ಸಂಚಾರಕ್ಕೆ ಅಡ್ಡಿಯಾಗಿದ್ದ ಕಟ್ಟಡ ಅವಶೇಷ ತೆರವು
Team Udayavani, Sep 29, 2019, 2:35 PM IST
ಕೆಜಿಎಫ್: ನಗರದ ಅಶೋಕ ನಗರದ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳ ಬೇಕಿರುವ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದ್ದ ಕಟ್ಟಡಗಳ ಅವಶೇಷಗಳನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಶನಿವಾರ ತೆರವು ಗೊಳಿಸಿದರು.
ಜೆಸಿಬಿ ಯಂತ್ರದ ಸಹಾಯದಿಂದ ಕೆಡವಲಾಗಿದ್ದ ಕಟ್ಟಡದ ತ್ಯಾಜ್ಯವನ್ನು ಟ್ರಕ್‌ಗೆ ತುಂಬಿ ಹೊರಗಡೆ ಸಾಗಿಸ ಲಾಯಿತು. ಕಂಬಿಗಳನ್ನು ಗ್ಯಾಸ್ ಕಟರ್ ನಿಂದ ತುಂಡರಿಸಲಾಯಿತು. ಸಂಪಂಗಿ ಶಾಸಕರಾಗಿದ್ದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸಿದ್ದರು.
ರಸ್ತೆಗೆ ನೂರಾರು ಮನೆ ತೆರವು ಮಾಡಲಾಗಿತ್ತು. ಆದರೆ, 230 ಮೀಟರ್ ರಸ್ತೆಯಲ್ಲಿದ್ದ ಮನೆಗಳ ಮಾಲಿಕರು ರಸ್ತೆ ಅಗಲೀಕರಣಕ್ಕೆ ತಡೆ ಯೊಡ್ಡಿದ್ದರು. ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಅವರೆಲ್ಲರ ಅಹವಾಲು ಕೇಳಿ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚಿಸಿತ್ತು. ಶುಕ್ರವಾರ ನಗರಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಜಿ.ಮಂಜುನಾಥ್, ಅಶೋಕ ನಗರ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು. ಕೆಲವು ಕಟ್ಟಡ ಮಾಲಿಕರ ಜೊತೆ ಮಾತನಾಡಿದರು.
ಸಹಮತ ಪಡೆದು ಕಟ್ಟಡ ತೆರವು ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದರು.ಶಾಸಕಿ ರೂಪಕಲಾ ಅವರ ಮನವಿ ಮೇರೆಗೆ ಶೀಘ್ರ ವ್ಯಾಜ್ಯವನ್ನು ಇತ್ಯರ್ಥಮಾಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.