ಖಾಸಗಿ ಕಂಪನಿ ಕಾರ್ಮಿಕರ ಪ್ರತಿಭಟನೆ
Team Udayavani, Jul 1, 2020, 7:41 AM IST
ಕೋಲಾರ: ತಾಲೂಕಿನ ನರಸಾಪುರ ಹೋಬಳಿ ಕೈಗಾರಿಕಾ ಪ್ರದೇಶದಲ್ಲಿರುವ ಇಂಡೋ ಆಟೋಟೆಕ್ ಖಾಸಗಿ ಕಂಪನಿಯು ಉತ್ತರ ಪ್ರದೇಶದಲ್ಲಿ ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳುತ್ತಾ, ಸ್ಥಳೀಯರನ್ನು ಕಡೆಗಣಿಸಿದೆ ಎಂದು ಆರೋಪಿಸಿ ಕಾರ್ಮಿಕರು ಕಂಪನಿ ಮುಂದೆ ಪ್ರತಿಭಟನೆ ನಡೆಸಿದರು.
ಉತ್ತರ ಪ್ರದೇಶದ ಕಾರ್ಮಿಕರಿಗೆ ಎರಡು ತಿಂಗಳ ಸಂಬಳ ನೀಡಿ, ಕರೆತಂದು ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ತಿಳಿದು ಕಂಪನಿಯಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಸ್ಥಳೀಯರು ಮಂಗಳವಾರ ಬೆಳಗ್ಗೆ ಪ್ರತಿಭಟನೆ ಮಾಡಿದರು. ಈ ವೇಳೆ ಸ್ಥಳೀಯರು ಮಾತನಾಡಿ, ಬೇರೆ ರಾಜ್ಯಗಳಲ್ಲಿ ಕ್ವಾರಂಟೈನ್‌ನಲ್ಲಿ ಇರುವವರನ್ನು ಕರೆತಂದು ಈ ಕಂಪನಿಯು ಕೆಲಸ ಮಾಡಿಸುತ್ತಿದೆ.
ಈಗಾಗಲೇ ರಾಜ್ಯಾದ್ಯಂತ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಬೇರೆ ರಾಜ್ಯದ ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸುವುದು ಎಷ್ಟರ ಮಟ್ಟಿಗೆ ಸರಿ, ಹಾಗೆಯೇ ಕೆಲವರ ಕೈಮೇಲೆ ಕ್ವಾರಂಟೈನ್ ಸೀಲ್ ಸಹ ಇದೆ ಎಂದು ದೂರಿದರು. ಕಂಪನಿಯು ಬೆಳಗ್ಗೆ 8 ಗಂಟೆಯಿಂದ ಸಂಜೆ 8 ಗಂಟೆ ತನಕ ಕೆಲಸ ಮಾಡಿಸಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ, ನಮಗೆ ಸೂಕ್ತ ಭದ್ರತೆಯಿಲ್ಲ,
ಕ್ಯಾಂಟೀನ್‌ನಲ್ಲಿ ಸರಿಯಾದ ಊಟದ ವ್ಯವಸ್ಥೆ ಇಲ್ಲ ಎಂದು ತಿಳಿಸಿದರು. ಸ್ಥಳಕ್ಕೆ ಮಾಲೂರು ತಹಶೀ ಲಾರ್ ಮಂಜುನಾಥ್, ಸಬ್‌ಇನ್ಸ್ ಪೆಕ್ಟರ್ ಕೆ.ಎಸ್.ಆಂಜಿ ನಪ್ಪ, ಕೋಲಾರ ತಾಲೂಕು ವೈದ್ಯಾಧಿಕಾರಿ ಡಾ. ರಮ್ಯ ದೀಪಿಕಾ, ಕೆ.ಇ.ಬಿ ಚಂದ್ರು, ರಕ್ಷಣಾವೇದಿಕೆಯ ಜಿಲ್ಲಾ ಪ್ರಧಾನ ಸಂಚಾಲಕ ಮೆಹಬೂಬ್ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.