ಕಾಡು ಪ್ರಾಣಿಗಳ ರಕ್ಷಣೆಗೆ ಮನವಿ
ಅರಣ್ಯ ಇಲಾಖೆ ವ್ಯವಸ್ಥಾಪಕರಿಗೆ ರೈತ ಸಂಘ ಆಗ್ರಹ
Team Udayavani, May 5, 2019, 10:03 AM IST
ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾಗಿರುವ ರೈತರ ಪ್ರತಿ ಎಕರೆಗೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ರೈತ ಸಂಘದಿಂದ ಅರಣ್ಯ ಇಲಾಖೆ ವ್ಯವಸ್ಥಾಪಕ ಪುರುಷೋತ್ತಮ್‌ಗೆ ಮನವಿ ಸಲ್ಲಿಸಲಾಯಿತು.
ಕೋಲಾರ: ಕಾಡುಪ್ರಾಣಿಗಳು ಹಾವಳಿಗೆ ಶಾಶ್ವತ ಪರಿಹಾರ ಹುಡುಕಬೇಕು, ಬೆಳೆ ನಷ್ಟವಾಗಿರುವ ರೈತರ ಪ್ರತಿ ಎಕರೆಗೆ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರೈತ ಸಂಘವು ಅರಣ್ಯ ಇಲಾಖೆ ವ್ಯವಸ್ಥಾಪಕ ಪುರುಷೋತ್ತಮ್‌ಗೆ ಮನವಿ ಮಾಡಿತು.
ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಒಂದು ಕಡೆ ಭೀಕರ ಬರಗಾಲ ಮತ್ತೂಂದೆಡೆ ಆಲಿಕಲ್ಲು ಮಳೆ ಮತ್ತು ಬಿರುಗಾಳಿಗೆ ಬೆಳೆ ನಾಶವಾಗಿ ಸಂಕಷ್ಟದಲ್ಲಿರುವ ರೈತರಿಗೆ ಕಾಡು ಪ್ರಾಣಿಗಳ ಹಾವಳಿ. ಇರುವ ಬೆಳೆಗಳು ಸಂಪೂರ್ಣ ನಾಶವಾಗಿ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಪ್ರಾಣಿಗಳು ಆಹಾರ, ನೀರಿಗಾಗಿ ರೈತರ ಬೆಳೆಗಳತ್ತ ಮುಖ ಮಾಡುತ್ತಿವೆ ಎಂದು ಹೇಳಿದರು. ಕಾಡುಪ್ರಾಣಿಗಳ ಸಮಸ್ಯೆ ಒಂದು ದಿನದ ಸಮಸ್ಯೆಯಲ್ಲ, ಇದನ್ನು ಗಂಭೀರವಾಗಿ ತೆಗೆದುಕೊಳ್ಳುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಸರ್ಕಾರ ಕಾಡು ಪ್ರಾಣಿಗಳ ಹಾವಳಿ ತಡೆಗೆ ಕೋಟ್ಯಂತರ ಹಣ ನೀಡುತ್ತಿದೆ. ಆದರೆ ಇದುವರೆಗೂ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಅಧಿಕಾರಿಗಳು ವಿಫಲವಾಗಿರುವುದಕ್ಕೆ ಕಾರಣ ತಿಳಿಯದೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಅಧಿಕಾರಿಗಳು ನಷ್ಟ ಅನುಭವಿಸಿದ ರೈತರ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಬೆಳೆ ಸಮೀಕ್ಷೆ ಮಾಡುತ್ತಿಲ್ಲ. 5 ಲಕ್ಷ ರೂ. ಮಂಜೂರಾದರೆ ರೈತರಿಗೆ 2 ಲಕ್ಷ ರೂ. ಕೊಟ್ಟು ಕೈತೊಳೆದುಕೊಳ್ಳುತ್ತಿದ್ದಾರೆ. ಮನವಿ ಸ್ವೀಕರಿಸಿದ ಪುರುಷೋತ್ತಮ್ ಮಾತನಾಡಿ, ಕಾಡುಪ್ರಾಣಿಗಳಿಂದ ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.