10ಕ್ಕೆ ಮೊದಲ ಸುತ್ತಿನ ಪಲ್ಸ್ ಪೋಲಿಯೋಗೆ ಸಿದ್ಧತೆ
Team Udayavani, Mar 8, 2019, 7:16 AM IST
ಕೋಲಾರ: ಪೋಲಿಯೋ ನಿರ್ಮೂಲನೆಯ ಅಂಗವಾಗಿ ಈ ವರ್ಷ ಒಂದು ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮಾರ್ಚ್ 10ರಂದು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಯಶಸ್ವಿಗೊಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆಯೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯ್ ಕುಮಾರ್ ಹೇಳಿದರು.
ನಗರದ ವಾರ್ತಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಪಲ್ಸ್ ಪೋಲಿಯೋ ಭಿತ್ತ ಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಮಾ.10ರಂದು ಮೊದಲನೇ ಸುತ್ತಿನ ಲಸಿಕೆ ಅಭಿಯಾನ ನಡೆಸಲಾಗುತ್ತಿದ್ದು, ಮಕ್ಕಳ ಅಂಗವೈಕಲ್ಯಕ್ಕೆ ಕಾರಣವಾಗುವ ಪೋಲಿಯೋ ಸಂಪೂರ್ಣ ನಿರ್ಮೂಲನೆಗೆ ಇಡೀ ಸಮಾಜವೇ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಮನೆಗೆ ಭೇಟಿ ನೀಡಿ ಪೋಲಿಯೋ: ಮಾ.10 ಮೊದಲನೇ ದಿನ ಪೋಲಿಯೋ ಬೂತ್‌ಗಳಲ್ಲಿ ಹಾಗೂ ನಂತರದ 2-3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ನೀಡಲಾಗುತ್ತದೆ ಎಂದು ತಿಳಿಸಿದರು.
ಪೋಲಿಯೋ ನಿರ್ಮೂಲನೆ: ಪೋಲಿಯೋ ನಿರ್ಮೂಲನೆಯಲ್ಲಿ ದೇಶವು ಗಣನೀಯ ಪ್ರಗತಿಯನ್ನು ಸಾಧಿಸಿದ್ದು, ಜನವರಿ 2011 ರಿಂದ ಯಾವುದೇ ಹೊಸ ಪೋಲಿಯೋ ಪ್ರಕರಣ ಕಂಡು ಬಂದಿಲ್ಲ, ಭಾರತ ದೇಶವು ಈಗ ವಿಶ್ವ ಆರೋಗ್ಯ ಸಂಸ್ಥೆಯ ವತಿಯಿಂದ ಪೋಲಿಯೋ ಮುಕ್ತ ರಾಷ್ಟ್ರ ಎಂಬ ಪೋಲಿಯೋ ನಿರ್ಮೂಲನೆಯ ಪ್ರಮಾಣ ಪತ್ರವನ್ನು ಮಾ.27, 2014 ರಂದು ಪಡೆದಿದೆ ಎಂದು ತಿಳಿಸಿದರು.
28 ಪ್ರಕರಣಗಳು ವರದಿ: ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಚಂದನ್ ಮಾತನಾಡಿ, ಡಿಸೆಂಬರ್ 04, 2018 ಕ್ಕೆ ಪಾಕಿಸ್ತಾನ, ಆಪಾ^ನಿಸ್ತಾನ ಈ ಎರಡು ದೇಶಗಳು ಮಾತ್ರ ಪೋಲಿಯೋ ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿವೆ. ವಿಶ್ವದಾದ್ಯಂತ ಒಟ್ಟಾರೆ 2017 ರಲ್ಲಿ 16 ಪೋಲಿಯೋ ಪ್ರಕರಣಗಳು ಕಂಡುಬಂದಿದ್ದು, 2018 ರಲ್ಲಿ 28 ಪ್ರಕರಣಗಳು ವರದಿಯಾಗಿರುತ್ತವೆ ಎಂದು ತಿಳಿಸಿದರು.
ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ: ಈ ಹಿನ್ನೆಲೆಯಲ್ಲಿ ಪಾಕಿಸ್ತಾನ, ಆಘಾrನಿಸ್ತಾನ ಪೋಲಿಯೋ ಪ್ರಕರಣಗಳು ಕಂಡು ಬಂದಿರುವುದರಿಂದ ಹಾಗೂ ಮತ್ತೆ ಸಾಂಕ್ರಾಮಿಕವಾಗಿ ಹರಡುವ ಸಾಧ್ಯತೆ ಇರುವುದರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹಾಗೂ ಎ.ಎಫ್.ಪಿ ಸರ್ವೆಕ್ಷಣೆ ಕಾರ್ಯಕ್ರಮಗಳನ್ನು ಅತ್ಯಂತ ಜಾಗರೂಕತೆಯಿಂದ ಮತ್ತು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾಗಿರುತ್ತದೆ ಎಂದರು.
ಕರ್ನಾಟಕದಲ್ಲಿ ಕೊನೆಯ ಪೋಲಿಯೋ ಪ್ರಕರಣ ನ.3, 2007 ರಂದು ರಾಜ್ಯಕ್ಕೆ ವಲಸೆ ಬಂದಿರುವ ಗುಂಪಿನಲ್ಲಿ ಪತ್ತೆಯಾಗಿದ್ದು, ಆನಂತರ ಇಲ್ಲಿಯವರೆಗೆ ಯಾವುದೇ ಪೋಲಿಯೋ ಪ್ರಕರಣ ಪತ್ತೆಯಾಗಿರುವುದಿಲ್ಲ. ಪೋಲಿಯೋ ಖಾಯಿಲೆ ನಿರ್ಮೂಲನೆ ಮಾಡಲು ಹಲವಾರು ಇಲಾಖೆಗಳ ಅಧಿಕಾರಿಗಳು, ನೌಕರರು, ಸ್ವಯಂ ಸೇವಕರು ಸಾಕಷ್ಟು ಉತ್ತಮ ಕೆಲಸ ನಿರ್ವಹಿಸುತ್ತಿರುವುದು ಪ್ರಶಂಸನೀಯವಾಗಿದೆ ಎಂದರು.
ಲಸಿಕೆ ನೀಡುವ ಗುರಿ: ಕೋಲಾರ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿಯಲ್ಲಿ ಕೆಜಿಎಫ್ ಬಂಗಾರಪೇಟೆಯಲ್ಲಿ 59,060, ಕೋಲಾರದಲ್ಲಿ 37008, ಮಾಲೂರಿನಲ್ಲಿ 24824, ಮುಳಬಾಗಿಲಿನಲ್ಲಿ 25199, ಶ್ರೀನಿವಾಸಪುರದಲ್ಲಿ 19967 ಮಕ್ಕಳು ಸೇರಿದಂತೆ ಒಟ್ಟು 1,66,053 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.
ಸುಮಾರು 744 ಬೂತ್‌ಗಳಲ್ಲಿ, 65 ಟ್ರಾನ್ಸಿಟ್ ಕೇಂದ್ರಗಳಲ್ಲಿ, 1 ಮೊಬೈಲ್ ತಂಡದೊಂದಿಗೆ ಮೊದಲನೆ ದಿನ ಬೂತ್‌ನಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಂತರದ 2-3 ದಿನಗಳಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ 3,55,123 ಮನೆ ಮನೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು ಜಿಲ್ಲೆಯಲ್ಲಿ 1701 ಗಂಡಾಂತರ ಪ್ರದೇಶಗಳನ್ನು ಗುರುತಿಸಿದ್ದು ಇದರಲ್ಲಿ ಮಕ್ಕಳಿಗೆ ಪೋಲಿಯೋ ಹನಿ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
153 ಮೇಲ್ವಿಚಾರಕರ ನೇಮಕ: ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿ ವರ್ಗದವರು ಸೇರಿ ಒಟ್ಟು 3184 ಲಸಿಕಾದಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. 153 ಮೇಲ್ವಿಚಾರಕರು ಪಲ್ಸ್ ಪೋಲಿಯೋ ಕಾರ್ಯಕ್ರಮದ ಮೇಲ್ವಿಚಾರಣೆ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಮತ್ತು ಇತರೆ ಇಲಾಖೆಗಳು ಹಾಗೂ ರೋಟರಿ ಮತ್ತಿತರ ಎನ್.ಜಿ.ಓ ಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ವಿಶ್ವಸಂಸ್ಥೆಯ ಎನ್.ಪಿ.ಎಸ್.ಪಿ ಅಧಿಕಾರಿ ಡಾ.ಮಿಸ್ಬಾ ಹಾಗೂ ಆರೋಗ್ಯ ಶಿಕ್ಷಣಾಧಿಕಾರಿ ಪ್ರಸನ್ನ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.