ಮಳೆ ಕೊಯ್ಲಿಗೆ 10 ಕಟ್ಟಡ ಗುರ್ತಿಸಿ
ಸರ್ಕಾರಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ ಕಡ್ಡಾಯ: ಡೀಸಿ ಮಂಜುನಾಥ್
Team Udayavani, Aug 7, 2019, 3:13 PM IST
•ಕೋಲಾರ ಜಿಲ್ಲೆಯಲ್ಲಿ ಜೂನ್, ಜುಲೈನಲ್ಲಿ ವಾಡಿಕೆ ಮಳೆಗಿಂತ ಶೇ.20 ಕೊರತೆ: ಜಿಲ್ಲಾಧಿಕಾರಿ ಮಂಜುನಾಥ್
ಕೋಲಾರ: ಜಲಶಕ್ತಿ ಅಭಿಯಾನದಡಿ ಮಳೆ ನೀರು ಸಂರಕ್ಷಣೆಗೆ ಒತ್ತು ನೀಡಿ, ಜಿಲ್ಲೆಯ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಇಲಾಖೆ ಅನುದಾನದಲ್ಲಿ ಮಳೆಕೊಯ್ಲು ಅಳವಡಿಸಿಕೊಳ್ಳಬೇಕು ಎಂಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಅನುದಾನ ಲಭ್ಯವಿರದಿದ್ದರೆ ಪಟ್ಟಿಸಿದ್ಧಪಡಿಸಿ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಜಲಶಕ್ತಿ ಅಭಿಯಾನದಡಿ ಮಳೆ ನೀರು ಇಂಗಿಸುವುದು, ಸಸಿ ನೆಡುವುದು, ಕೆರೆ, ಕಲ್ಯಾಣಿ ಪುನಶ್ಚೇತನಕ್ಕೆ ಒತ್ತು ನೀಡಲಾಗುವುದು ಎಂದರು.
ಮಳೆ ನೀರು ಕೊಯ್ಲು ಅಳವಡಿಸಿ: ಜಿಲ್ಲೆಯ ಪ್ರತಿ ತಾಲೂಕಿಲ್ಲೂ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳು ಒಂದು ಕೆರೆ, ಕಾಲುವೆ ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್‌ಗೆ ಸೂಚಿಸಲಾಗಿದ್ದು, ಚಾಲನೆ ನೀಡಲಾಗಿದೆ. ಅಂಗನವಾಡಿಯಿಂದ ಹಿಡಿದು ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳಲ್ಲಿ ಮಳೆ ಕೊಯ್ಲು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
10 ಕಟ್ಟಡ ಗುರುತಿಸಿ: ಯಾವ್ಯಾವ ಕಟ್ಟಡದಲ್ಲಿ ವ್ಯವಸ್ಥೆ ಇದೆ, ಇಲ್ಲ ಎಂಬುದನ್ನು ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಆಯಾ ಇಲಾಖೆಗಳಲ್ಲಿ ಅನುದಾನ ಲಭ್ಯವಿರದಿದ್ದರೆ ವಿಶೇಷ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದ ಅವರು, ಖಾಸಗಿ ಕಟ್ಟಡಗಳಾದ ಕಲ್ಯಾಣ ಮಂಟಪ, ಬೃಹತ್ ವಾಣಿಜ್ಯ ಮಳಿಗೆಗಳಲ್ಲಿ ಅಳವಡಿಸಿಕೊಳ್ಳಬೇಕು, ಈ ಬಗ್ಗೆ ಟಾಪ್ 10 ಕಟ್ಟಡ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಸಸಿ ಪೂರೈಸಿ: ಕೆಜಿಎಫ್‌ನ ಬೆಮೆಲ್ನಲ್ಲಿ 6500 ಕಾರ್ಮಿಕರಿದ್ದಾರೆ. ಪ್ರತಿ ಇಬ್ಬರು ಒಂದೊಂದು ಸಸಿ ನೆಟ್ಟರೆ 6500 ಸಸಿಗಳನ್ನು ಬೆಳೆಸಬಹುದು. ಈ ದಿಸೆಯಲ್ಲಿ ಅಗತ್ಯ ಸಸಿಗಳನ್ನು ಪೂರೈಸುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ ಎಂದು ಹೇಳಿದರು.
ಟ್ಯಾಂಕರ್ ನೀರು ಪೂರೈಕೆ: ಜಿಲ್ಲೆಯ 143 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 71 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನಿತ್ಯ 181 ಟ್ರಿಪ್ ನೀರು ಸರಬರಾಜು ಮಾಡಲಾಗುತ್ತಿದೆ. 72 ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನಗರ, ಪುರಸಭೆ ವ್ಯಾಪ್ತಿಯ 28 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಇದ್ದು, 25 ಟ್ಯಾಂಕರ್‌ಗಳಲ್ಲಿ ನಿತ್ಯ 105 ಟ್ರಿಪ್ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಖಾಸಗಿ ಬೋರ್‌ವೆಲ್ಗೆ ಅವಕಾಶವಿಲ್ಲ: ಹೊಸ ಬೋರ್‌ವೆಲ್ ಕೊರೆಯಿಸಿದರೂ ಸಫಲತೆ ಪ್ರಮಾಣ ಕಡಿಮೆಯಾದ್ದರಿಂದ ಅವಕಾಶ ಇದ್ದೆಡೆ ಬೋರ್‌ವೆಲ್ ಕೊರೆಯಿಸಲು ಸೂಚಿಸಲಾಗಿದೆ. ಸಾರ್ವಜನಿಕ ಬಳಕೆಗೆ, ಗಂಗಾಕಲ್ಯಾಣ ಯೋಜನೆಯಡಿ ಬೋರ್‌ವೆಲ್ ಕೊರೆಯಿಸಲು ಅನುಮತಿ ನೀಡಲಾಗಿದೆ. ಖಾಸಗಿಯಾಗಿ ಬೋರ್‌ವೆಲ್ ಕೊರೆಯಿಸಲು ಅನುಮತಿ ನೀಡುತ್ತಿಲ್ಲ. ಈ ಬಗ್ಗೆ ರಿಗ್‌ಮಾಲಿಕರಿಗೂ ಸೂಚನೆ ನೀಡಲಾಗಿದೆ ಎಂದರು. ಕಳೆದ ವರ್ಷ ಜಿಲ್ಲೆಯ ಎಲ್ಲ 6 ತಾಲೂಕುಗಳಲ್ಲೂ ಬರಪೀಡಿತವಾಗಿತ್ತು. ಈ ವರ್ಷವೂ ಜೂನ್, ಜುಲೈನಲ್ಲಿ ವಾಡಿಕೆ ಮಳೆಗಿಂತ ಶೇ.20 ಕೊರತೆ ಎದುರಾಗಿರುವುದ ರಿಂದ ಬರ ನಿರ್ವಹಣೆ ಮುಂದುವರಿಸುವಂತೆ ಸರ್ಕಾರ ಸೂಚಿಸಿದೆ ಎಂದರು.
ರಾಜ್ಯದ 65 ತಾಲೂಕುಗಳಲ್ಲಿ ತೀವ್ರ ಬರದ ಪರಿಸ್ಥಿತಿ ಇರುವ ತಾಲೂಕುಗಳ ಪೈಕಿ ಜಿಲ್ಲೆಯ ಮಾಲೂರು ಮತ್ತು ಬಂಗಾರ ಪೇಟೆಯನ್ನು ಗುರುತಿಸಲಾಗಿದೆ. ಜಿಲ್ಲೆ ಯಲ್ಲಿ 13 ವಾರಕ್ಕೆ ಸಾಕಾಗುವಷ್ಟು ಮೇವು ಲಭ್ಯವಿದ್ದರೂ ತೊಂದರೆ ಆಗದಂತೆ ಈ ಎರಡು ತಾಲೂಕುಗಳಲ್ಲಿ ಗೋಶಾಲೆ ತೆರೆ ಯುವಂತೆ ಅಥವಾ ಸ್ವಯಂಸೇನಾ ಸಂಸ್ಥೆಗಳು ನಡೆಸುತ್ತಿರುವ ಗೋ ಶಾಲೆಯಲ್ಲಿ ವ್ಯವಸ್ಥೆ ಮಾಡುವಂತೆ ಸರ್ಕಾರ ನಿರ್ದೇಶನ ನೀಡಿದೆ ಎಂದು ಜಿಲ್ಲಾಧಿಕಾರಿ ಮಂಜು ನಾಥ್ ತಿಳಿಸಿದರು.
ಮಾಲೂರಿನ ಗಂಗಾಪುರದಲ್ಲಿ ರಾಘ ವೇಂದ್ರ ಗೋ ಆಶ್ರಮ ಹಾಗೂ ಬಂಗಾರ ಪೇಟೆಯ ಬ್ಯಾಟರಾಯನಪುರದಲ್ಲಿನ ನಂದಿ ಗೋಶಾಲೆ ಇರುವುದರಿಂದ ಇವರ ಮೂಲಕ ಸ್ಥಳೀಯ ಗ್ರಾಮಗಳ ರೈತರ ಜಾನುವಾರುಗಳಿಗೆ ಮೇವು, ನೀರು ಸೌಲಭ್ಯ ಕಲ್ಪಿಸಲಾಗುವುದು. ಪ್ರತಿ ಜಾನು ವಾರಿಗೆ ದಿನಕ್ಕೆ 70 ರೂ.ನಂತೆ ಸರ್ಕಾರ ವೆಚ್ಚ ಭರಿಸುತ್ತದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಿದರು.
ಮೇವಿನ ಕೊರತೆ ನೀಗಿಸಲು ನೀರಿನ ಸೌಲಭ್ಯವುಳ್ಳ ರೈತರಿಗೆ ಮಿನಿ ಕಿಟ್ ನೀಡಲಾಗುವುದು, ಕೆ.ಸಿ. ವ್ಯಾಲಿ ವ್ಯಾಪ್ತಿಯ ರೈತರಿಗೆ ಮೇವು ಬೆಳೆಸಲು ಪ್ರೋತ್ಸಾಹ ನೀಡಲಾಗುವುದು ಎಂದ ಅವರು, ಈ ಭಾಗದಿಂದ ಹೊರ ರಾಜ್ಯಗಳಿಗೆ ಮೇವು ಸರಬರಾಜು ನಿಷೇಧ ಮುಂದುವರಿದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.