ಡಿಕೆಶಿ ವಿರುದ ವ್ಯಕ್ತಿಗತ ಟೀಕೆ ಸರಿಯಲ್ಲ : ಸುದರ್ಶನ್‌

Team Udayavani, Apr 29, 2020, 12:18 PM IST

DKS

ಕೋಲಾರ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಪ್ರವಾಸದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರನ್ನು
ವ್ಯಕ್ತಿಗತವಾಗಿ ಟೀಕೆ ಮಾಡಿರುವುದು ಸರಿಯಲ್ಲ ಎಂದು ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕೋವಿಡ್‌-19  ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ರಾಜ್ಯದ ಹಿತ, ಜನತೆಯ ಹಿತದೃಷ್ಟಿ ಹಾಗೂ ಮಾನವೀಯತೆಯಿಂದ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊವಿಡ್‌-19 ಎದುರಿಸಲು ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ಮತ್ತು ಸಲಹೆಯನ್ನು
ನೀಡಿ ಸರ್ಕಾರದ ಜೊತೆ ನಿಂತು ರಾಜ್ಯದಲ್ಲಿ ಕೊವಿಡ್‌ ನಿಯಂತ್ರಣಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಜೊತೆಗೆ ಪಕ್ಷದ ವತಿಯಿಂದ ಟಾಸ್ಕ್ ಫೋರ್ಸ್‌ ಸಮಿತಿ ಸೇರಿದಂತೆ ಅನೇಕ ಸಮಿತಿಗಳನ್ನು ನೇಮಕ ಮಾಡಿ ರಾಜ್ಯದ ಜನತೆಗೆ ನೆರವಾಗುವಂತಹ ಕೆಲಸವನ್ನೂ ಮಾಡುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಡಿಕೆಶಿ ಅವರನ್ನು ವೈಯಕ್ತಿಕವಾಗಿ ಟೀಕೆ ಮಾಡಿರುವುದು ಸಚಿವ ಈಶ್ವರಪ್ಪಗೆ ಶೋಭೆ ತರುವಂತಹದಲ್ಲ ಎಂದಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು ಹಿಂದೆ ಸಚಿವರಾಗಿದ್ದು, ಅವರ ಅನುಭವ ಮತ್ತು ಅವರಿಗೆ ಇರುವ ಮಾಹಿತಿಯನ್ನು ಹೇಳಿದ್ದಾರೆ. ಇದನ್ನು ಈಶ್ವರಪ್ಪ ಅವರು ಹೇಳಿಕೆಯನ್ನು ರಚನಾತ್ಮಕವಾಗಿ ತೆಗೆದುಕೊಳ್ಳಬೇಕೆ ಹೊರತು, ಈ ರೀತಿ ವೈಯಕ್ತಿಕವಾಗಿ ಟೀಕೆ ಮಾಡುವ ಸಂದರ್ಭ ಇದಾಗಿಲ್ಲ. ರಾಮನಗರ ವಿಚಾರವಾಗಿ ಡಿಕೆಶಿ ಮಾಡಿರುವ ಹೇಳಿಕೆ ಸರಿಯಾಗಿ ಇದೆ.

ಯಾವುದೇ ನಾಯಕರು ತಮ್ಮ ಸ್ವಂತ ಜಿಲ್ಲೆಯ ವಿಚಾರ ಬಂದಾಗ ಅವರ ಜಿಲ್ಲೆಗೆ ಆದ್ಯತೆ ನೀಡುತ್ತಾರೆ. ಇದನ್ನು ಕೂಡ ರಾಜಕೀಯವಾಗಿ ಟೀಕಿಸುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ. ಈಶ್ವರಪ್ಪ ಅವರು ನೀಡಿರುವ ಹೇಳಿಕೆ ತಕ್ಷಣದಿಂದ ವಾಪಸ್‌ ಪಡೆಯಬೇಕೆಂದು ಸುದರ್ಶನ್‌ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.