ಹುಲಿಬೆಲೆ, ಡಿ.ಕೆ.ಹಳ್ಳಿ ಗ್ರಾಪಂಗೆ ಹೊಸ ಕಟ್ಟಡ

Team Udayavani, Nov 15, 2020, 7:45 PM IST

ಹುಲಿಬೆಲೆ, ಡಿ.ಕೆ.ಹಳ್ಳಿ ಗ್ರಾಪಂಗೆ ಹೊಸ ಕಟ್ಟಡ

ಬಂಗಾರಪೇಟೆ: 30 ವರ್ಷಗಳ ಇತಿಹಾಸದಲ್ಲಿ ಹುಲಿಬೆಲೆ ಮತ್ತು ಡಿ.ಕೆ.ಹಳ್ಳಿ ಗ್ರಾಪಂಗಳಿಗೆ ಸ್ವಂತ ಕಟ್ಟಡ ಭಾಗ್ಯವಿಲ್ಲದೇ ಅವ್ಯವಸ್ಥೆಯಿಂದ ಕೂಡಿದ್ದು, ಪ್ರಸ್ತುತ ತಲಾ 40 ಲಕ್ಷ ರೂ.ವೆಚ್ಚದಲ್ಲಿ ಮಾದರಿ ಕಟ್ಟಡ ನಿರ್ಮಾಣ ಮಾಡುವ ಮೂಲಕ ಬಹು ವರ್ಷಗಳ ಕನಸು ನನಸಾಗಲಿದೆ ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಹುಲಿಬೆಲೆ ಮತ್ತು ಡಿಕೆಹಳ್ಳಿ ಗ್ರಾಪಂಗಳಿಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಅವರು,

ತಾಲೂಕಿನ ಎಲ್ಲಾ ಗ್ರಾಪಂಗಳು ಸ್ವಂತ ಕಟ್ಟಡ ಹೊಂದಬೇಕೆಂಬುದು ನನ್ನಕನಸಾಗಿದೆ. ಡಿಸೆಂಬರ್‌ನಲ್ಲಿ ಗ್ರಾಪಂಗಳಿಗೆ ಚುನಾವಣೆ ನಡೆಯಲಿದ್ದು, ಜನವರಿಯೊಳಗೆ ಕಟ್ಟಡ ಕಾಮಗಾರಿ ಸಪೂರ್ಣಗೊಳ್ಳಲಿದ್ದು, ಹೊಸ ಕಟ್ಟಡದಲ್ಲೇ ಹೊಸ ಆಡಳಿತ ಮಂಡಳಿ ಕಾರ್ಯ ಚಟುವಟಿಕೆಗಳನ್ನುನಡೆಸಲಿ ಎಂದರು.

15 ದಿನದಲ್ಲಿಕಾಮಗಾರಿ ಆರಂಭ: ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಮಾಲೂರು ತಾಲೂಕು ನೂಟವೆಯಿಂದ ಬಂಗಾರಪೇಟೆ ಪಟ್ಟಣವರೆಗೂ 30 ಅಡಿ ಅಗಲ ರಸ್ತೆ ನಿರ್ಮಾಣಕ್ಕೆ 10 ಕೋಟಿ ಮಂಜೂರು ಮಾಡಿತ್ತು. ಅದೇ ರೀತಿ ಹೊಸಕೋಟೆಯಿಂದ ಆಂಧ್ರಪ್ರದೇಶದ ವಿ.ಕೋಟೆವರೆಗೂ ರಸ್ತೆ ಅಗಲೀಕರಣಕ್ಕೆ 100ಕೋಟಿ ಮಂಜೂರು ಮಾಡಲಾಗಿತ್ತು. ಬಿಜೆಪಿಸರ್ಕಾರ ಅನುದಾನ ಹಿಂಪಡೆದಿದ್ದರಿಂದ ಕಾಮಗಾರಿ ನನೆಗುದಿಗೆ ಬಿದ್ದಿತ್ತು. ಈಗ ಮತ್ತೆ ಅನುದಾನ ಮಂಜೂರಾಗಿರುವುದರಿಂದ 15 ದಿನದೊಳಗೆ ಕಾಮಗಾರಿ ಆರಂಭವಾಗಲಿದೆ ಎಂದರು.

ಡಿ.ಕೆ.ಹಳ್ಳಿ ಗ್ರಾಪಂನಲ್ಲಿ ಅತಿ ಹೆಚ್ಚು ಮನೆ ತೆರಿಗೆ ವಸೂಲಿಯಾಗಿರುವುದರಿಂದ ಗ್ರಾಪಂಗೆ ಸ್ವಂತವಾಗಿ ನೂತನ ಟ್ರ್ಯಾಕ್ಟರ್‌ ಖರೀದಿ ಮಾಡಿದ್ದು, ಕಸ ವಿಲೇವಾರಿ ಹಾಗೂ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಪೈಪ್‌ಗ್ಳನ್ನು ಸಾಗಾಣಿಕೆ ಮಾಡಲು ಹೆಚ್ಚು ಅನುಕೂಲವಾಗಿರುವುದರಿಂದ ಈ ಟ್ರ್ಯಾಕ್ಟರ್‌ರನ್ನು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿಚಾಲನೆ ನೀಡಿ ಲೋಕಾರ್ಪಣೆ ಮಾಡಿದರು.ಜಿಪಂ ಸದಸ್ಯ ಬಿ.ವಿ.ಮಹೇಶ್‌, ತಾಪಂ ಅಧ್ಯಕ್ಷ ಟಿ.ಮಹಾದೇವ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷಕೆ.ವಿ.ನಾಗರಾಜ್‌, ಭೂ ಬ್ಯಾಂಕ್‌ನ ಅಧ್ಯಕ್ಷ ಎಚ್‌. ಕೆ.ನಾರಾಯಣಸ್ವಾಮಿ, ತಾಪಂ ಇಒ ಎನ್‌.ವೆಂಕಟೇಶಪ್ಪ, ಜಿಪಂ ಇಇ ಶೇಷಾದ್ರಿ, ಎಇ ರವಿಚಂದ್ರನ್‌, ಹುಲಿಬೆಲೆ ವಿಎಸ್‌ಎಸ್‌ಎನ್‌ ಅಧ್ಯಕ್ಷ ವೆಂಕಟೇಶ್‌, ಟಿಎಪಿಸಿಎಂಎಸ್‌ ಹಾಲಿ ನಿರ್ದೇಶಕ ವೆಂಕಟಾಚಲಪತಿ, ಮಾಜಿ ಅಧ್ಯಕ್ಷ ಆರ್‌ .ವಿ.ಸುರೇಶ್‌, ಪತ್ರಬರಹಗಾರ ರಾಮಕೃಷ್ಣಪ್ಪ, ತಾಪಂ ಮಾಜಿ ಸದಸ್ಯ ಅಮರಪ್ಪ, ದೊಡ್ಡೊರು ಕೃಷ್ಣಯ್ಯ, ಯರ್ರನಾಗನಹಳ್ಳಿ ಗೋವಿಂದಪ್ಪ,ವಿಶ್ವನಾಥ್‌,ಭಾರತ್‌ನಗರಸುರೇಶ್‌,ಪಿಡಿಒಗಳಾದ ಹುಲಿಬೆಲೆ ಶ್ರೀನಿವಾಸರೆಡ್ಡಿ, ಡಿ.ಕೆ.ಹಳ್ಳಿ ಪಿಡಿಒ ವಸಂತ್‌ಕುಮಾರ್‌, ಹುಲಿಬೆಲೆ ಕಾರ್ಯದರ್ಶಿ ಶಿವು ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.