ಜಿಪಂ: ಮಧ್ಯವರ್ತಿಗಳ ಹಾವಳಿ ತಪ್ಪಿಸಿ


Team Udayavani, Feb 13, 2021, 4:08 PM IST

ಜಿಪಂ: ಮಧ್ಯವರ್ತಿಗಳ ಹಾವಳಿ ತಪ್ಪಿಸಿ

ಕೋಲಾರ: ಸರ್ಕಾರದಿಂದ ಸಾರ್ವಜನಿಕರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳ ಜಾರಿಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಸರ್ಕಾರಿಸೌಲಭ್ಯಗಳ ಪ್ರಯೋಜನ ಪೂರ್ಣ ಪ್ರಮಾಣದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದುಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌ ಸೂಚಿಸಿದರು.

ಶುಕ್ರವಾರ ಜಿಲ್ಲಾ ಪಂಚಾಯತ್‌ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, ಜಿಲ್ಲೆಯಲ್ಲಿ ಪಶುಸಂಗೋಪನೆ ಜೊತೆಗೆ ಕೋಳಿ ಸಾಕಾಣಿಕೆಹೆಚ್ಚಾಗಿ ಮಾಡಲಾಗುತ್ತದೆ. ಕೋಳಿಸಾಕಾಣಿಕೆದಾರರೊಂದಿಗೆ ಕಂಪನಿಗಳುಒಪ್ಪಂದ ಮಾಡಿಕೊಂಡಿದ್ದು, ಸಾಕಾಣಿಕೆಗೆಕೋಳಿ ಮರಿಗಳನ್ನು ನೀಡದೆ, ಕಿರುಕುಳನೀಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು,ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಗತಿ ಸಾಧಿಸಿ: ಕೋವಿಡ್‌ ಲಸಿಕೆ ಬಗ್ಗೆ ತಪ್ಪು ತಿಳುವಳಿಕೆಯಿಂದಾಗಿ ನೋಂದಾಯಿಸಿರುವಸಿಬ್ಬಂದಿಗಳು ಸಹ ಲಸಿಕೆ ಪಡೆಯಲುಹಿಂಜರಿಯುತ್ತಿದ್ದಾರೆ. ಈ ಬಗ್ಗೆ ಸೂಕ್ತ ಅರಿವುಮೂಡಿಸಿ ಲಸಿಕೆ ನೀಡುವಲ್ಲಿ ಗಣನೀಯ ಪ್ರಗತಿ ಸಾಧಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಕಾಲಕ್ಕೆ ವೇತನ: ರಸ್ತೆ ಬದಿ ನೆಟ್ಟಿರುವ ಗಿಡಗಳಿಗೆ ನೀರು ಹಾಕಿ ಪೋಷಣೆ ಮಾಡುವ ಕೆಲಸ ಮಾಡಬೇಕು. ಅರಣ್ಯ ಇಲಾಖೆವತಿಯಿಂದ ಗಿಡಗಳ ಪೋಷಣೆಗೆನೇಮಿಸಿರುವ ಕಾರ್ಮಿಕರಿಗೆ ಸಕಾಲದಲ್ಲಿವೇತನ ಪಾವತಿ ಮಾಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಗಳಲ್ಲಿ ಅಧಿಕಾರಿಗಳು ಹಾಜರಿರಲಿ: ಶಾಸಕ ಕೆ.ಶ್ರೀನಿವಾಸಗೌಡ ಮಾತನಾಡಿ, ಪ್ರಗತಿ ಪರಿಶೀಲನಾ ಸಭೆಗೆ ಅಧಿಕಾರಿಗಳು ತಮ್ಮಪರವಾಗಿ ಯಾರನ್ನು ನಿಯೋಜಿಸದೇ ತಾವೇಹಾಜರಾಗಬೇಕು. ಜಿಲ್ಲಾ ಪಂಚಾಯತ್‌ಸಭೆಗಳಲ್ಲಿ ಜಿಲ್ಲೆಯ ಪ್ರಮುಖ ವಿಷಯಗಳಕುರಿತು ಚರ್ಚೆ ಹಾಗೂ ಅಭಿವೃದ್ಧಿ ಕುರಿತ ಮಹತ್ವವಾದ ಅಂಶಗಳನ್ನುಚರ್ಚಿಸಲಾಗುತ್ತದೆ ಎಂದು ತಿಳಿಸಿದರು.

ಬೇಕಾದವರಿಗೆ ಗುತ್ತಿಗೆ: ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಅರುಣ್‌ಪ್ರಸಾದ್‌ ಮಾತನಾಡಿ, ಬೆಟ್ಟೆಬೆಣೆಜೇನಹಳ್ಳಿ ಶಾಲೆಯು ಕುಸಿಯುವ ಸ್ಥಿತಿಯಲ್ಲಿದೆ.ಹಲವಾರು ಸಭೆಗಳಲ್ಲಿ ಈ ಬಗ್ಗೆ ಮಾಹಿತಿನೀಡಲಾಗಿದ್ದು, ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರೂ ದುರಸ್ತಿ ಮಾಡಿಸಿಲ್ಲ.ಅಂಬೇಡ್ಕರ್‌ ಭವನಗಳ ನಿರ್ಮಾಣಕಾಮಗಾರಿಗಳನ್ನು ನಿರ್ಮಿತಿ ಕೇಂದ್ರಕ್ಕೆವಹಿಸಿದ್ದು, ಅವರು ತಮಗೆ ಬೇಕಾದಗುತ್ತಿಗೆದಾರರಿಗೆ ನೀಡುತ್ತಿದ್ದಾರೆ ಆರೋಪಿಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಇರುವ ಯೋಜನೆಗಳು ಹಾಗೂ ಅವುಗಳ ಪ್ರಗತಿ ಅಂಕಿಅಂಶಗಳ ಮಾಹಿತಿಯನ್ನು ಸಭೆಗೆ ನೀಡಿದರು.ಸಭೆಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿಸಮಿತಿ ಅಧ್ಯಕ್ಷ ಚಿನ್ನಸ್ವಾಮಿಗೌಡ, ಜಿಲ್ಲಾಪಂಚಾಯತ್‌ ಉಪ ಕಾರ್ಯದರ್ಶಿಸಂಜೀವಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬಿಲ್‌ ಪಾವತಿಸಿದರೂ ಶಾಲೆಗಳಿಗೆ ಪೀಠೊಪಕರಣ ಸರಬರಾಜು ಆಗಿಲ್ಲ :  ಶಿಕ್ಷಣ ಇಲಾಖೆಯಿಂದ ಪೀಠೊಪಕರಣಗಳ ಖರೀದಿಗೆ ಟೆಂಡರ್‌ ಆಗಿದ್ದರೂ ಟೆಂಡರ್‌ದಾರರು ಪೀಠೊಪಕರಣಗಳನ್ನು ಶಾಲೆಗಳಿಗೆ ಸರಬರಾಜು ಮಾಡಿರುವುದಿಲ್ಲ. ಆದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಿಲ್‌ ಪಾವತಿ ಮಾಡಿದ್ದು, ಈ ಸಂಬಂಧ ತಪ್ಪಿತಸ್ಥರ ಮೇಲೆ

ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾ ಸಿಇಒ ಎನ್‌.ಎಂ.ನಾಗರಾಜ್‌ ಸೂಚಿಸಿದರು. ಇಲಾಖೆಗಳು ತಮ್ಮ ಇಲಾಖೆಯ ಕಾಮಗಾರಿಗಳನ್ನು ಪಿ.ಆರ್‌.ಇ.ಡಿ ಗೆ ನೀಡಿ ಸುಮ್ಮನಿರುವುದು ಸೂಕ್ತವಲ್ಲ. ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಶಿಷ್ಟಾಚಾರ ಪಾಲನೆ ಮಾಡಿ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಕಟ್ಟಡ ಕಾರ್ಮಿಕರು ಕಾರ್ಮಿಕಇಲಾಖೆಯಲ್ಲಿ ನೋಂದಣಿ ಮಾಡಿಕೊಂಡು ಕಾರ್ಮಿಕ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಗ್ರಾಪಂಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ ಅನುದಾನ ಮೀಸಲಿಡಬೇಕು ಎಂದು ಸಿಇಒ ಎನ್‌.ಎಂ.ನಾಗರಾಜ್‌ಸೂಚಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.