ಅಂತರಗಂಗೆಯಲ್ಲಿ ಮೂಲ ಸೌಲಭ್ಯ ಕಲ್ಪಿಸಿ


Team Udayavani, Oct 20, 2020, 3:57 PM IST

kolar-tdy-1

ಕೋಲಾರ: ರಾಜ್ಯದ ದಕ್ಷಿಣ ಕಾಶಿಯೆಂದೇ ಪ್ರಸಿದ್ಧಿಯಾಗಿರುವ ಕೋಲಾರ ನಗರ ಹೊರ ವಲಯದಲ್ಲಿರುವ ಅಂತರಗಂಗೆಯ ದರ್ಶನಕ್ಕೆ ಬರುವ ಭಕ್ತರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್‌ ಶೆಟ್ಟಿ ಸಾರಥ್ಯದ ಕೋಲಾರ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಸತ್ಯಭಾಮರಿಗೆ ಮನವಿ ಸಲ್ಲಿಸಲಾಯಿತು.

ಕೋಲಾರ ನಗರ ಹೊರ ವಲಯದಲ್ಲಿರುವ ಅಂತರಗಂಗೆಯಲ್ಲಿ ಭಕ್ತರಿಗೆ ಅನುಕೂಲಕ್ಕಿಂತ ಅನಾನುಕೂಲಗಳು ಹೆಚ್ಚಾಗಿವೆ. ದೇವಾಲಯವು ಮುಜರಾಯಿ ಇಲಾಖೆಯ ಸುಪರ್ದಿಯಲ್ಲಿದ್ದು, ಭಕ್ತರಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿದೆ. ಪ್ರತ್ಯೇಕ ಶೌಚಾಲಯ ವ್ಯವ‌ಸ್ಥೆ, ಶುದ್ಧ ಕುಡಿಯುವ ನೀರು, ದೇವಾಲಯದ ಆವರಣದಲ್ಲಿ ಸ್ವಚ್ಛತೆ ಇಲ್ಲ.ಈದೇವಾಲಯದಲ್ಲಿ ವಾರಕ್ಕೊಮ್ಮೆ ಪೂಜೆ ಸಲ್ಲಿಸುತ್ತಾರೆ. ನಿರ್ವಹಣೆ ಸರಿಯಾಗಿ ಆಗದಿರುವುದರಿಂದ ‌ಭಕ್ತರಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೀದಿ ದೀಪದ ‌ ವ್ಯವಸ್ಥೆ  ಇಲ್ಲ, ಪುಂಡು ಪೋಕರಿಗಳ ‌ ಹಾವಳಿ ಹೆಚ್ಚಾಗಿದೆ. ಮಹಿಳಾ ಭಕ್ತರು ಹೋಗಿ ಬರಲು ಭಯ ಮತ್ತು ಆತಂಕಪಡು ವಂತಹ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ಪೊಲೀಸ್‌ ಹೊರ ಠಾಣೆಯಿದ್ದು, ಸೂಕ್ತ ಸಿಬ್ಬಂದಿ ಇಲ್ಲ. ಅಂತರಗಂಗೆ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ‌ ಕ್ರಮ ಕೈಗೊಳ್ಳುವಂತೆ ಮುಜರಾಯಿ ಇಲಾಖೆಯ ತಹಶೀಲ್ದಾರ್‌ ರವರಿಗೆ ಸೂಚಿಸಿ ಭಕ್ತರಿಗೆ ಅನುಕೂಲ ಮಾಡಿಕೊಡ ಬೇಕೆಂದು ಒತ್ತಾಯಿಸಿದರು.

ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್‌, ಕೋಲಾರ ‌ ತಾಲೂಕು ಅಧ್ಯಕ್ಷ ದಿಂಬ ಡಿ.ಎಂ. ನಾಗರಾಜಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ಮತ್ತಿಕುಂಟೆ ಶ್ರೀನಿವಾಸಗೌಡ, ಜಿಲ್ಲಾ ಕಾರ್ಯದರ್ಶಿ ಲೋಕೇಶ್‌, ಜಿಲ್ಲಾ ಸಹ ಕಾರ್ಯ‌ದರ್ಶಿ ನಟರಾಜ್‌, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮುದುವತ್ತಿ  ರಮೇಶ್‌, ಮುದುವಾಡಿ ಮುರುಳಿ, ಜಿಲ್ಲಾ ಉಪಾಧ್ಯಕ್ಷ ಕಠಾರಿಪಾಳ್ಯರಮೇಶ್‌, ಬಾಬು ಹಾಗೂ ಕರವೇ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.