ಖಾಸಗಿ ಶಾಲೆ ತೆರೆಯಲು ಅನುಮತಿ ಬೇಡ


Team Udayavani, Nov 26, 2019, 3:51 PM IST

KOLAR-TDY-1

ಮುಳಬಾಗಿಲು: 10 ವರ್ಷ ಖಾಸಗಿ ಶಾಲೆ ತೆರೆಯಲು ಅನುಮತಿ ನೀಡಬಾರದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು, ರಾಜಕೀಯ ಸಂಘಟನೆಯಲ್ಲಿ ತೊಡಗಿರುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತ ಸಂಘವು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ಗೆ ಮನವಿ ಸಲ್ಲಿಸಿತು.

ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ,ದೇಶ ಆರ್ಥಿಕವಾಗಿ ಮುಂದುವರಿಯಬೇಕಾದರೆಶಿಕ್ಷಣ ಪ್ರಮುಖ ಪಾತ್ರ ವಹಿಸುವುದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಿಸಬೇಕಿದೆ. ಕಟ್ಟ ಕಡೆಯ ವ್ಯಕ್ತಿಗೂ ಶಿಕ್ಷಣ ಸಿಗಬೇಕು. ಆಗ ಅವನ ಜೀವನ ಉತ್ತಮ ರೀತಿಯಲ್ಲಿರೂಪಿಸಬಹುದು. ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಈ ಕನಸು ಕನಸಾಗೇ ಉಳಿದಿದೆ ಎಂದು ಹೇಳಿದರು. ದೇಶದಲ್ಲಿ ಏಕರೂಪದ ಶಿಕ್ಷಣ ಜಾರಿಯಾಗಬೇಕೆಂಬ ಕನಸು ಈಡೇರುವ ಲಕ್ಷಣಗಳಿಲ್ಲ. ಖಾಸಗಿ ಶಾಲೆಗಳು ಕಾರ್ಪೊರೇಟ್‌ ಕಂಪನಿ ಮಾಲಿಕರಿಗೆ ಚಿನ್ನದ ಮೊಟ್ಟೆ ಇಡುವ ಶಾಲೆಗಳಾಗಿವೆ ಎಂದು ಆರೋಪಿಸಿದರು.

ರಾಜಕೀಯ, ವಿವಿಧ ಸಂಘಟನೆ ಹಾಗೂ ತಮ್ಮ ವ್ಯಾಪ್ತಿಗೆ ಒಳಪಡದ ಕೆಲಸಗಳಲ್ಲಿ ಶಿಕ್ಷಕರು ತೊಡಗಿಸಿಕೊಳ್ಳುತ್ತಿರುವ ಕಾರಣ ಪಾಠ ಪ್ರವಚನಗಳು ನಡೆಯದೇ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗುತ್ತಿದೆ. ಅಂತಹ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಸೂಕ್ತ ಅಧಿಕಾರಿಗಳ ತಂಡರಚನೆ ಮಾಡಬೇಕು ಎಂದು ಒತ್ತಾಯಿಸಿದರು.

ತಾಲೂಕು ಅಧ್ಯಕ್ಷ ಫಾರುಕ್‌ಪಾಷ ಮಾತನಾಡಿ, ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಿಸಬೇಕಾದ ಶಿಕ್ಷಕರು ಬಡ್ಡಿ ವ್ಯವಹಾರ, ರಾಜಕೀಯ, ಸಂಘಟನೆಗಳಲ್ಲಿ ತೊಡಗಿಕೊಂಡು, ಕ್ಷೇತ್ರಕ್ಕೆ ದ್ರೋಹಬಗೆಯುತ್ತಿದ್ದಾರೆ ಎಂದು ದೂರಿದರು. ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ನಾಗೇಶ್‌, ಸರ್ಕಾರಿ ಶಾಲೆ ಅಭಿವೃದ್ಧಿ ಪಡಿಸಲು ಸರ್ಕಾರ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡುತ್ತಿದೆ. ಅದರ ಜೊತೆಗೆ ಆಂಗ್ಲ ಮಾಧ್ಯಮ ಪ್ರಾರಂಭ ಮಾಡಲು ಈಗಾಗಲೇ ಸರ್ಕಾರ ಕ್ರಮ ಕೈಗೊಂಡಿದೆ. ಆದರೂ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗುತ್ತಿದ್ದಾರೆ. ಅದರ ಜೊತೆಗೆ ಶಿಕ್ಷಕರು ರಾಜಕೀಯ ಸಂಘಟನೆಯಲ್ಲಿ ತೊಡಗಿರುವ ಬಗ್ಗೆ ದೂರುಗಳು ಬಂದಿವೆ. ಇದಕ್ಕೆ ಸಂಬಂಧಪಟ್ಟಂತೆ ಉಪ ನಿರ್ದೇಶಕರಿಗೆ ನೋಟಿಸ್‌ ಜಾರಿ ಮಾಡಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಮಂಜುನಾಥ್‌, ಸಹದೇವಣ್ಣ, ಮೀಸೆ ವೆಂಕಟೇಶಪ್ಪ, ಜುಬೇರ್‌ ಪಾಷ, ರಾಜೇಶ್‌ಕಲೆ, ಹೆಬ್ಬಣಿ ಆನಂದೆಡ್ಡಿ, ಯಲುವಹಳ್ಳಿ ಪ್ರಭಾಕರ್‌, ನಲ್ಲಂಡಹಳ್ಳಿ ಕೇಶವ, ಪೊಂಬರಹಳ್ಳಿ ನವೀನ್‌, ವೇಣು, ಸಾಗರ್‌, ನವೀನ್‌ ಅಮರ್‌ನಾಥ್‌, ರೆಹಮಾನ್‌ ಮಂಜುನಾಥರೆಡ್ಡಿ, ರಾಮಸ್ವಾಮಿ ಚಂದ್ರಪ್ಪ, ಪುತ್ತೇರಿ ರಾಜು ಇದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.