ಸೀಲ್‌ಡೌನ್ ಮಾಡಿದ್ದಕ್ಕೆ ಪ್ರತಿಭಟನೆ
Team Udayavani, Aug 2, 2020, 9:53 AM IST
ಬಂಗಾರಪೇಟೆ: ತಾಲೂಕಿನ ದೊಡ್ಡಪನ್ನಾಂಡಹಳ್ಳಿಯ 22 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದ್ದರಿಂದ ಇಡೀ ಗ್ರಾಮವನ್ನು ಸೀಲ್‌ಡೌನ್ ಮಾಡಲಾಗಿದೆ. ಇದರಿಂದ ಬೇಸತ್ತ ಗ್ರಾಮದ ಕೆಲವರು, ಯಾರಿಗೂ ಸೋಂಕು ಬಂದಿಲ್ಲ, ಇದರಿಂದ ಗ್ರಾಮಕ್ಕೆ ಕಳಂಕ ಬಂದಿದೆ ಎಂದು ಆರೋಪಿಸಿ ಪ್ರತಿಭಟಿಸಿದರು.
ಕಳೆದ ವಾರ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ 60 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ನಂತರ ಅವರಿಗೆ ಕೋವಿಡ್ ಸೋಂಕು ಖಚಿತವಾಗಿತ್ತು. ಹೀಗಾಗಿ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದ 53 ಮಂದಿಯನ್ನು ಆರೋಗ್ಯ ಇಲಾಖೆ ಪರೀಕ್ಷೆ ಮಾಡಿತ್ತು. ಇದರಲ್ಲಿ 22 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದನ್ನು ನಿರಾಕರಿಸಿರುವ ಕೆಲ ಗ್ರಾಮಸ್ಥರು ಯಾರಿಗೂ ಸೋಂಕು ಬಂದಿಲ್ಲ, ಇದರಿಂದ ಗ್ರಾಮಕ್ಕೆ ದೊಡ್ಡ ಕಳಂಕ ಬಂದಿದೆ ಎಂದು ಆರೋಪಿಸಿ ಪ್ರತಿಭಟಿಸಿದರು. ಸಾವನ್ನಪ್ಪಿದ ವೃದ್ಧೆ, 22 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ರಿಪೋರ್ಟ್ ಕೊಡಿ ಎಂದು ಆರೋಗ್ಯ ಅಧಿಕಾರಿಗಳನ್ನು ಆಗ್ರಹಿಸಿದರು.
ಶನಿವಾರ ಮಧ್ಯಾಹ್ನ ವೇಳೆಗೆ ಸ್ಥಳಕ್ಕೆ ಡೀಸಿ ಆಗಮಿಸಬೇಕೆಂದು ಪಟ್ಟುಹಿಡಿದ್ದಿದ್ದರು. ಆದರೆ, ಯಾವುದೇ ಅಧಿಕಾರಿಗಳು ಆಗಮಿಸದ ಕಾರಣ ಕೆಲ ಕಾಲ ಪ್ರತಿಭಟಿಸಿ, ವಾಪಸ್ಸಾಗಿದ್ದಾರೆ. ಪ್ರತಿಭಟನೆಯಲ್ಲಿ ಮುಖಂಡರಾದ ಮಂಜುನಾಥರಾವ್, ಸಿಂಗೋಲೆ, ಶಂಕರ್, ಲಕ್ಷ್ಮಣ್ ರಾವ್, ಕೃಷ್ಣೋಜಿರಾವ್, ಸುರೇಶ್, ಬಾಬುರಾವ್, ರಾಮ್‌ಶೆಟ್ಟಿ, ರಾಮೋಜಿರಾವ್ ಭಾಗವಹಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಕುಮಾರಿ, ತಾಲೂಕಿನ ದೊಡ್ಡಪನ್ನಾಂಡಹಳ್ಳಿ ಗ್ರಾಮದಲ್ಲಿ 22 ಮಂದಿಗೆ ಕೋವಿಡ್ ಬಂದಿರುವುದು ದೃಢವಾಗಿದೆ. ಇದರ ಸಂಪೂರ್ಣ ದಾಖಲೆ ಇದೆ. ಇವರ ರ್ಯಾಪಿಡ್ ಪರೀಕ್ಷೆ ಮಾಡಲಾಗಿದೆ. ಈ ಪರೀಕ್ಷೆಯನ್ನು ನಾವೇನು ಮಾಡಿಲ್ಲ. ಜಿಲ್ಲಾ ಆರೋಗ್ಯ ಇಲಾಖೆ ಮಾಡಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.