ವೇತನ ಬಾಕಿ ಬಿಡುಗಡೆಗೆ ಆಗ್ರಹ
Team Udayavani, Jun 13, 2020, 6:12 AM IST
ಕೋಲಾರ: ವೇತನ ಬಾಕಿ, ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸಂಯೋಜಿತ ಗ್ರಾಪಂ ನೌಕರರ ಸಂಘ ಜಿಲ್ಲಾ ಪಂಚಾಯ್ತಿ ಕಚೇರಿ ಮುಂದೆ ಧರಣಿ ನಡೆಸಿತು. ಜಿಪಂ ಮುಂದೆ ಜಮಾವಣೆಗೊಂಡ ಗ್ರಾಪಂ ನೌಕರರು, ಸರ್ಕಾರದ ಕ್ರಮವನ್ನು ಖಂಡಿಸಿದರು.
ಎರಡು ವರ್ಷಗಳಿಂದ ಗ್ರಾಪಂ ನೌಕರರ ವೇತನ ಪಾವತಿಗೆ ಬೇಕಾಗಿರುವ ಹಣವನ್ನು ಸರ್ಕಾರವೇ ಭರಿಸುವ ತೀರ್ಮಾನ ಮಾಡಿದ್ದರೂ ಇದುವರೆಗೂ ನಮಗೆ ಸಂಬಳವಾಗಿಲ್ಲ. ಇದರಲ್ಲಿ ಪಿಡಿಒ ನಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರುರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ಮಾತನಾಡಿದರು.
ರಾಜ್ಯದ 6025 ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 65000 ಸಿಬ್ಬಂದಿಗೆ 900 ಕೋಟಿ ರೂ. ಹಣ ಬೇಕಾಗಿದೆ. 3 ತಿಂಗಳಿಗೊಮ್ಮೆ ಬಿಡುಗಡೆಯಾದ ಕಂತಿನ ಹಣದಲ್ಲಿ 2 ತಿಂಗಳು ವೇತನಕ್ಕಾಗಿ ಮಾತ್ರ ಹಣ ಸಾಕಾಗುತ್ತದೆ. 2 ವರ್ಷಗಳಿಂದ 8 ತಿಂಗಳು ಬಾಕಿ ಉಳಿದಿದೆ. ಸಮಯಕ್ಕೆ ಸರಿಯಾಗಿ ವೇತನ ಸಿಗದೇ ಆರ್ಥಿಕ ಮುಗ್ಗಟ್ಟಿನಿಂದ ಕುಟುಂಬ ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ಧರಣಿಯ ನೇತೃತ್ವವನ್ನು ಸಿಐಟಿಯು ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ, ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮರನಾರಾಯಣ, ಕಾರ್ಯದರ್ಶಿ ಯಲ್ಲಪ್ಪ, ಖಜಾಂಚಿ ಕೇಶವರಾವ್, ಮುಖಂಡರಾದ ನಾಗರಾಜ್, ರಾಮಕೃಷ್ಣಪ್ಪ, ಅಶ್ವತ್ಥ, ರಾಮಚಂದ್ರಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್ ಮೇಜರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.