಹೋಬಳಿಯ ಹುಳದೇನಹಳ್ಳಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕೈಗೊಂಡಿರುವ ಪ್ರಚಾರದ ವಾಹನ ಶುಕ್ರವಾರ ಗ್ರಾಮಗಳಲ್ಲಿ ಸಂಚರಿಸಿತು.
ಈ ವೇಳೆ ನಡೆದ ಕಾರ್ಯಕ್ರಮಕ್ಕೆ ಗ್ರಾಪಂ ಕಾರ್ಯದರ್ಶಿ ಅಶ್ವತ್ಥಪ್ಪ ಚಾಲನೆ ನೀಡಿ, ನರೇಗಾ ಯೋಜನೆಯಲ್ಲಿ ಕೈಗೊಳ್ಳುವ ಕಾಮಗಾರಿಗಳ ಬಗ್ಗೆ ಮಾತನಾಡಿದರು. ಸ್ಮಶಾನ ಅಭಿವೃದ್ಧಿ, ಕಾಂಕ್ರೀಟ್ ರಸ್ತೆ, ಪ್ರವಾಹ ನಿಯಂತ್ರಣ ಮತ್ತು ಸಂರಕ್ಷಣಾ ಕಾಮಗಾರಿ, ಕೊಳವೆ ಬಾವಿ ಮರುಪೂರಣ ಘಟಕ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ, ರಾಜೀವ್‌ಗಾಂಧಿ ಸೇವಾ ಕೇಂದ್ರ, ಅಂಗನವಾಡಿ ಕಟ್ಟಡ ನಿರ್ಮಾಣ, ಹಳ್ಳಿ ಸಂತೆ, ಶಾಲಾ ಶೌಚಾಲಯ, ರಸ್ತೆ ಬದಿ ಗಿಡ ನೆಡುವುದು ಸಹ ಸರ್ಕಾರದ ಯೋಜನೆಗಳೊಂದಿಗೆ ಕೈಗೊಳ್ಳಬಹುದು ಎಂದರು.
ನರೇಗಾ ಯೋಜನೆಯಡಿ ಕೆಲಸ ಮಾಡುವವರಿಗೆ ದಿನಕ್ಕೆ 249 ರೂ. ಕೂಲಿ ದೊರೆಯುತ್ತದೆ. ಕೆಲಸಕ್ಕೆ ಅರ್ಜಿ ಸಲ್ಲಿಸಿದವರು ವರ್ಷದಲ್ಲಿ 100 ದಿನಗಳ ಕಾಲ ಕೆಲಸ ನಿರ್ವಹಿಸಬಹುದು ಎಂದು ತಿಳಿಸಿದರು. ಇದರ ಜೊತೆಗೆ ತೋಟಗಾರಿಕೆ, ರೇಷ್ಮೆ, ಕೃಷಿ, ವಸತಿ ಯೋಜನೆಯಗಳಲ್ಲಿಯೂ ನರೇಗಾ ಯೋಜನೆ ಬಳಸಿಕೊಳ್ಳಬ ಹುದು. ಮುಖ್ಯವಾಗಿ ರೈತರು “ನಮ್ಮ ಉದ್ಯೋಗ ನಮ್ಮ ಹಳ್ಳಿಗೆ’ “ನಮ್ಮ ಗ್ರಾಮ ಅಭಿವೃದ್ಧಿ ನಮ್ಮ ಕೈಯಲ್ಲಿ’ ಎಂಬುದನ್ನು ಅರಿಯಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
MUST WATCH
ಹೊಸ ಸೇರ್ಪಡೆ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.