ನಗರಾಭಿವೃದ್ಧಿಗೆ ರಸ್ತೆ ಅಗಲೀಕರಣ ಅನಿವಾರ್ಯ
ಕಾಮಗಾರಿ ಸುಗಮವಾಗಿ ನಡೆಯಲು ಸಹಕರಿಸಿ • ಸಾರ್ವಜನಿಕರ ಸಭೆಯಲ್ಲಿ ಸಂಸದ ಮುನಿಸ್ವಾಮಿ ಮನವಿ
Team Udayavani, Jul 21, 2019, 2:07 PM IST
ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಸ್ತೆಗಳ ಅಗಲೀಕರಣ ಮತ್ತು ಅಭಿವೃದ್ಧಿ ಕುರಿತಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರ ಸಭೆಯಲ್ಲಿ ಸಂಸದ ಮುನಿಸ್ವಾಮಿ ಮಾತನಾಡಿದರು.
ಕೋಲಾರ: ಜಿಲ್ಲಾ ಕೇಂದ್ರವನ್ನು ಅಭಿವೃದ್ಧಿಪಡಿಸಲು ನಗರದ ವಿವಿಧ ರಸ್ತೆಗಳನ್ನು ಅಗಲೀಕರಣಗೊಳಿಸಲು ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಶನಿವಾರ ರಸ್ತೆಗಳ ಅಗಲೀಕರಣ ಮತ್ತು ಅಭಿವೃದ್ಧಿ ಕುರಿತಂತೆ ನಡೆದ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದರು. ಒಂದು ನಗರವು ಅಭಿವೃದ್ಧಿಯಾಗಲು ಅಲ್ಲಿನ ರಸ್ತೆಗಳು, ಸಾರಿಗೆ ವ್ಯವಸ್ಥೆ ಉತ್ತಮವಾಗಿರಬೇಕು. ಆದರೆ, ನಗರವು ಜಿಲ್ಲಾ ಕೇಂದ್ರವಾಗಿದ್ದರೂ, ಒಂದು ದೊಡ್ಡ ಹಳ್ಳಿಯಂತೆ ಇದೆ. ಆದ್ದರಿಂದ ಈಗಲಾದರೂ ರಸ್ತೆ ಅಗಲೀಕರಣಗೊಳಿಸಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ತಿಳಿಸಿದರು.
ಹಣ ಪೋಲಾಗುವುದು ತಪ್ಪುತ್ತೆ: ಸರ್ಕಾರದಿಂದ ಬರುವ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ಕಾಮಗಾರಿಗಳು ನಡೆಯುವಾಗ ಅಂದಾಜು ಮೊತ್ತ, ಕಾಮಗಾರಿಗಳ ವಿವರಗಳನ್ನು ಕಡ್ಡಾಯವಾಗಿ ಪ್ರಚುರ ಪಡಿಸಬೇಕು.ಸಾರ್ವಜನಿಕರು ಕಾಮಗಾರಿಯ ಗುಣ ಮಟ್ಟವನ್ನು ಪ್ರಶ್ನಿಸಬೇಕು. ಇದರಿಂದ ಸರ್ಕಾರದ ಹಣ ಅನಗತ್ಯವಾಗಿ ಪೋಲಾಗುವುದು ತಪ್ಪುತ್ತದೆ ಎಂದರು.
ಅನುದಾನ: ಕೋಲಾರದ ನಗರದ ಅಭಿವೃದ್ಧಿಗೆ ಕುಡಿಯುವ ನೀರಿನ ಕಾಮಗಾರಿಗಳಿಗೆ 3.66 ಕೋಟಿ ರೂ. ಕಲ್ಯಾಣಿ ಮತ್ತು ಚರಂಡಿಗಳ ಪುನಶ್ಚೇತನಕ್ಕೆ 13 ಕೋಟಿ ರೂ., 12 ಉದ್ಯಾನ ಹಾಗೂ 2 ಬಸ್ ನಿಲ್ದಾಣಗಳ ಅಭಿವೃದ್ಧಿಗೆ 138 ಕೋಟಿ ರೂ. ಅನುದಾನ ಬಂದಿದೆ ಎಂದು ಮಾಹಿತಿ ನೀಡಿದರು.
ಶಾಸಕ ಕೆ.ಶ್ರೀನಿವಾಸಗೌಡ ಮಾತನಾಡಿ, ಕೋಲಾರ ನಗರದಲ್ಲಿ ಚರಂಡಿಗಳನ್ನು ಮುಚ್ಚಿ, ರಸ್ತೆಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ರಸ್ತೆಗಳು ಕಿರಿದಾಗಿದೆ. ಮಳೆಗಾಲದಲ್ಲಿ ನೀರು ರಸ್ತೆಗಳಲ್ಲಿ ಹರಿಯುವಂತಾಗಿದೆ. ನಗರಸಭೆಯವರು ಇತ್ತ ಗಮನ ಹರಿಸಿ ಒತ್ತುವರಿ ತೆರವುಗೊಳಿಸಬೇಕು ಎಂದು ಸೂಚಿಸಿದರು.
ಅಭಿವೃದ್ಧಿ ಮೂಲ ಉದ್ದೇಶ: ರಸ್ತೆಗಳ ಅಗಲೀಕರಣ ಸಂದರ್ಭದಲ್ಲಿ ಯಾವುದೇ ದೇವಸ್ಥಾನ, ಚರ್ಚ್, ಮಸೀದಿಗಳು ಇದ್ದರೂ ಅವುಗಳನ್ನು ತೆರವುಗೊಳಿಸಲು ಎಲ್ಲಾ ಸಮುದಾಯದವರು ಸಹಕರಿಸಬೇಕು. ಒಟ್ಟಾರೆ ನಗರದ ಅಭಿವೃದ್ಧಿಯನ್ನು ಮೂಲ ಉದ್ದೇಶವಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಒತ್ತುವರಿದಾರರಿಗೆ ಪರಿಹಾರವಿಲ್ಲ: ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾತನಾಡಿ, 1870ರಲ್ಲಿ ಬ್ರಿಟಿಷರು ರಸ್ತೆಗಳ ವಿಸ್ತಾರವನ್ನು ಗುರುತಿಸಿದ್ದಾರೆ. ಅದರಂತೆ ರಾಜ್ಯ ಹೆದ್ದಾರಿಗಳಿಗೆ 50 ಮೀಟರ್ ಅಗಲ ತೆಗೆದುಕೊಳ್ಳಬೇಕು. ಆದರೆ, ಸಾರ್ವಜನಿಕ ಹಿತದೃಷ್ಟಿಯಿಂದ ಹೆಚ್ಚಿನ ಜನರಿಗೆ ಅನಾನುಕೂಲವಾಗಬಾರದು ಎಂದು 24 ಮೀಟರ್ ರಸ್ತೆಯನ್ನು ಅಗಲೀಕರಣ ಮಾಡಲಾಗುವುದು. ರಸ್ತೆಗೆ ಜಾಗವನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು ನಿರ್ಮಿಸಿರುವವರಿಗೆ ಯಾವುದೇ ರೀತಿಯ ಪರಿಹಾರ ಸಿಗುವುದಿಲ್ಲ ಎಂದು ಮಾಹಿತಿ ನೀಡಿದರು. ಎಸ್ಪಿ ಕಾರ್ತಿಕ್ ರೆಡ್ಡಿ, ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.