ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಪುನಾರಂಭಿಸಿ: ಮುನಿಯಪ್ಪ
Team Udayavani, Jul 14, 2019, 12:36 PM IST
ಕೋಲಾರ ರೈಲ್ವೆ ನಿಲ್ದಾಣದಲ್ಲಿ ನಾಲ್ಕು ತಿಂಗಳ ಹಿಂದೆ ನಿಜಾಮುದ್ದೀನ್ ರೈಲನ್ನು ಸ್ವಾಗತಿಸಿದ್ದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ. (ಸಂಗ್ರಹ ಚಿತ್ರ).
ಕೋಲಾರ: ಸ್ಥಗಿತಗೊಂಡಿರುವ ಯಶವಂತಪುರದಿಂದ ವೈಷ್ಣೋದೇವಿ ಸನ್ನಿಧಾನದ ಕಟ್ರಾವರೆಗಿನ ಹಜರತ್ ನಿಜಾಮುದ್ದೀನ್ ರೈಲು ಸಂಚಾರವನ್ನು ಪುನಾರಂಭಿಸಬೇಕೆಂದು ಕೇಂದ್ರ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹುಬ್ಬಳ್ಳಿ ಆಗ್ನೇಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಜು.12ರಂದು ಆಗ್ನೇಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದಿರುವ ಕೆ.ಎಚ್.ಮುನಿಯಪ್ಪ, ಬೆಂಗಳೂರಿನ ಯಶವಂತ ಪುರದಿಂದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಮಾರ್ಗವಾಗಿ ವೈಷ್ಣೋದೇವಿ ಸನ್ನಿಧಾನದ ರೈಲು ನಿಲ್ದಾಣದವರೆಗೂ ವಾರಕ್ಕೊಮ್ಮೆ ಸಂಚರಿಸುತ್ತಿರುವ 06521 ಮತ್ತು 06522 ಸಂಖ್ಯೆ ರೈಲನ್ನು ನಾಲ್ಕು ತಿಂಗಳ ಹಿಂದೆ ಆರಂಭಿಸಲಾಗಿತ್ತು.
50 ಲಕ್ಷ ಮಂದಿ ವಾಸ ಮಾಡುತ್ತಿರುವ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಿಗೆ ಈ ರೈಲು ಸಂಚಾರದಿಂದ ಸಾಕಷ್ಟು ಪ್ರಯೋಜನವಾಗಿತ್ತು. ಈ ಜಿಲ್ಲೆಗಳ ಪ್ರತಿ ನಿಲ್ದಾಣದಿಂದಲೂ ಪ್ರಯಾಣಿಕರು ದೆಹಲಿ, ತಿರುಪತಿ, ಅಜ್ಮೀರ್, ವೈಷ್ಣೋದೇವಿ ದರ್ಶನಕ್ಕಾಗಿ ತೆರಳಿ ಮತ್ತದೇ ರೈಲಿನಲ್ಲಿ ಹಿಂತಿರು ಗುತ್ತಿದ್ದರು. ಆದರೆ, ಈಗ ಈ ರೈಲು ಸಂಚಾರವನ್ನು ಇಲಾಖೆಯು ಸ್ಥಗಿತ ಗೊಳಿಸಿರುವುದರಿಂದ ಈ ಜಿಲ್ಲೆಗಳ ಪ್ರಯಾಣಿಕರಿಗೆ ಸಾಕಷ್ಟು ತೊಂದರೆ ಯಾಗಿದೆ. ಆದ್ದರಿಂದ ಯಶವಂತಪುರ ನಿಲ್ದಾಣದಿಂದ ಕಟ್ರಾವರೆಗೂ ವಾರಕ್ಕೊಮ್ಮೆ ಸಂಚರಿಸುತ್ತಿದ್ದ ಹಜರತ್ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಪುನಾರಂಭಿಸುವ ಮೂಲಕ ಈ ಮೂರು ಜಿಲ್ಲೆಗಳ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.