ಮತ್ತೆ ಮೂವರಲ್ಲಿ ಕೋವಿಡ್‌ 19 ಪಾಸಿಟಿವ್‌

Team Udayavani, Jun 15, 2020, 7:32 AM IST

postive 3

ಕೋಲಾರ: ನಗರದ ವಿವಿಧೆಡೆ ಕೋವಿಡ್‌ 19 ಸೋಂಕಿನ ಮೂರು ಪ್ರಕರಣಗಳು ಪತ್ತೆಯಾ ಗಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 44ಕ್ಕೇರಿದಂತಾಗಿದೆ. ಕೋಲಾರ ನಗರದಲ್ಲಿಯೇ ಇದುವರೆವಿಗೂ 10 ಪ್ರಕರಣಗಳು  ಪತ್ತೆಯಾಗಿದ್ದು, ಐದು ನಿರ್ಬಂಧಿತ ವಲಯಗಳನ್ನು ಸೃಜಿಸಿ ಪೊಲೀಸ್‌ ಇಲಾಖೆ ಅಗತ್ಯ ಬಂದೋಬಸ್ತ್ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.

ನಗರದ ಷಾಹೀನ್‌ಷಾ ನಗರದ ವಾಸಿ 40 ವರ್ಷದ ಆಟೋ ಚಾಲಕನಿಗೆ ಸೋಂಕು ಖಚಿತವಾಗಿದೆ. ಮತ್ತೂಂದು ಪ್ರಕರಣದಲ್ಲಿ ನಗರದ ಪಿಡಬ್ಲೂಡಿ ಕ್ವಾರ್ಟರ್ಸ್‌ನ 35 ವರ್ಷದ ಮತ್ತೋರ್ವ ವ್ಯಕ್ತಿಗೂ ಕೋವಿಡ್‌ 19 ಸೋಂಕು ಪತ್ತೆಯಾಗಿದೆ. ಹಾಗೆಯೇ ಇಲ್ಲಿನ ಚಿಕ್ಕಬಳ್ಳಾಪುರ ರಸ್ತೆಯ ರಹಮತ್‌ ನಗರದ ಸಮೀಪ  ಅರಹಳ್ಳಿ ಗೇಟ್‌ ನಿವಾಸಿ 22 ವರ್ಷದ ನೆರೆ ರಾಜ್ಯದ ಕಾರ್ಮಿಕನಿಗೂ ಸೋಂಕು ದೃಢಪಟ್ಟಿದೆ.

ಈತ ಮಧ್ಯಪ್ರದೇಶದಿಂದ ಹಿಂದಿರುಗಿದ್ದ ಖಾಸಗಿ ಇಟ್ಟಿಗೆ ಕಾರ್ಖಾನೆ ನೌಕರ ಎನ್ನಲಾಗಿದ್ದು, ಈತ ಹಲವಾರು ಮಂದಿಯೊಂದಿಗೆ ಸಂಪರ್ಕ  ಹೊಂದಿದ್ದ ಎನ್ನಲಾಗಿದೆ. ಈ ಮೂವರನ್ನು ನಗರದ ಕೋವಿಡ್‌ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಮನೆಯಲ್ಲಿಯೇ ಕ್ವಾರಂಟೈನ್‌ ಮಾಡಲಾಗುತ್ತಿದೆ.

ಸೋಂಕಿತರ ಸಂಖ್ಯೆ 44ಕ್ಕೇ ಏರಿಕೆ: ಕೋಲಾರ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 44 ಕ್ಕೇರಿದ್ದು, ಗುಣಮುಖರಾಗಿ 26 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಮನೆ ಕ್ವಾರಂಟೈನ್‌ನಲ್ಲಿದ್ದಾರೆ. ಉಳಿದಂತೆ 18 ಸಕ್ರಿಯ ಪ್ರಕರಣಗಳು  ಚಿಕಿತ್ಸೆ ಹಂತದಲ್ಲಿ ಆಸ್ಪತ್ರೆಯಲ್ಲಿರುವಂತಾಗಿದೆ. ತಾಲೂಕುವಾರು ಸೋಂಕಿತರದಲ್ಲಿ ಕೋಲಾರದಿಂದ 11, ಮಾಲೂರಿನಲ್ಲಿ 3, ಬಂಗಾರಪೇಟೆಯಲ್ಲಿ 10, ಕೆಜಿಎಫ್‌ನಿಂದ 4, ಮುಳಬಾಗಿಲಿನಿಂದ 10 ಹಾಗೂ ಶ್ರೀನಿವಾಸಪುರದಿಂದ 6 ಮಂದಿ  ಸೋಂಕಿತರು ಪತ್ತೆಯಾಗಿದ್ದಾರೆ.

ಪ್ರಸ್ತುತ ಮುಳಬಾಗಿಲು ಹೊರತುಪಡಿಸಿ ಕೋಲಾರ ಜಿಲ್ಲೆಯ ಎಲ್ಲಾ ಐದು ತಾಲೂಕುಗಳಲ್ಲಿಯೂ ಸೋಂಕಿತರು ಇದ್ದಂತಾಗಿದೆ. ಕೋಲಾರದಲ್ಲಿ 8, ಮಾಲೂರಿನಲ್ಲಿ 1, ಬಂಗಾರಪೇಟೆಯಲ್ಲಿ 3,  ಕೆಜಿಎಫ್ನಲ್ಲಿ 1, ಮುಳಬಾಗಿಲಿನಲ್ಲಿ 0, ಶ್ರೀನಿವಾಸಪುರದಿ 5 ಸಕ್ರಿಯ ಪ್ರಕರಣಗಳಿವೆ. ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ನಗರದ ಪಿಡಬ್ಲೂಡಿ ಕ್ವಾರ್ಟರ್ಸ್‌, ರಹಮತ್‌ ನಗರ, ಷಾಹೀನ್‌ಷಾ ನಗರಗಳ ಸೋಂಕಿತರು ವಾಸಿಸುತ್ತಿದ್ದ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ಈಗಾಗಲೇ ಗೌರಿಪೇಟೆ, ಕುರುಬರಪೇಟೆ, ಕೋಟೆ ಪ್ರದೇಶಗಳು ಸೀಲ್‌ಡೌನ್‌  ಆಗಿವೆ. ಕೋಲಾರದ ಮೊಟ್ಟ ಮೊದಲ ಸೀಲ್‌ಡೌನ್‌ ಪ್ರದೇಶ ಗಾಂಧಿನಗರ ಇತ್ತೀಚಿಗೆ ಡಿನೋಟಿಫೀಕೇಷನ್‌ ಮೂಲಕ ಮುಕ್ತಗೊಂಡಿತ್ತು. ಸೀಲ್‌ಡೌನ್‌ ಪ್ರದೇಶಗಳಿಗೆ ನಗರಸಭೆ ಆಯುಕ್ತ ಶ್ರೀಕಾಂತ್‌, ನಗರಸಭಾ ಸದಸ್ಯ ಅಂಬರೀಶ್‌ ಇತರರು ಭೇಟಿ ನೀಡಿ ನಾಗರಿಕರಿಗೆ ಅಗತ್ಯ ವಸ್ತುಗಳ ಸರಬರಾಜಿಗೆ ಅನುಕೂಲವಾ  ಗುವಂತೆ ಸ್ವಯಂಸೇವಕರನ್ನು  ನೇಮಿಸಿದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.