ಫೋನ್‌ ಇನ್‌: ಮಕ್ಕಳ ಆತಂಕ ನಿವಾರಣೆ

212 ದೂರವಾಣಿ ಕರೆ, 300ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಉತ್ತರ ; ಡಿಡಿಪಿಐ, ಅಧಿಕಾರಿಗಳು ಭಾಗಿ

Team Udayavani, May 1, 2020, 2:45 PM IST

ಫೋನ್‌ ಇನ್‌: ಮಕ್ಕಳ ಆತಂಕ ನಿವಾರಣೆ

ಕೋಲಾರ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಫೋನ್‌ ಇನ್‌ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ಸಿಕ್ಕಿದ್ದು, 212 ಮಕ್ಕಳು ದೂರವಾಣಿ ಕರೆ ಮಾಡಿದ್ದರು. ಸಂಪನ್ಮೂಲ ವ್ಯಕ್ತಿಗಳು 300ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಉತ್ತರಿಸಿದರು ಎಂದು ಡಿಡಿಪಿಐ ಕೆ.ರತ್ನಯ್ಯ ತಿಳಿಸಿದರು.

ಗುರುವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕಾಗಿ ಹಮ್ಮಿಕೊಂಡಿದ್ದ ಫೋನ್‌ ಇನ್‌ ಕಾರ್ಯಕ್ರಮ ನೇತೃತ್ವ ವಹಿಸಿ ಅವರು ಈ ವಿವರ ನೀಡಿದರು. ಕೋವಿಡ್ ಸೋಂಕು ಹರಡುವಿಕೆ ತಡೆಗಾಗಿ ಪರೀಕ್ಷೆ ಮುಂದೂಡಲಾಗಿದೆ. ಆದರೆ, ವಿದ್ಯಾರ್ಥಿಗಳಲ್ಲಿನ ಆತಂಕ ಪರಿಹಾರಕ್ಕೆ ಒತ್ತು ನೀಡುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಫೋನ್‌ ಇನ್‌ ಕಾರ್ಯಕ್ರಮ ಹಮ್ಮಿಕೊಂಡು ಮಕ್ಕಳ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾಗಿ ತಿಳಿಸಿದರು.

ಪರೀಕ್ಷೆ ನಡೆಯುತ್ತೆ: ಪರೀಕ್ಷಾ ನೋಡಲ್‌ ಅಧಿಕಾರಿ ಎ.ಎನ್‌.ನಾಗೇಂದ್ರಪ್ರಸಾದ್‌, ಮಕ್ಕಳು ದೂರವಾಣಿ ಕರೆ ಮಾಡಿ ಪರೀಕ್ಷೆ ನಡೆಯುತ್ತದೆಯೇ? ಹಾಗೆಯೇ ಪಾಸ್‌ ಮಾಡುತ್ತಾರೆಂಬ ವದಂತಿಗಳಿದ್ದು ನಿಜವೇ ಎಂದು ಪ್ರಶ್ನಿಸಿದರು ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡುವುದಿಲ್ಲ, ಮಕ್ಕಳು ವದಂತಿಗಳಿಗೆ ಕಿವಿಗೊಡದಿರಿ, ಆತಂಕ ಬೇಡ, ನಿಮ್ಮ ಶೈಕ್ಷಣಿಕ ಜೀವನಕ್ಕೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಧೈರ್ಯ ತುಂಬಿದ್ದಾಗಿ ತಿಳಿಸಿದರು. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆಯೇ ವೇಳಾಪಟ್ಟಿ ಪ್ರಕಟಿಸಿ, ಪ್ರತಿ ವಿಷಯದ ಪರೀಕ್ಷೆ ನಡುವೆ ಓದಲು ಅವಕಾಶವೂ ನೀಡಲಾಗುತ್ತದೆ, 10 ದಿನಗಳ ಪುನರ್ಮನನ ತರಗತಿಯೂ ನಡೆಯುತ್ತದೆ, ಆತಂಕಬೇಡ, ನಿಮ್ಮ ಅಧ್ಯಯನ ಮುಂದುವರಿಸಿ ಎಂದು ತಿಳಿಸಿದರು.

ಮಕ್ಕಳಿಂದ ಪ್ರಶ್ನೆಗಳು: ಹಲವಾರು ವಿದ್ಯಾರ್ಥಿಗಳು ಎರಡು-ಮೂರು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡರು. ಒಟ್ಟು 212 ಮಕ್ಕಳು ದೂರವಾಣಿ ಕರೆ ಮಾಡಿದ್ದು, ಅದರಲ್ಲಿ ಕನ್ನಡಕ್ಕೆ ಸಂಬಂಧಿಸಿದಂತೆ 10 ಪ್ರಶ್ನೆ, ಇಂಗ್ಲಿಷ್‌ ವಿಷಯಕ್ಕೆ 12 ಪ್ರಶ್ನೆ, ಗಣಿತಕ್ಕೆ 50 ಪ್ರಶ್ನೆ, ಸಮಾಜ ವಿಜ್ಞಾನಕ್ಕೆ 22 ಹಾಗೂ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಅತಿ ಹೆಚ್ಚು ಅಂದರೆ 60 ಪ್ರಶ್ನೆಗಳನ್ನು ಮಕ್ಕಳು ಕೇಳಿ ಉತ್ತರ ಪಡೆದುಕೊಂಡಿದ್ದಾಗಿ ವಿವರಿಸಿದರು. ಫೋನ್‌ ಇನ್‌ ಕಾರ್ಯಕ್ರಮದಲ್ಲಿ ವಿಷಯವಾರು ಸಮಸ್ಯೆಗಳಿಗೆ ಸಂಪನ್ಮೂಲ ವ್ಯಕ್ತಿಗಳಾದ ಎಸ್‌.ಅನಂತಪದ್ಮನಾಭ್‌, ಬಿ.ಕೆ.ನಾಗರಾಜ್‌, ಫಣಿಮಲರ್‌, ಎನ್‌.ಎಸ್‌ .ಭಾಗ್ಯಾ, ನರಸಿಂಹಪ್ರಸಾದ್‌, ಬಸವರಾಜ್‌, ಶೋಭಾ ಉತ್ತರಿಸಿ ಆತಂಕ ನಿವಾರಿಸಿದರು.

ಪರೀಕ್ಷಾ ಸಿದ್ಧತೆ, ವೇಳಾಪಟ್ಟಿ ಮತ್ತಿತರ ಸಮಸ್ಯೆಗಳಿಗೆ ಡಿಡಿಪಿಐ ಕೆ.ರತ್ನಯ್ಯ, ಪರೀಕ್ಷಾ ನೋಡಲ್‌ ಅಬಕಾರಿ ಎ.ಎನ್‌ .ನಾಗೇಂದ್ರಪ್ರಸಾದ್‌, ಶಿಕ್ಷಣಾಧಿಕಾರಿ ಸಿ.ಆರ್‌. ಅಶೋಕ್‌, ಡಿವೈಪಿಸಿ ಮೋಹನ್‌ ಬಾಬು, ಎವೈಪಿಸಿ ಸಿದ್ದೇಶ್‌, ವಿಷಯ ಪರಿವೀಕ್ಷಕ ಗಾಯತ್ರಿ, ಕೃಷ್ಣಪ್ಪ ಉತ್ತರಿಸಿದರು.

ಟಾಪ್ ನ್ಯೂಸ್

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.