ಮಡಿಕೆ, ಮುಳ್ಳು ತಂತಿ ಸಮೇತ ರಸ್ತೆ ತಡೆ
Team Udayavani, Feb 7, 2021, 1:44 PM IST
ಬಂಗಾರಪೇಟೆ: ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ರೈತರ ಹೋರಾಟ ಬೆಂಬಲಿಸಿ ರೈತ ಸಂಘದಿಂದ ಮಡಿಕೆಗಳು ಮತ್ತು ಮುಳ್ಳು ತಂತಿಯ ಸಮೇತ ಹಂಚಾಳ ಗೇಟ್ ಬಂದ್ ಮಾಡಿ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯ ಬೇಕೆಂದು ಕೇಂದ್ರ ಸರ್ಕಾರ ವನ್ನು ಆಗ್ರಹಿಸಲಾಯಿತು.
ಹೋರಾಟದ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಸರ್ಕಾರಗಳುಪ್ರಜಾ ಪ್ರಭುತ್ವದ ವಿರೋಧಿಯಾಗಿ ಕಾರ್ಪೊರೇಟ್, ಉದ್ಯಮಿ, ಶ್ರೀಮಂತರ ಪರವಾಗಿವೆ. ಅಚ್ಛೇ ದಿನ್ ಎಂದು ಕೃಷಿ ಕ್ಷೇತ್ರ ವನ್ನು ಸಂಪೂರ್ಣವಾಗಿ ನಾಶ ಮಾಡುವ ಜೊತೆಗೆ ನಿರುದ್ಯೋಗ ಸಮಸ್ಯೆಯನ್ನು ಹೆಚ್ಚಿಸಿ ರೈತರು ಮತ್ತು ಪ್ರಜ್ಞಾವಂತ ಯುವಕರನ್ನು ಬೀದಿಗೆ ತಳ್ಳುವ ಕಾಯ್ದೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದಾರೆ ಎಂದರು.
ಇದನ್ನೂ ಓದಿ :ದೇಸೀಯ ಉತ್ಪನ್ನಗಳ ಬಳಕೆಗೆ ಮೇಳ
ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್ ಮಾತನಾಡಿದರು. ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ನಳಿನಿ, ತಾಲೂಕು ಅಧ್ಯಕ್ಷ ಐತಾಂಡಹಳ್ಳಿ ಮುನ್ನಾ, ಜಿಲ್ಲಾ ಸಂಚಾಲಕ ಕೆ.ಶ್ರೀನಿ ವಾಸಗೌಡ, ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಹಸಿರುಸೇನೆ ಜಿಲ್ಲಾಧ್ಯಕ್ಷ ಕಿರಣ್, ತಾಲೂಕು ಅಧ್ಯಕ್ಷ ಚಲಪತಿ, ಜಿಲ್ಲಾ ಉಪಾಧ್ಯಕ್ಷ ಚಾಂದ್‌ಪಾಷ, ವಡಗೂರು ಮಂಜು, ಕಿಶೋರ್ ನಂಗಲಿ, ಸುಪ್ರೀಂಚಲ, ಜಮೀರ್‌ಪಾಷ, ವಟ್ರಕುಂಟೆ ಆಂಜಿನಪ್ಪ,ತೆರ್ನಹಳ್ಳಿ ಆಂಜಿನಪ್ಪ, ಮಂಗಸಂದ್ರ ನಾಗೇಶ್, ತಿಮ್ಮಣ್ಣ, ವೆಂಕಟೇಶಪ್ಪ, ಅಶ್ವತ್ಥಪ್ಪ, ಮಹೇಶ್, ರಾಜ್ಯ ಸಂಚಾಲಕ ಅನಿಲ್, ಮಹೇಶ್ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.