ಹುದುಕುಳ ಆರೋಗ್ಯ ಕೇಂದ್ರಕ್ಕೆ ರಾಷ್ಟ್ರಮಟ್ಟದ ಮಾನ್ಯತೆ

Team Udayavani, Dec 10, 2022, 4:35 PM IST

ಹುದುಕುಳ ಆರೋಗ್ಯ ಕೇಂದ್ರಕ್ಕೆ ರಾಷ್ಟ್ರಮಟ್ಟದ ಮಾನ್ಯತೆ

ಬಂಗಾರಪೇಟೆ: ತಾಲೂಕಿನ ಹುದುಕುಳ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರವು ರಾಷ್ಟ್ರೀಯ ಮಟ್ಟಕ್ಕೆ ಮಾನ್ಯತೆ ಪಡೆದ ರಾಜ್ಯದಮೊದಲ ಏಕೈಕ ಕೇಂದ್ರವಾಗಿದ್ದು, ಅದರಪರಿಶೀಲನೆಗಾಗಿ ರಾಷ್ಟ್ರ ಮಟ್ಟದ ವೈದ್ಯರತಂಡ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಪಲಶೀಲನೆ ನಡೆಸಿತು.

ತಾಲೂಕಿನ ಹುದುಕುಳ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದಿಂದ ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿಗುಣಮಟ್ಟದ ಸೇವೆ ಸಿಗುತ್ತಿದ್ದು, ಕೇಂದ್ರಕ್ಕೆ ಬೇಕಾದ ಎಲ್ಲಾ ಮೂಲ ಸೌಕರ್ಯಗಳು ಇರುವ ಕಾರಣ ಈಗಾಗಲೇ ರಾಜ್ಯ ಮಟ್ಟದಲ್ಲಿ ಉತ್ತಮ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದಿಂದ ಹುದುಕುಳ ಆರೋಗ್ಯ ಮತ್ತು ಕ್ಷೇಮ ಕೇಂದ್ರವು ರಾಷ್ಟ್ರೀಯಗುಣಮಟ್ಟ ಖಾತ್ರಿ ಮಾನದಂಡಕ್ಕೆ ಆಯ್ಕೆಯಾಗಿದ್ದು, ಇದು ರಾಜ್ಯದಿಂದ ಆಯ್ಕೆಯಾಗಿರುವ ಮೊದಲ ಕೇಂದ್ರವಾಗಿದೆ.

ಮಾನದಂಡಗಳನ್ನು ಪರಿಶೀಲನೆ ನಡೆಸಲುದೆಹಲಿ ಮತ್ತು ತಮಿಳುನಾಡಿನಿಂದ ಡಾ.ಬಾಲಾಜಿ, ಡಾ. ಧರ್ಮೇಶ್‌ ಸೇರಿ ಇತರೆ ವೈದ್ಯರ ತಂಡ ಭೇಟಿ ನೀಡಿದರು. ಈ ವೇಳೆ ಜಿಲ್ಲಾ ಗುಣಮಟ್ಟ ವ್ಯವಸ್ಥಾಪಕ ಡಾ.ಚೇತನ್‌ ಮಾತನಾಡಿ, ಈಗಾಗಲೇ ಜಿಲ್ಲೆಯಿಂದ ಕಾಯಕಲ್ಪ ಸೇರಿ ಹಲವು ಯೋಜನೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಾರ್ವಜನಿಕ ಆಸ್ಪತ್ರೆಗಳು ಗುಣಮಟ್ಟದ ಆಸ್ಪತ್ರೆಗಳು ಎಂದು ಗುರುತಿಸಿಕೊಂಡಿವೆ.

ಹುದುಕುಳ ಗ್ರಾಮದ ಕ್ಷೇಮ ಕೇಂದ್ರದಿಂದ ಇಲ್ಲಿನ ವೈದ್ಯರೂ ಸೇರಿ ಸಿಬ್ಬಂದಿ ವರ್ಗ ಕೇಂದ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಉತ್ತಮ ಸೇವೆ ಮಾಡುವ ಮೂಲಕ ಕೇಂದ್ರವು ಮೊದಲ ಬಾರಿಗೆ ರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿದೆ. ರಾಷ್ಟ್ರ ಮಟ್ಟದ ವೈದ್ಯರ ತಂಡ ಕೇಂದ್ರದಲ್ಲಿನ ಎಲ್ಲಾ ದಾಖಲೆಗಳನ್ನು ಕೇಂದ್ರದಲ್ಲಿನ ಸೌಲಭ್ಯಗಳು ಸೇರಿ ಇತ್ಯಾದಿಗಳನ್ನು ಸಲಶೀಲನೆ ನಡೆಸಿ ಕೇಂದ್ರಕ್ಕೆ ರಾಷ್ಟ್ರ ಮಟ್ಟದ ಪ್ರಮಾಣ ಪತ್ರವನ್ನು ವಿತರಣೆ ಮಾಡಲಿದ್ದಾರೆ ಎಂದರು.

ಚಿಕ್ಕಅಂಕಂಡಹಳ್ಳಿ ಗ್ರಾಪಂ ಅಧ್ಯಕ್ಷ ಎಚ್‌. ಎಂ.ರವಿ ಮಾತನಾಡಿ, ಹುದುಕುಳ ಆರೋಗ್ಯ ಕೇಂದ್ರವನ್ನು ಜಿಲ್ಲೆಯಲ್ಲಿಯೇ ಉತ್ತಮ ಕೇಂದ್ರವನ್ನಾಗಿ ಮಾಡಲು ಗ್ರಾಪಂನಿಂದ ಯೋಗ ಕೇಂದ್ರವನ್ನು ನಿರ್ಮಿಸಿ, ಸ್ವಚ್ಛತೆಯನ್ನು ಕಾಪಾಡುವುದರ ಜತೆಗೆ ಹಲವು ಸೌಲಭ್ಯಗಳನ್ನು ಕಲ್ಪಸಲಾಗಿದೆ. ನಾವು ಊಹಿಸಿದಕ್ಕಿಂತ ಹೆಚ್ಚಿನ ರೀತಿಯಲ್ಲಿ ಕೇಂದ್ರದಿಂದ ಉತ್ತಮ ಸೇವೆ ಸಿಗುತ್ತಿರುವ ಕಾರಣ ರಾಜ್ಯಮಟ್ಟದಲ್ಲಿ ಗುರ್ತಿಸಿಕೊಂಡಿದೆ. ಇದೀಗ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು.

ಜಿಲ್ಲಾ ಗುಣಮಟ್ಟದ ಸಲಹೆಗಾರ ಡಾ.ಮನೋಹರ್‌, ತಾಲೂಕು ವೈದ್ಯಾಧಿಕಾರಿಡಾ.ಪ್ರತಿಕ್‌ ಎನ್‌.ಸ್ವಾಮಿ, ವೈದ್ಯಾಧಿಕಾರಿ ಡಾ.ಉಮಾ, ಕೇಂದ್ರ ತಂಡದ ಸದಸ್ಯರಾದ ಡಾ.ಬಾಲಾಜಿ, ಡಾ. ಧರ್ಮೇಶ್‌, ಪಿಡಿಒ ವಿ.ಚಿತ್ರಾ ಇತರರಿದ್ದರು.

ಟಾಪ್ ನ್ಯೂಸ್

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.