ಮಳೆಗಾಲದಲ್ಲಿ ರಸ್ತೆಗಳ ಬಣ್ಣ ಬಯಲು; ಕಳಪೆ ಕಾಮಗಾರಿಯಿಂದ ರಸ್ತೆಗಳು ಹಾಳು
ಕೆರೆ ಕಟ್ಟೆ ಬಳಿ ಹಾಗೂ ಪುತ್ರಸೊಣ್ಣೆನಹಳ್ಳಿ ಬಳಿಯಂತೂ ಹೇಳ ತೀರದಾಗಿದೆ.
Team Udayavani, Jul 29, 2022, 6:21 PM IST
ಬಂಗಾರಪೇಟೆ: ಹಾಕಿದ ಬಣ್ಣ ಮಳೆ ನೀರಿನಲ್ಲಿ ಕಳಚಿ ಹೋಗುತ್ತದೆ ಎಂಬ ಗಾದೆ ಮಾತಿನಂತೆ ಗ್ರಾಮೀಣ ಪ್ರದೇಶದ ರಸ್ತೆಗಳ ಬಣ್ಣ ಸಹ ಮಳೆಗಾಲದಲ್ಲಿ ಬಯಲಿಗೆ ಬರಲಿದೆ ಎಂಬುದಕ್ಕೆ ಪಟ್ಟಣದಿಂದ ಬಂಗಾರಪೇಟೆಯಿಂದ ಕಾಮಸಮುದ್ರಕ್ಕೆ ಹೋಗುವ ರಸ್ತೆಯೇ ಸಾಕ್ಷಿಯಾಗಿದೆ.
ಪಟ್ಟಣದಿಂದ ಕೇವಲ 15 ಕಿ.ಮೀ ದೂರವಿರುವ ಕಾಮಸಮುದ್ರ ಹೋಬಳಿ ಕೇಂದ್ರಕ್ಕೆ ಹೋಗುವ ಮುಖ್ಯ ರಸ್ತೆ ಅರ್ಧದಷ್ಟು ಭಾಗ ಸಂಪೂರ್ಣ ಹಾಳಾಗಿ, ವಾಹನಗಳ ಸಂಚಾರಕ್ಕೆ ಸಂಚಕಾರ ತಂದಿದೆ. ಒಂಡೆದೆ ಲೋಕೋಪಯೋಗಿ ಇಲಾಖೆ ಅನುದಾನ ಕೊರತೆಯ ನಡುವೆಯೂ ಗ್ರಾಮೀಣ ರಸ್ತೆ ಹಾಗೂ ಪ್ರಮುಖ ರಸ್ತೆಗಳಿಗೆ ಡಾಂಬರು ಭಾಗ್ಯ ಕಾಣಿಸಿ, ರಸ್ತೆಗಳ ಗುಣಮಟ್ಟಕ್ಕೆ ಶ್ರಮಿಸುತ್ತಿದ್ದರೆ. ಮತ್ತೂಂದೆಡೆ ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದ ಡಾಂಬರು
ಕಂಡ ರಸ್ತೆಗಳು, ಕೆಲವೇ ತಿಂಗಳಲ್ಲಿ ಮತ್ತೆ ಹಳೇ ಸ್ಥಿತಿಗೆ ಮರುಳುತ್ತಿರುವುದು ವಿಪರ್ಯಾಸವಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ವಾಹನ ಸವಾರರ ಪರದಾಟ: ಪಟ್ಟಣದಿಂದ ಕಾಮಸಮುದ್ರಕ್ಕೆ ಹೋಗುವ ರಸ್ತೆ ದಿನ್ನಕೊತ್ತೂರು ಗ್ರಾಮದ ಬಳಿ ಸಂಪೂರ್ಣ ಹಾಳಾಗಿ, ಹಳ್ಳಗಳಿಂದ ಕೂಡಿದೆ. ಮೊದಲೇ ವಾಹನಗಳ ಸಂಚಾರಕ್ಕೆ ಸಾಹಸ ಮಾಡಿಕೊಂಡು ಹೋಗಬೇಕು. ಇನ್ನು ಮಳೆ ಬಂದರಂತೂ ಯಾವುದು ರಸ್ತೆ, ಯಾವುದು ಹಳ್ಳ ಎಂಬ ವ್ಯತ್ಯಾಸ ತಿಳಿಯದೆ ವಾಹನ ಸವಾರರು ಪರದಾಡುವಂತಾಗಿದೆ. ಈ ರಸ್ತೆಯನ್ನು ಇದುವರೆಗೂ 10 ಬಾರಿ ತೇಪೆ ಕೆಲಸ ಮಾಡಲಾಗಿದೆ. ಆದರೆ, ಅದು ಕೇವಲ ವಾರದೊಳಗೆ ಕಿತ್ತು ಮತ್ತೆ ಹಳೇ ಸ್ಥಿತಿಗೆ ಬಂದರೂ, ಲೋಕೋಪಯೋಗಿ ಇಲಾಖೆ ಮಾತ್ರ ಗುತ್ತಿಗೆದಾರರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ.
ಇದೇ ಮಾರ್ಗದಲ್ಲಿ ಪರವನಹಳ್ಳಿ ಕೆರೆ ಕಟ್ಟೆ ಬಳಿ ಹಾಗೂ ಪುತ್ರಸೊಣ್ಣೆನಹಳ್ಳಿ ಬಳಿಯಂತೂ ಹೇಳ ತೀರದಾಗಿದೆ. ವರದಾಪುರ ಗೇಟ್ ಬಳಿಯೂ ವಾಹನಗಳ ಸವಾರರು ಜನಪ್ರತಿನಿಧಿಗಳನ್ನು ಶಪಿಸಿಕೊಂಡೇ ಹೋಗುವುದು ನಿತ್ಯ ಕಾಯಕವಾಗಿದೆ.
ಎಂಜಿನಿಯರ್ ಬರುವುದೇ ಅಪರೂಪ: ರಾತ್ರಿ ವೇಳೆ ರಸ್ತೆ ಮಧ್ಯದಲ್ಲಿರುವ ಗುಂಡಿಗಳು ತಿಳಿಯದೆ ಹಲವು ದ್ವಿಚಕ್ರ ವಾಹನಗಳ ಸವಾರರು ಬಿದ್ದು, ಗಾಯ ಗೊಂಡಿರುವ ಉದಾಹರಣೆಗಳಿವೆ. ಇಲ್ಲಿನ ಸಹಾಯಕ ಎಂಜಿನಿಯರ್ ಆಗಿರುವ ಚಂದ್ರಯ್ಯ ಕಚೇರಿಗೆ ಬರುವುದೇ ಅಪರೂಪವಾಗಿದೆ. ಯಾವುದಾದರೂ ಕಾಮಗಾರಿ ಬಿಲ್ ಮಾಡಬೇಕಾದರೆ ಮಾತ್ರ ಕಚೇರಿ ಸಿಗಲಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ.
ಕಳಪೆ ಕಾಮಗಾರಿ ಕಂಡರೆ ಅಂತಹ ಗುತ್ತಿಗೆ ದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಹಲವು ಬಾರಿ ಶಾಸಕರು ಹೇಳಿದ್ದರೂ ಇದುವರೆಗೂ ಯಾವ ಗುತ್ತಿಗೆದಾರರು ಅಂತಹ ಪಟ್ಟಿಯಲ್ಲಿ ಹೆಸರು ಪಡೆದಿಲ್ಲ. ರಸ್ತೆಗಳು ಮಾತ್ರ ಕಳಪೆ ಕಾಮಗಾರಿಯಿಂದ ಕೂಡಿರುವುದು ಕಣ್ಣಿಗೆ ರಾಚುತ್ತಿದೆ. ಇನ್ನಾದರೂ ಅಧಿಕಾರಿಗಳು ಗುಣಮಟ್ಟದ ರಸ್ತೆಗಳಿಗೆ ಆದ್ಯತೆ ನೀಡಲಿ, ಅವ್ಯವಸ್ಥೆಯಿಂದ ಕೂಡಿರುವ ರಸ್ತೆಗಳಿಗೆ ಮೋಕ್ಷ ಕಲ್ಪಿಸಿ, ವಾಹನಗಳು ಮುಕ್ತವಾಗಿ ಸಂಚರಿಸಲು ಅನುವು ಮಾಡಿಕೊಡಲಿ ಎಂಬುದು ವಾಹನ ಸವಾರರು ಒತ್ತಾಯಿಸಿದ್ದಾರೆ.
ಹಲವು ಬಾರಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದೊಂದೇ ಸ್ಥಳದಲ್ಲಿ ತೇಪೇ ಕೆಲಸ ಮಾಡಿದ್ದರೂ ಪ್ರಯೋಜನವಾಗುತ್ತಿಲ್ಲ. ಈ ಜಾಗದಲ್ಲಿ ಹಲವು ಬಾರಿ ಅಪಘಾತಗಳು ಸಂಭವಿ ಸಿದ್ದರೂ ಇದುವರೆಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ಹೇಳಿ ಹೇಳಿ ಸಾಕಾಗಿದೆ.
●ಕೆ.ಎಂ.ಮಂಜುನಾಥ್,
ಮಾಜಿ ಅಧ್ಯಕ್ಷ, ಕೆಸರನಹಳ್ಳಿ ಗ್ರಾಪಂ
ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗೆ 8 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ರಸ್ತೆ ಅಭಿವೃದ್ಧಿಯನ್ನು ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಎಸ್‌ಎಚ್‌ಡಿಪಿ) ಇವರು ನಿರ್ವಹಣೆ ಮಾಡಲಿದ್ದಾರೆ. ಈ ಕಾಮಗಾರಿಯು ಶೀಘ್ರದಲ್ಲೇ ಆರಂಭಗೊಳ್ಳಲಿದೆ.
●ಎಂ.ಸರಸ್ವತಿ, ಎಇಇ, ಲೋಕೋಪಯೋಗಿ
ಇಲಾಖೆ, ಬಂಗಾರಪೇಟ
●ಎಂ.ಸಿ.ಮಂಜುನಾಥ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.