ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಮನವಿ

Team Udayavani, Aug 26, 2019, 3:01 PM IST

kolara-tdy-2

ಮುಳಬಾಗಿಲು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದಂತೆ ಪ್ರತಿ ಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಚತುರ್ಥಿಯನ್ನು ಸಂಭ್ರಮ ದಿಂದ ಆಚರಣೆ ಮಾಡುವಂತೆ ಪೌರಾಯುಕ್ತ ಶ್ರೀನಿವಾಸ್‌ಮೂರ್ತಿ ಮನವಿ ಮಾಡಿದ್ದಾರೆ.

ನಗರಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪಿಒಪಿ ವಿನಾಯಕನ ಮೂರ್ತಿಗಳನ್ನು ಯಾವುದೇ ಜಲಮೂಲಗಳಲ್ಲಿ ವಿಸರ್ಜನೆ ಮಾಡುವು ದನ್ನು ನಿರ್ಬಂಧಿಸಿ ಅಧಿಸೂಚನೆ ಹೊರಡಿಸ ಲಾಗಿದೆ. ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಯಲ್ಲಿ ಈಗಾಗಲೇ ವಿಸರ್ಜಿಸದೆ ಉಳಿದಿರುವ ಪಿಒಪಿ ಅಥವಾ ಬಣ್ಣದ ವಿಗ್ರಹಗಳನ್ನು ಪತ್ತೆ ಹಚ್ಚಿ, ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು. ಘನ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸಿ ಶ್ರೆಡರ್‌ಗಳನ್ನು ಉಪ ಯೋಗಿಸಿಕೊಂಡು, ಒಂದೇ ಸ್ಥಳದಲ್ಲಿ ಧಾರ್ಮಿಕ ವಿಧಿ ವಿಧಾನಗಳಿಗೆ ಭಂಗವಾ ಗದಂತೆ ವಿಲೇವಾರಿ ಮಾಡಬೇ ಕಾಗಿದೆ ಎಂದರು.

ಕಾನೂನು ಕ್ರಮ: ತಾಲೂಕಿಗೆ ಬೇರೆ ರಾಜ್ಯದಿಂದ ಬರುವಂತಹ ಪಿಒಪಿ ವಿಗ್ರಹಗಳನ್ನು ತಡೆಗಟ್ಟುವುದಲ್ಲದೇ, ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪಿಒಪಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳಿಗೆ ವ್ಯಾಪಾರದ ಲೈಸೆನ್ಸ್‌ ನೀಡದಿರಲು ಮತ್ತು ಲೈಸೆನ್ಸ್‌ ಪಡೆಯದೇ ಅನಧಿಕೃತವಾಗಿ ತಯಾರಿಸಿ, ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು ಎಂದು ಹೇಳಿದರು.

ಮೂರ್ತಿ ವಿಸರ್ಜಿಸಿ: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ನಗರಸಭೆಯು ನಿಗದಿಪಡಿಸಿರುವ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು ಎಂದು ತಿಳಿಸಿದರು.

ಸಮಿತಿ ರಚನೆ: ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‌ಗಳಲ್ಲಿ, ಕಲ್ಯಾಣಿಗಳಲ್ಲಿ ಹಸಿಕಸ(ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಸಮೇತ ಮೂರ್ತಿಗಳನ್ನು ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮ ವಹಿಸುವುದು, ವಾರ್ಡ್‌ ಮಟ್ಟದಲ್ಲಿ ಪೊಲೀಸರ ಸಹಯೋಗದೊಂದಿಗೆ ಸಮಿತಿ ಗಳನ್ನು ರಚಿಸಿ ಗಣೇಶ ವಿಗ್ರಹಗಳ ಸೂಕ್ತ ವಿಲೇವಾರಿಗೆ ಕ್ರಮಕೈಗೊಳ್ಳುವುದು ಎಂದು ಹೇಳಿದರು.

ಜಲಮೂಲಗಳ ಗುರುತು: ಗರಿಷ್ಠ 5 ಅಡಿ ಎತ್ತರದ ಮಣ್ಣಿನ ವಿಗ್ರಹಗಳನ್ನು ಮಾತ್ರ ತಯಾರಿಸಲು ಅನುಮತಿ ನೀಡುವುದು(ಮೂರ್ತಿಗಳ ಸರಾಸರಿ ತೂಕ, ಬಿರುಕು, ಸಾಗಾಣಿಕೆ ಹಾಗೂ ತ್ಯಾಜ್ಯ ಉತ್ಪನ್ನ ಪರಿಗಣಿಸಿ ಈ ಕ್ರಮ ಶಿಫಾರಸ್ಸು ಮಾಡಲಾಗಿದೆ), ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಸಾರ್ವಜನಿಕ ಗಣಪತಿ ಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸಲಾಗುವುದು ಎಂದು ವಿವರಿಸಿದರು.

ಟಾಪ್ ನ್ಯೂಸ್

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.