![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jun 25, 2020, 6:50 AM IST
ಕೋಲಾರ: ರೈತರನ್ನು ಕೃಷಿಯಿಂದ ಹೊರಗಿಟ್ಟು ಕಾರ್ಪೋರೆಟ್ ಕಂಪನಿಗಳಿಗೆ ಉತ್ತೇಜನ ನೀಡಲು ಹೊರಟಿದ್ದು, ಇಂತಹ ಅವೈಜ್ಞಾನಿಕ ಮರಣ ಶಾಸನವನ್ನು ಸರ್ಕಾರಗಳು ವಾಪಸ್ ಪಡೆಯಬೇಕು ಎಂದು ರಾಜ್ಯ ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಭೂ ಸ್ವಾಧೀನ ಕಾಯ್ದೆಯ ಮೂಲಕ ಕೃಷಿ ಭೂಮಿಯನ್ನು ಪಡೆದು ವಿದೇಶಿ ಕಂಪನಿಗಳ ಮೂಲಕ ಕೈಗಾರಿಕೆಗಳ ಸ್ಥಾಪನೆ ಮಾಡಲು ಬೇಕಾದ ಕಾನೂನನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ರೈತರು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಮೊದಲೇ ಸರ್ಕಾರ ಕಾಯ್ದೆ ವಾಪಸ್ ಪಡೆಯಬೇಕು ಎಂದು ಮನವಿ ಮಾಡಿದರು. ಈ ಹಿಂದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಇದೇ ರೀತಿ ಭೂಸ್ವಾಧೀನ ಕಾಯ್ದೆ ಜಾರಿಗೊಳಿಸಲು ಮುಂದಾದಾಗ ಕೆಲವು ರಾಜ್ಯಗಳು ವಿರೋಧಿಸಿದ್ದವು.
ಈ ವಿಚಾರದಲ್ಲಿ ನಿರ್ಣಯ ಕೈಗೊಳ್ಳುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ನೀಡಿತ್ತು. ಆದರೆ, ಸದನದಲ್ಲಿ ಚರ್ಚಿಸಿ ಬಹುಮತದಿಂದ ಅಂಗೀಕಾರ ಪಡೆಯದೇ ಏಕಾಏಕಿ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರೋಧಿ ಭಾಗವಾಗಿದೆ ಎಂದರು. ಗೋಷ್ಠಿಯಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ರಾಜ್ಯ ಕಾರ್ಯದರ್ಶಿ ವೀರಭದ್ರಸ್ವಾಮಿ, ಜಿಲ್ಲಾ ಅಧ್ಯಕ್ಷ ರಾಮೇಗೌಡ, ಪ್ರಧಾನ ಕಾರ್ಯದರ್ಶಿ ಮಾಜೇìನಹಳ್ಳಿ ನಾರಾಯಣಸ್ವಾಮಿ ಇದ್ದರು.
Kolar: ಬಾಲಕಿ ಮೇಲೆ ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ
BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು
Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!
Byrathi Suresh: ಪವರ್ ಪಾಲಿಟಿಕ್ಸ್, ಶೇರಿಂಗ್, ಕೇರಿಂಗ್ ಯಾವುದೂ ಇಲ್ಲ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.