ಬಾಡಿಗೆ ಕಟ್ಟಡದಲ್ಲಿ ಪೊಲೀಸರ ಕಾರ್ಯನಿರ್ವಹಣೆ

Team Udayavani, Mar 20, 2020, 3:11 PM IST

ಬಾಡಿಗೆ ಕಟ್ಟಡದಲ್ಲಿ ಪೊಲೀಸರ ಕಾರ್ಯನಿರ್ವಹಣೆ

ಮುಳಬಾಗಿಲು: ತಾಲೂಕಿನಲ್ಲಿ ಸರ್ಕಾರಿ ಜಮೀನು ಕಬಳಿಸುತ್ತಿದ್ದರೂ ಜಾಣ ಕುರುಡರಂತೆ ವರ್ತಿಸುವ ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮಾಂತರ ಪೊಲೀಸ್‌ ಠಾಣೆ ನಿರ್ಮಾಣಕ್ಕೆ ಸರ್ಕಾರದಿಂದ ಕೋಟ್ಯಂತರ ರೂ. ಮಜೂರಾಗಿದ್ದರೂ ಜಮೀನು ಮಂಜೂರು ಮಾಡಲು ನಿರ್ಲಕ್ಷಿಸಿದ್ದಾರೆ.

ಇದರಿಂದ ಪೊಲೀಸ್‌ ಠಾಣೆಯು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುವಂತಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ತಾಲೂಕಿನ 186 ಗ್ರಾಮಗಳಲ್ಲಿ ಜನರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಮುಳಬಾಗಿಲು ಠಾಣೆಯನ್ನು ನಗರ ಠಾಣೆಯನ್ನಾಗಿ ರೂಪಿಸಿ, ಗ್ರಾಮಾಂತರ ಠಾಣೆಯನ್ನು ಮಂಜೂರು ಮಾಡಿದೆ. ಅದಕ್ಕೆ ಮೂಲ ಸೌಕರ್ಯ ಕಲ್ಪಿಸಲು 3.5 ವರ್ಷಗಳ ಹಿಂದೆ ಕೋಟ್ಯಂತರ ರೂ. ಮಂಜೂರು ಮಾಡಿದೆ. ಅಂತೆಯೇ 2016ರ ಅಕ್ಟೋಬರ್‌ನಲ್ಲಿ ಜಿಲ್ಲಾ ರಕ್ಷಣಾಧಿ ಕಾರಿಗಳ ಆದೇಶದಂತೆ ಮುಳಬಾಗಿಲು ಗ್ರಾಮಾಂತರ ಠಾಣೆ ಸ್ಥಳೀಯ ಅಧಿಕಾರಿಗಳು ಅಗತ್ಯ ಸಿಬ್ಬಂದಿಗಳಿಂದ ಕಾರ್ಯಾರಂಭಿಸಿದೆ.

2017ರ ಆಗಸ್ಟ್‌ 16 ರಂದು ನರಸಿಂಹತೀರ್ಥದ ಶ್ರೀಪಾದರಾಜ ಮಠದ ಕಟ್ಟಡವೊಂದನ್ನು 27 ಸಾವಿರ ರೂ.ಗಳಿಗೆ ಬಾಡಿಗೆಗೆ ಪಡೆದುಕೊಂಡು ಠಾಣೆ ಆರಂಭಿಸಿದರು. ಠಾಣಾ ವ್ಯಾಪ್ತಿಯ ಹಳ್ಳಿಗಳ ಜನರಿಂದ ಬರುವ ದೂರುಗಳನ್ನು ರಾಜೀ ಮಾಡಿಸುವ ಮೂಲಕ ಸಮಸ್ಯೆ ಹರಿಸುತ್ತಿದ್ದಾರೆ. ಅಲ್ಲದೆ, ಕಠಿಣ ಸನ್ನಿವೇಶಗಳ ಪ್ರಕರಣಗಳನ್ನು ದಾಖಲು ಮಾಡಿ, ಕಾನೂನು ಕಾಪಾಡುತ್ತಿರುತ್ತಾರೆ.

ಪೊಲೀಸ್‌ ಅಧಿಕಾರಿಗಳು ನಗರದ ಅಂಚಿನಲ್ಲಿಯೇ ಜನರ ಅನುಕೂಲಕ್ಕೆ ತಕ್ಕಂತ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಮುಳಬಾಗಿಲು ರೂರಲ್‌ ಸ.ನಂ.715ರಲ್ಲಿನ 1.36 ಎಕರೆ ಜಮೀನು ಮಂಜೂರು ಮಾಡಲು ಕೋರಿ, 2017 ಮತ್ತು 2018ರಲ್ಲಿ 2 ಸಾರಿ ತಹಶೀಲ್ದಾರ್‌ ಕಚೇರಿಗೆ ಅರ್ಜಿ ನೀಡಿರುತ್ತಾರೆ. ಆದರೆ, ಕಂದಾಯ ಇಲಾಖೆ ಅಧಿಕಾರಿಗಳು ಮಾತ್ರ ತಮಗೆ ಯಾವುದೇ ಸಂಬಂಧವೇ ಇಲ್ಲವೆನ್ನುವಂತೆ ವರ್ತಿಸುತ್ತಿದ್ದಾರೆ ಎನ್ನಲಾಗಿದೆ.

ಇದರಿಂದ ಬೇಸರಗೊಂಡ ಪೊಲೀಸರೇ ಹಲವು ಬಾರಿ 2-3 ಕಡೆಗಳಲ್ಲಿ ಜಮೀನು ತೋರಿಸಿದರೂ ಯಾವುದೇ ಜಮೀನು ಮಂಜೂರು ಮಾಡದ ಕಾರಣ ಪೊಲೀಸ್‌ ಅಧಿಕಾರಿಗಳು ವಿಧಿ ಇಲ್ಲದೇ ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯನಿರ್ವಹಿಸುವಂತಾಗಿದೆ. ಕಳೆದ ವರ್ಷವೇ ಜಮೀನು ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದ ಹಿಂದಿನ ತಹಶೀಲ್ದಾರ್‌ ಬಿ.ಎನ್‌ .ಪ್ರವೀಣ್‌ ಆಡಿದ ಮಾತಿಗೆ ಯಾವುದೇ ಪರಾವೆ ಇಲ್ಲವೆಂದುಕೊಂಡು ಕೊನೆಗೂ ಜಮೀನು ಮಂಜೂರು ಮಾಡಿಸದೇ ವರ್ಗಾವಣೆಯಾಗಿ ಹೋಗಿದ್ದು,  ಕಂದಾಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಪೊಲೀಸ್‌ ಇಲಾಖೆ ವಲಯದಲ್ಲಿ ಬೇಸರ ಮೂಡಿದೆ ಎನ್ನಲಾಗಿದೆ.

ಗ್ರಾಮಾಂತರ ಠಾಣೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ. ಜಮೀನು ಮಂಜೂರು ಮಾಡಬೇಕಿದೆ. ಈಗಾಗಲೇ ನಿವೇಶನ ಗುರುತಿಸಲಾಗಿದ್ದು, ಅಧಿಕಾರಿ ಗಳೊಂದಿಗೆ ಚರ್ಚಿಸಿ, ಜಮೀನನ್ನು ಮಂಜೂರು ಮಾಡಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗುವುದು.-ಎಚ್‌.ನಾಗೇಶ್‌, ಅಬಕಾರಿ ಸಚಿವ

-ಎಂ.ನಾಗರಾಜಯ್ಯ

ಟಾಪ್ ನ್ಯೂಸ್

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.