ವಿದ್ಯುತ್ ಮಸೂದೆ ತಿದ್ದುಪಡಿ ಬೇಡ
Team Udayavani, May 28, 2020, 7:37 AM IST
ಕೋಲಾರ: ಕೇಂದ್ರ ಸರ್ಕಾರ ಮಂಡಿಸಲು ಹೊರಟಿರುವ ಹೊಸ ವಿದ್ಯುತ್ ಮಸೂದೆ ಕೂಡಲೇ ಹಿಂಪಡೆ ಯಬೇಕೆಂದು ಒತ್ತಾ ಯಿಸಿ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ ದಿಂದ ಜಿಲ್ಲಾಧಿಕಾರಿ ಸತ್ಯಭಾಮಾರಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರಕಾರ ವಿದ್ಯುತ್ ಮಸೂದೆ (ತಿದ್ದುಪಡಿ), ಖಾಸಗೀಕರಣ ಮಾಡಿ ಬಂಡವಾಳ ಶಾಹಿಗಳಿಗೆ ಅನು ಕೂಲ ಮಾಡಿಕೊಡುವ ಯೋಜನೆಯನ್ನು ರೂಪಿ ಸುತ್ತಿರು ವುದು ಖಂಡನೀಯ.
ರೈತರು ಬಳಸುವ ವಿದ್ಯುತ್ ರಾಜ್ಯದಲ್ಲಿ ಉಚಿತವಾಗಿದ್ದು, ಈ ಬದಲಾವಣೆಯಿಂದ ಕಷ್ಟಕ್ಕೀಡಾಗುವ ಪರಿಸ್ಥಿತಿ ಇದೆ ಎಂದರು. ರಾಜ್ಯದಲ್ಲಿ ಕೊರೊನಾ ಆವರಿಸಿ ರೈತರ ಬದುಕು ಸಂಕಷ್ಟದಲ್ಲಿದೆ. ಇಂತಹ ಸಂದ ರ್ಭದಲ್ಲಿ ವಿದ್ಯುತ್ ಬಿಲ್ಲನ್ನು ತಿದ್ದುಪಡಿ ಮಾಡಿ ರೈತರ ಕೊಳವೆ ಬಾವಿಗಳ ಉಪಯೋಗಕ್ಕೆ ತೊಂದರೆಯಾಗುವ ಯೋಜನೆ ತಂದು ಅವರಿಗೆ ಮತ್ತಷ್ಟು ಕಣ್ಣೀರು ತರಿಸುವ ಯೋಜನೆಯಾಗಿದೆ ಎಂದು ಆರೋಪಿಸಿದರು.
ಕಿಸಾನ್ ಘಟಕ ರಾಜ್ಯಾಧ್ಯಕ್ಷ ಸಚಿನ್ ಮಿಗಾರ ಆದೇಶದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಬಿಲ್ (ತಿದ್ದುಪಡಿ) ತಡೆ ಹಿಡಿಯಬೇಕು ಎಂಬ ಆದೇಶ ಹಿಂಪಡೆಯಬೇಕೆಂದು ಒತ್ತಾಯಿ ಸಲಾಗುತ್ತಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಕೆಪಿಸಿಸಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಎಸ್.ಮಂಜುನಾಥ್, ಕಿಸಾನ್ ಘಟಕದ ತಾಲೂಕು ಅಧ್ಯಕ್ಷ ತೊರದೇವಂಡಹಳ್ಳಿ ನಾಗರಾಜ್, ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ ನೂರುಲ್ ಹುದಾ, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಬೊಮ್ಮ ಸಂದ್ರ ಕೃಷ್ಣೇಗೌಡ, ಕೂಟೇರಿ ಅರುಣ್ ಇನ್ನಿತರರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.