ರಾಕ್‌ವ್ಯಾಲಿ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ: ನಾಲ್ವರ ಬಂಧನ
Team Udayavani, Jun 27, 2023, 1:31 PM IST
ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಕ್‌ವ್ಯಾಲಿ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಭಾನುವಾರ ಮಧ್ಯರಾತ್ರಿ ದಾಳಿ ನಡೆಸಿ ನಾಲ್ವರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಉಳಿದ ಮೂವರ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದರು.
ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಯಾಚರಣೆಯಲ್ಲಿ ಆರು ಮಹಿಳೆಯನ್ನು ರಕ್ಷಿಸಲಾಗಿದೆ. ಈ ಮಹಿಳೆಯರನ್ನು ಹೆ„ದರಾಬಾದ್ ಮೂಲದ ವಿಜಯ್ ಎಂಬಾತ ಆಂಧ್ರದ ವಿಜಯವಾಡ, ವಿಶಾಖಪಟ್ಟಣಂ, ಚಿತ್ತೂರು ಸೇರಿದಂತೆ ಕೆಲವು ಭಾಗಗಳಿಂದ ಕರೆತಂದು ರೆಸ್ಟೋರೆಂಟ್ ಮಾಲೀಕರೊಂದಿಗೆ ಸೇರಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ 14 ಜನರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗಿದೆ.
7 ಜನರ ವಿರುದ್ಧ ಪ್ರಕರಣ : ರೆಸ್ಟೋರೆಂಟ್ ಮಾಲಿಕ, ಮ್ಯಾನೇಜರ್, ಸಪ್ಲೆ„ಯರ್, ರಿಸೆಪ್ಷನಿಸ್ಟ್ ಹಾಗೂ ಮಹಿಳೆಯರನ್ನು ಕರೆತಂದಿದ್ದ ಏಜೆಂಟ್ ಸೇರಿದಂತೆ 7 ಮಂದಿ ವಿರುದ್ಧ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಏಜೆಂಟ್ ವಿಜಯ್, ಮಂಜುನಾಥ್, ಆಂಜಪ್ಪ, ಸತೀಶ್ ಎಂಬುವರನ್ನು ಬಂಧಿಸಿದ್ದು, ರೆಸ್ಟೋರೆಂಟ್ ಮಾಲೀಕ ಚಂದ್ರಹಾಸ ಸೇರಿದಂತೆ ಮೂವರು ತಲೆಮರೆಸಿ ಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯ ವಶಕ್ಕೆ ಒಪ್ಪಿಸಲಾಗಿದೆ ಎಂದರು.
ನಗದು , ಮೊಬೈಲ್ ವಶ: ದಾಳಿ ವೇಳೆ 5,56,300 ನಗದು, ಸುಮಾರು 2 ಕೋಟಿ ಬೆಲೆ ಬಾಳುವ 10 ಐಷಾರಾಮಿ ಕಾರುಗಳು ಹಾಗೂ 14 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಮಾನವ ಕಳ್ಳಸಾಗಣೆ ನಿಯಂತ್ರಣ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಲಾರ ಮಹಿಳಾ ಪೊಲೀಸ್ ಠಾಣೆಯ ಇನ್ಸಪೇಕ್ಟರ್ ಭೈರಾ ನೇತೃತ್ವದಲ್ಲಿ ವಿಶೇಷ ತಂಡ ದಾಳಿ ನಡೆಸಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯ ಬೈರಕೂರು ಹೋಬಳಿ ಎಚ್.ಬೈಯಪ್ಪನಹಳ್ಳಿ ಗ್ರಾಮ ವ್ಯಾಪ್ತಿಯ ಕರ್ನಾಟಕ-ಆಂಧ್ರ ಗಡಿ ವ್ಯಾಪ್ತಿಯಲ್ಲಿ ಸುಮಾರು ಏಳೆಂಟು ಎಕರೆ ಪ್ರದೇಶದಲ್ಲಿ ಈ ರೆಸಾರ್ಟ್ ಇದ್ದು. ಆವರಣದಲ್ಲಿರುವ ರಾಕ್ ವ್ಯಾಲಿ ಬಾರ್ ಅಂಡ್ ರೆಸ್ಟೋರೆಂಟ್ ಕಟ್ಟಡದ ಕೊಠಡಿಗಳಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದರು.
ಕಾರ್ಯಾಚರಣೆಯಲ್ಲಿ ಭೈರಾ, ಸಿಬ್ಬಂದಿ ರಮೇಶ್, ಮುನಿರಾಜು, ಆಂಜನಪ್ಪ, ಮಂಜುನಾಥ್, ನಿಂಗಣ್ಣ, ಶಾಮೂರ್ತಿ,ರೇವಣ ಸಿದ್ದಪ್ಪ, ಮಹಿಳಾ ಸಿಬ್ಬಂದಿ ಶಿಲ್ಪಾ, ನಂದಿನಿ, ಲಾವಣ್ಯಾ, ಚಾಲಕರಾದ ಸುಭಾಷ್ ಪಾಲ್ಗೊಂಡಿದ್ದರು. ಇವರಿಗೆ ಕೇಂದ್ರ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.