ದೆಹಲಿ ರೈತರ ಹೋರಾಟಕ್ಕೆ ಸಂಘಟನೆಗಳ ಬೆಂಬಲ


Team Udayavani, Dec 2, 2020, 1:26 PM IST

ದೆಹಲಿ ರೈತರ ಹೋರಾಟಕ್ಕೆ ಸಂಘಟನೆಗಳ ಬೆಂಬಲ

ಕೋಲಾರ: ರೈತ ‌ ವಿರೋಧಿ ನೀತಿಗಳ ವಿರುದ್ಧ ದೆಹಲಿಗೆ ಹೊರಟಿರುವ ರೈತರ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ನಗರದ ತಹಶೀಲ್ದಾರ್‌ ಕಚೇರಿ ಮುಂದೆ ಮಂಗಳವಾರ ವಿವಿಧ ಪ್ರಗತಿಪರ ‌ ಸಂಘಟನೆಗಳ ನೇತೃತ್ವದಲ್ಲಿ ಧರಣಿ ನಡೆಸಿದರು.

ಕೇಂದ್ರ ಸರ್ಕಾರ ‌ ಯಾವುದೇ ಷರತ್ತುಗಳನ್ನು ಹಾಕದೇ, ಕಾರ್ಪೊರೇಟ್‌ ಕಂಪನಿಗಳಿಗೆ ಕೃಷಿ ಯನ್ನು ವಹಿಸಿಕೊಡಲಿರುವ ‌ ಕೃಷಿ ಕಾಯ್ದೆ, ಅಗತ್ಯ ವಸ್ತುಗಳ ‌ ತಿದ್ದುಪಡಿ ಕಾಯ್ದೆ, ವಿದ್ಯುತ್‌ ತಿದ್ದುಪಡಿ ಮಸೂದೆ, ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿ ಮಾಡಿದ್ದು, ರೈತರನ್ನು ಬೀದಿಗೆ ತಂದಿದ್ದಾರೆ. ನ್ಯಾಯ ಕೇಳಲು ಹೋದರೆ ದೌರ್ಜನ್ಯ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಗೌರವ ಅಧ್ಯಕ್ಷ ‌ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ರೈತ ಕೃಷಿಯನ್ನು ಸಂರಕ್ಷಿಸಲು, ಡಾ.ಎಂ.ಎಸ್‌. ಸ್ವಾಮಿನಾಥನ್‌ ಕೃಷಿ ಆಯೋಗದ ಸಲಹೆಯಂತೆ ಕೃಷಿ ಉತ್ಪನ್ನಗಳ ಸಮಗ್ರ ಉತ್ಪನ್ನ ವೆಚ್ಚಕ್ಕೆ ಶೇ.50 ರಷ್ಟು ಲಾಭಾಂಶ ಸೇರಿಸಿ ನಿಗದಿಸಿದ ಬೆಂಬಲ ಬೆಲೆ ಖಾತರಿಪಡಿಸುವಕಾಯ್ದೆ ಜಾರಿಗೆ ತರಬೇಕು. ಕೆಪಿಆರ್‌ ಎಸ್‌ ತಾಲೂಕು ಅಧ್ಯಕ್ಷ ಎನ್‌.ಎನ್‌. ಶ್ರೀರಾಮ್‌ ಮಾತನಾಡಿ, ದೇಶ ವಿರೋಧಿ ಹಾಗೂ ಕಾರ್ಪೊರೇಟ್‌ ಕಂಪನಿಗಳ ಪರವಾದ ‌ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಾ ಇದ್ದರೂ ಅವರನ್ನು ಪರಿಗಣಿಸುತ್ತಿಲ್ಲ. ಅಮಾನವೀಯವಾಗಿ ನಡೆದು ಕೊಳ್ಳುತ್ತಿದ್ದಾರೆ ಎಂದು ದೂರಿದರು.

ಧರಣಿಯ ನೇತೃತ್ವವನ್ನು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಎಂ. ಭೀಮರಾಜ್‌, ಆಶಾ, ಕೆಪಿಆರ್‌ಎಸ್‌ ಮುಖಂಡರಾದ ಕುರ್ಕಿ ದೇವರಾಜ್‌, ಯಲ್ಲಪ್ಪ, ವೆಂಕಟೇಶಪ್ಪ, ಎಸ್‌ಎಫ್‌ಐ ಮುಖಂಡರಾದ ವಾಸುದೇವ ರೆಡ್ಡಿ, ಅಂಕಿತಾ, ದಲಿತ ಹಕ್ಕುಗÙ ‌ ಸಮಿತಿಯ ವಿ. ಅಂಬರೀಶ್‌, ಸೌಮ್ಯಾ, ಅಂಗನವಾಡಿ ನೌಕರರ ಸಂಘದ ಮಂಜುಳಾ, ಲಾಲು ಇದ್ದರು.

ಬೇಡಿಕೆ ಇತ್ಯರ್ಥಪಡಿಸಲು ಆಗ್ರಹ  :

ಮುಳಬಾಗಿಲು: ದಿಲ್ಲಿ ಚಲೋ ರೈತರ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ರೈತರು ಮತ್ತು ಕೂಲಿಕಾರರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಮಂಗಳವಾರ ನಗರದ ಮಿನಿವಿಧಾನಸೌಧ ಎದುರು ಪ್ರತಿಭಟನೆ ನಡೆಸಿ ಶಿರಸ್ತೇದಾರ್‌ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಪುಣ್ಯಹಳ್ಳಿ ಶಂಕರ್‌, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟನೆ ಕೈಗೊಳ್ಳಲು ರೈತರು ದೆಹಲಿ ಚಲೋ ಕೈಗೊಂಡಿದ್ದ ಅನ್ನದಾತರಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸಿರುವುದು ಖಂಡನಾರ್ಹ. ಪ್ರಧಾನ ಮಂತ್ರಿಗಳು ರೈತರಲ್ಲಿ ಕ್ಷಮೆಯಾಚಿಸಬೇಕು, ಕೃಷಿ ಸಂಬಂಧಿತ ಮೂರುಕಾಯ್ದೆಗಳು ಮತ್ತು ವಿದ್ಯುತ್‌ಕಾಯ್ದೆ-2020ನ್ನುಕೂಡಲೇ ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ಡಾ.ಸ್ವಾಮಿನಾಥನ್‌ ವರದಿಯನ್ವಯಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲಬೆಲೆ ಖಾತರಿ ಮಾಡುವ ಕಾನೂನು ಜಾರಿಗೆ ತರಬೇಕು ಹಾಗೂ ಎಲ್ಲಾ ರೈತರು, ಕೂಲಿಕಾರರು, ಗ್ರಾಮೀಣ ಬಡವರಿಗೆ ಕಡಿಮೆ ಬಡ್ಡಿಯ ಬ್ಯಾಂಕ್‌ ಸಾಲ ನೀಡಿಕೆ ಸೇರಿದಂತೆ ಋಣಮುಕ್ತ ಕಾಯ್ದೆ ಸರ್ಕಾರ ಜಾರಿ ಮಾಡಬೇಕೆಂದು ಒತ್ತಾಯಿಸಿದರು. ಎಸ್‌ಎಫ್ಐ ಜಿಲ್ಲಾಧ್ಯಕ್ಷ ಅಂಬ್ಲಿಕಲ್‌ ಶಿವಪ್ಪ, ಸಿಪಿಎಂ ಮುಖಂಡ ಶ್ರೀನಿವಾಸ್‌, ಎಸ್‌ಎಫ್ಐ ತಾಲೂಕು ಅಧ್ಯಕ್ಷ ಸುರೇಶ್‌ಬಾಬು, ಕೆಪಿಆರ್‌ಎಸ್‌ ಮುಖಂಡ ಬಾಲರೆಡ್ಡಿ, ಎಸ್‌ಎಫ್ಐ ಮುಖಂಡ ಲೋಕೇಶ್‌ ಸೇರಿದಂತೆ ಹಲವರಿದ್ದರು.

ಕೃಷಿ ಕಾಯ್ದೆ ರದ್ದತಿಗೆ ಆಗ್ರಹ  :

 ಬಂಗಾರಪೇಟೆ: ಕೃಷಿ ಸುಧಾರಣೆ ರದ್ದುಪಡಿಸಲು ದೆಹಲಿ ಚಲೋ ರೈತರ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ರೈತರ,ಕೃಷಿ ಕೂಲಿಕಾರರ ಬೇಡಿಕೆಗಳನ್ನು ಇತ್ಯರ್ಥಪಡಿಸಬೇಕು ಎಂದು ಆಗ್ರಹಿಸಿ ಅಖೀಲ ಭಾರತ ಸಂಘರ್ಷ ಸಮನ್ವಯ ತಾಲೂಕು ಸಮಿತಿ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಕೆಪಿಆರ್‌ಎಸ್‌ನ ತಾಲೂಕು ಅಧ್ಯಕ್ಷ ಪಿ.ಶ್ರೀನಿವಾಸ್‌ ಮಾತನಾಡಿ, ರೈತರ ಮೇಲಿನ ದೌರ್ಜನ್ಯದ ನೈತಿಕ ಹೊಣೆ ಹೊತ್ತು ಪ್ರಧಾನ ಮಂತ್ರಿಗಳುದೇಶದರೈತರಲ್ಲಿಕ್ಷಮೆಕೇಳಬೇಕು.ಕೃಷಿ ಸಂಬಂಧಿತ ಮೂರು ಕಾಯಿದೆಗಳನ್ನು ಹಾಗೂ ವಿದ್ಯುತ್‌ ಕಾಯ್ದೆ ತಿದ್ದುಪಡಿ 2020 ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಋಣಮುಕ್ತ ಕಾಯ್ದೆಗೆ ಆಗ್ರಹ: ರೈತ ಸಂಘದ  ಪುಟ್ಟಣ್ಣಯ್ಯ ಬಣದ ರೈತ ಮುಖಂಡ ಮರಗಲ್‌ ಶ್ರೀನಿವಾಸ್‌ ಮಾತನಾಡಿ, ಡಾ.ಎಂ. ಎಸ್‌.ಸ್ವಾಮಿನಾಥನ್‌ ವರದಿನ್ವಯ ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಖಾತರಿ ಮಾಡುವ ಕಾನೂನು ಹಾಗೂ ಎಲ್ಲ ರೈತರು, ಕೃಷಿ ಕೂಲಿಕಾರರು, ಗ್ರಾಮೀಣ ಬಡವರಿಗೆ ಕಡಿಮೆ ಬಡ್ಡಿ ಬ್ಯಾಂಕ್‌ ಸಾಲಗಳ ನೀಡಿಕೆ, ವಿಶೇಷ ಸಂದರ್ಭಗಳಲ್ಲಿ ಸಾಲಮನ್ನಾ, ಬಡ್ಡಿ ಮನ್ನಾದಂತಹ ಅಂಶಗಳನ್ನು ಒಳಗೊಂಡ ಋಣ ಮುಕ್ತ ಕಾಯ್ದೆಯನ್ನು ಕೇಂದ್ರ ಸರಕಾರ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.ತಹಶೀಲ್ದಾರ್‌ ಎಂ.ದಯಾನಂದ್‌ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಟಿ.ಎನ್‌. ರಾಮೇಗೌಡ, ಜಿಲ್ಲಾ ಕಾರ್ಯದರ್ಶಿ ರವಿ, ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮಣ್‌, ಮುಖಂಡರಾದ ಪ್ರಭು, ಸಿ.ರಾಮಮೂರ್ತಿ, ಮುನಿ ವೆಂಕಟಗೌಡ, ವೆಂಕಟೇಶಪ್ಪ, ಶ್ರೀನಿವಾಸ್‌, ಮುರಳಿ, ಗೋಪಿ, ಎನ್‌.ರಮೇಶ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.