ಕೆಲ ಪಿಡಿಒಗಳಿಂದ ನರೇಗಾ ಯೋಜನೆ ಹಣ ದುರ್ಬಳಕೆ

ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್‌ ವೆಂಕಟಾಚಲಪತಿ

Team Udayavani, Jul 14, 2019, 12:26 PM IST

kolar-tdy-2…

ಬಂಗಾರಪೇಟೆ ತಾಲೂಕಿನ ಮಾವಹಳ್ಳಿ ಗ್ರಾಪಂ ಕಚೇರಿಯಲ್ಲಿ ನಡೆದ ಎಸಿಬಿ ಕುಂದುಕೊರತೆ ಸಭೆಯಲ್ಲಿ ಸರ್ಕಲ್ ಇನ್ಸ್‌ ಪೆಕ್ಟರ್‌ ವೆಂಕಟಾಚಲಪತಿ ಮಾತನಾಡಿದರು.

ಬಂಗಾರಪೇಟೆ: ರಾಜರ ಕಾಲದಲ್ಲಿಯೂ ಇದ್ದ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಬ್ರಿಟಿಷರು ಕಾನೂನು ರೂಪಿಸಿದ್ದರು. ಸ್ವಾತಂತ್ರ್ಯನಂತರ ಲೋಕಪಾಲ ಮತ್ತು ಲೋಕಾಯುಕ್ತ ಸ್ಥಾಪಿಸಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಸರ್ಕಲ್ ಇನ್ಸ್‌ಪೆಕ್ಟರ್‌ ವೆಂಕಟಾಚಲಪತಿ ಹೇಳಿದರು.

ತಾಲೂಕಿನ ಮಾವಹಳ್ಳಿ ಗ್ರಾಪಂ ಕಚೇರಿಯಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಲೋಕಾಯುಕ್ತ ಮೊದಲೇ ಸ್ಥಾಪಿಸಿದ್ದರೂ ಹೆಚ್ಚು ಹೆಸರುವಾಸಿಯಾಗಿದ್ದು, ಕಾರ್ಯರೂಪಕ್ಕೆ ಬಂದಿದ್ದು ಕರ್ನಾಟಕದಲ್ಲಿಯೇ ಎಂದು ಹೇಳಿದರು.

ದೂರು ನೀಡಿ: ಯಾವುದೇ ಸಮಸ್ಯೆ ಇದ್ದರೂ ಸಾರ್ವಜನಿಕರು ಎಸಿಬಿಗೆ ದೂರು ನೀಡಿದ್ದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು. ಲಂಚಮುಕ್ತ ಸಮಾಜ ನಿರ್ಮಾಣ ಮಾಡಲು ಎಸಿಬಿ ಶ್ರಮಿಸುತ್ತಿದೆ. ತಾಲೂಕು ಮಟ್ಟದಲ್ಲಿ ತಿಂಗಳಿಗೊಮ್ಮೆ ದಿನಕ್ಕೆ ಎರಡು ಗ್ರಾಪಂಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುತ್ತಿದೆ. ಎಲ್ಲಾ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮೂಲಕ ಇತ್ಯರ್ಥ ಮಾಡಲಾಗುತ್ತಿದೆ ಎಂದು ವಿವರಿಸಿದರು.

ದುರ್ಬಳಕೆ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲವು ಗ್ರಾಪಂಗಳಲ್ಲಿ ಪಿಡಿಒಗಳು ಸಾರ್ವಜನಿಕರ ಬ್ಯಾಂಕ್‌ ಖಾತೆಗೆ ಹಣ ಹಾಕಿ, ದುಡ್ಡು ಡ್ರಾ ಮಾಡಿಕೊಟ್ಟವರಿಗೆ ಇಂತಿಷ್ಟು ಹಣ ನೀಡಿ, ಉಳಿದ ಹಣ ಪಡೆದುಕೊಳ್ಳುವ ಮೂಲಕ ಯೋಜನೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗಡಿ ಗ್ರಾಮಗಳ ಜನರಿಗೆ ಮಾಹಿತಿ ಸಿಗದೇ, ತಾಲೂಕು ಕೇಂದ್ರದಲ್ಲಿ ನಡೆಯುವ ಎಸಿಬಿ ಸಭೆಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತಾವೇ ಪ್ರತಿ ಗ್ರಾಪಂ ಮಟ್ಟದಲ್ಲಿ ಸಭೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಮಾಹಿತಿ ಹಾಕದೇ ನಿರ್ಲಕ್ಷ್ಯ: ಗ್ರಾಪಂ, ತಾಲೂಕು ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಸಾರ್ವಜನಿಕರು ತೊಂದರೆಗಳಾಗಿದ್ದಲ್ಲಿ, ಲಂಚಕ್ಕೆ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಪೀಡಿಸುತ್ತಿದ್ದರೆ ಎಸಿಬಿಗೆ ದೂರು ನೀಡಬಹುದು. ಈ ಬಗ್ಗೆ ಮಾಹಿತಿ ಫ‌ಲಕ ಹಾಕುವಂತೆ ಗ್ರಾಪಂ ಕಚೇರಿಗಳಿಗೆ ಸೂಚನೆ ನೀಡಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆ ಎಂದು ದೂರಿದರು.

ತಹಶೀಲ್ದಾರ್‌ ಮೂಲಕ ಸಮಸ್ಯೆ ಇತ್ಯರ್ಥ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾರ್ವಜನಿಕರಿಗೆ ಕೆಲಸ ಮಾಡಿಕೊಡದೇ ಸತಾಯಿಸುವುದು, ಅನಗತ್ಯವಾಗಿ ವಿಳಂಬ, ಲಂಚಕ್ಕೆ ಪೀಡಿಸುವುದು ಕಂಡುಬಂದಲ್ಲಿ ತಕ್ಷಣವೇ ನಮ್ಮ ಗಮನಕ್ಕೆ ಬಂದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು. ಮಾವಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಗೆ ಸೇರಿದ ಎರಡು ದೂರುಗಳು ಬಂದಿದ್ದು, ಸಂಬಂಧಪಟ್ಟ ತಹಶೀಲ್ದಾರ್‌ಗೆ ಕಳುಹಿಸಿ ಕ್ರಮಕೈಗೊಳ್ಳಲು ತಿಳಿಸಲಾಗುವುದು ಎಂದರು.

ಗ್ರಾಪಂ ಅಧ್ಯಕ್ಷ ಅಮರಾವತಿ ಚೌಡೇಗೌಡ, ಎಪಿಎಂಸಿ ಅಧ್ಯಕ್ಷ ಎಸ್‌.ನಾರಾಯಣಗೌಡ, ಗ್ರಾಪಂ ಉಪಾಧ್ಯಕ್ಷ ಮಂಜುನಾಥ್‌, ಮಾಜಿ ಅಧ್ಯಕ್ಷ ಅಶ್ವತ್ಥ್ನಾರಾಯಣಗೌಡ, ಪಿಡಿಒ ರಾಮಮೂರ್ತಿ, ಕಾರ್ಯದರ್ಶಿ ಸೋಮಶೇಖರ್‌, ಎಸಿಬಿ ಸಿಬ್ಬಂದಿಯಾದ ಕೃಷ್ಣೇಗೌಡ, ಮಧುಸೂದನ್‌ ಇದ್ದರು.

ಟಾಪ್ ನ್ಯೂಸ್

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.