ಗ್ರಾಪಂ ತೆರಿಗೆ ಪರಿಷ್ಕರಣೆಯಿಂದ ಆದಾಯ ಹೆಚ್ಚಳ
ಪ್ರಸಕ್ತ ವರ್ಷ ಈವರೆಗೂ 10.66 ಕೋಟಿ ರೂ. ತೆರಿಗೆ ವಸೂಲಿ ಶೇ.95 ಸಾಧನೆ ಮಾಡಿದ್ದೇವೆ: ಸಿಇಒ ಜಗದೀಶ್
Team Udayavani, Aug 5, 2019, 11:09 AM IST
ಜಗದೀಶ್, ಜಿಪಂ ಸಿಇಒ
ಕೋಲಾರ: ಗ್ರಾಪಂಗಳ ತೆರಿಗೆ ಪರಿಷ್ಕರಣೆಯಿಂದಾಗಿ 10.86 ಕೋಟಿ ರೂ. ವಸೂಲಿ ಗುರಿಯಲ್ಲಿ ಈಗಾಗಲೇ 10.66 ಕೋಟಿ ವಸೂಲಿ ಮಾಡಿದ್ದು, ಶೇ.95ರಷ್ಟು ಸಾಧನೆಯಾಗಿದೆ ಎಂದು ಜಿಪಂ ಸಿಇಒ ಜಿ.ಜಗದೀಶ್ ತಿಳಿಸಿದರು.
ನಗರದ ಜಿಪಂ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ತೆರಿಗೆ ಪರಿಷ್ಕರಣೆಗೆ ಕ್ರಮ ಕೈಗೊಂಡಿದ್ದು, ಇದರಿಂದ ಶೇ.5ರಷ್ಟು ಆದಾಯ ಹೆಚ್ಚಳವಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸುಮಾರು ವರ್ಷಗಳಿಂದ ತೆರಿಗೆ ಪರಿಷ್ಕರಣೆಯಾಗಿರಲಿಲ್ಲ. ಇದರಿಂದ ಆ.9ರಂದು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ತೆರಿಗೆ ವಸೂಲಿಯಲ್ಲಿ ಶೇ.95 ಸಾಧನೆ:ಪಂಚಾಯ್ತಿಗೆ ಬರುವ ತೆರಿಗೆಯಿಂದಲೇ ಕೆಲ ಸಿಬ್ಬಂದಿ ವೇತನ ಪಾವತಿಯಾಗುತ್ತಿದೆ. ಹಿಂದೆ ಜಿಲ್ಲೆಯಲ್ಲೆ 3 ಕೋಟಿ ಮಾತ್ರ ತೆರಿಗೆ ವಸೂಲಿಯಾಗುತ್ತಿತ್ತು. ಹಿಂದಿನ ವರ್ಷದಿಂದ 10.86 ಕೋಟಿ ಇದ್ದ ಗುರಿಯಲ್ಲಿ ಈಗ 10.66 ಕೋಟಿ ವಸೂಲಿ ಮಾಡಿದ್ದು, ಶೇ.95 ಸಾಧನೆ ಮಾಡಿದ್ದೇವೆ ಎಂದು ತಿಳಿಸಿದರು.
ರೈತರ ಖಾತೆಗೆ ಕಿಸಾನ್ ಸಮ್ಮಾನ್ ಹಣ: ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಯಲ್ಲಿ ಈಗಾಗಲೇ 1,15,000 ಅರ್ಜಿ ಸಲ್ಲಿಸಿದ್ದು, ವಾರ್ಷಿಕವಾಗಿ ಕೇಂದ್ರ 6 ಸಾವಿರ ಮತ್ತು ರಾಜ್ಯ ಸರ್ಕಾರ 4 ಸಾವಿರ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುತ್ತದೆ .ರೈತರು ಅಗತ್ಯ ದಾಖಲೆ ನೀಡಬೇಕೆಂದು ಹೇಳಿದರು.
ಸರ್ಕಾರಿ ಆಸ್ತಿಯನ್ನು ಯಾರಾದರೂ ಒತ್ತುವರಿ ಮಾಡಿಕೊಂಡರೆ ‘ಲ್ಯಾಂಡ್ ಗ್ರಾಬ್’ ಕಾಯ್ದೆಯಡಿ ಪ್ರಕರಣ ದಾಖಲಿಸಲಿ, ಯಾವುದೇ ಮುಲಾಜಿಗೆ ಒಳಗಾಗದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಒತ್ತುವರಿ ತೆರವುಗೊಳಿಸಿ: ಕೆರೆ, ಕುಂಟೆ, ಕಲ್ಯಾಣಿ, ಸರ್ಕಾರಿ ಜಾಗ ಒತ್ತುವರಿಯಾಗಿದ್ದು, ಸರ್ವೇ ಮಾಡಿ ತೆರವುಗೊಳಿಸಲಾಗಿದೆ. ಗಡಿ ಗುರುತಿಸಿ ಸರ್ಕಾರಿ ಆಸ್ತಿ ಎಂದು ಫಲಕ ಹಾಕಲಾಗುವುದು. ಇನ್ನು ಯಾರಾದರೂ ಒತ್ತುವರಿಯಲ್ಲಿದ್ದರೆ ಸ್ವಯಂ ಪ್ರೇರಿತರಾಗಿ ತೆರವುಗೊಳಿಸಬೇಕು, ಇಲ್ಲದಿದ್ದರೆ ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಟ್ಟುನಿಟ್ಟಿನ ಸೂಚನೆ: ಮುಖ್ಯ ಮಂತ್ರಿಗಳ ಸಭೆಯಲ್ಲಿ ಸರ್ಕಾರಿ ನೌಕರರು ನಿಗತ ಅವಧಿಯಲ್ಲಿ ಕಚೇರಿಗೆ ಹಾಜರಾಗುವಂತೆ ಸಮಯ ಪಾಲನೆ ಕಟ್ಟು ನಿಟ್ಟುಗೊಳಿಸಿಲು ಆದೇಶಿಸಿದ್ದಾರೆ. ಸಾರ್ವಜನಿಕರನ್ನು ವಿನಾಕಾರಣ ಕಚೇರಿಗಳಿಗೆ ಆಲೆದಾಡಿಸುವುದನ್ನು ತಪ್ಪಿಸಲು ಸೂಚನೆ ನೀಡಿದ್ದಾರೆ. ಜತೆಗೆ ಡೀಸಿ, ಸಿಇಒ ದಿಢೀರ್ ಭೇಟಿ ನೀಡಲು ಹೇಳಿದ್ದಾರೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಎದುರಾಗಿರುವ ಬರ ನಿರ್ವಹಣೆ, ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಕೋರಲಾಗಿದೆ. ಹೊಸದಾಗಿ ಕೊಳವೆಬಾವಿ ಕೊರೆಯಿಸಲು ಅನುದಾನಕ್ಕೆ ಬೇಡಿಕೆ ಇಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.