186 ಮಹಿಳಾ ಸಂಘಕ್ಕೆ 10 ಕೋಟಿ ರೂ.ಸಾಲ

ಬಡ್ಡಿರಹಿತ ಸಾಲದ ಮೊತ್ತ 10 ಲಕ್ಷ ರೂ. ಗೇರಿಸಲು ಕ್ರಮ: ಸ್ಪೀಕರ್‌ ರಮೇಶ್‌ಕುಮಾರ್‌

Team Udayavani, Jun 3, 2019, 9:19 AM IST

kolar-tdy-01…

ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಭಾನುವಾರ ಡಿಸಿಸಿ ಬ್ಯಾಂಕ್‌ನಿಂದ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ 10 ಕೋಟಿ ರೂ. ಸಾಲ ವಿತರಣೆ ಮಾಡಿದರು.

ಕೋಲಾರ: ಡಿಸಿಸಿ ಬ್ಯಾಂಕಿನಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುವ ಬಡ್ಡಿರಹಿತ ಸಾಲವನ್ನು 5 ಲಕ್ಷದಿಂದ 10 ಲಕ್ಷ ರೂ.ಗೇರಿಸಲು ವಾರದೊಳಗೆ ಸರ್ಕಾರದೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ವಿಧಾನ ಸಭಾಧ್ಯಕ್ಷ ಕೆ.ಆರ್‌.ರಮೇಶ್‌ಕುಮಾರ್‌ ಭರವಸೆ ನೀಡಿದರು.

ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ನಿಂದ ನಡೆದ ಸುಗಟೂರು ಹೋಬಳಿಯ 186 ಸ್ವಸಹಾಯ ಸಂಘಗಳಿಗೆ 10.2 ಕೋಟಿ ರೂ. ಸಾಲ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಮುನ್ನ ಹೇಳಿರುವಂತೆಯೇ ಪ್ರತಿಯೊಂದು ಸ್ವಸಹಾಯ ಸಂಘಕ್ಕೂ ತಲಾ 10 ಲಕ್ಷ ರೂ. ಸಾಲ ನೀಡುತ್ತೇವೆ. ಇದರಲ್ಲಿ ಅನುಮಾನ ಬೇಡ, ತಡವಾಗುವುದನ್ನು ತಪ್ಪಿಸಲು ಈಗ 5 ಲಕ್ಷ ರೂ. ನೀಡುತ್ತಿದ್ದು, ಮುಂದಿನ 10 ದಿನಗಳೊಳಗೆ ಉಳಿದ 5 ಲಕ್ಷ ರೂ. ಸಂಘಗಳಿಗೆ ನೀಡುವುದಾಗಿ ತಿಳಿಸಿದರು.

ಸ್ವಾವಲಂಬಿಗಳಾಗಿ: ಸಂಘದ ಪ್ರತಿಯೊಬ್ಬ ಸದಸ್ಯರಿಗೆ 50 ಸಾವಿರ ರೂ. ಬದಲಿಗೆ ನಿಮಗೆ 1 ಲಕ್ಷ ರೂ. ಅನ್ನು ನೀಡುತ್ತಿರುವುದು ಪ್ರವಾಸ ಹೋಗುವುದಕ್ಕೆ ಅಲ್ಲ. ಹೈನುಗಾರಿಕೆ ಸೇರಿ ಇನ್ನಿತರೆ ಕೆಲಸಗಳಿಗೆ ಬಳಸಿಕೊಂಡು ತಮ್ಮ ಕುಟುಂಬ ನಿರ್ವಹಣೆ ಮಾಡಿಕೊಳ್ಳುವಷ್ಟು ಮಟ್ಟಕ್ಕೆ ಸ್ವಾವಲಂಬಿಗಳಾಗಿ ಬೆಳೆಯಬೇಕು ಎಂದು ಸಲಹೆ ನೀಡಿದರು.

ಎತ್ತಿನ ಹೊಳೆ ನೀರಿಗೆ ಕಾತರ: ನನ್ನ ಇಬ್ಬರು ಮಕ್ಕಳಿಗೆ ಮದುವೆಯಾಗಿದ್ದು, ಅವರು ಆರಾಮಾಗಿ ಇದ್ದಾರೆ. ಹೀಗಾಗಿ ನನಗೆ ಬೇರೆ ಯಾವುದೇ ಆಲೋಚನೆಗಳಿಲ್ಲ. ಮಲಗಿದರೂ, ಎದ್ದರೂ ನನಗೆ ನೀರಿನದ್ದೇ ಚಿಂತೆಯಾಗಿದೆ. ಕೆ.ಸಿ. ವ್ಯಾಲಿ ಜತೆಗೆ ಎತ್ತಿನಹೊಳೆ ಯೋಜನೆಯಡಿ ಜಿಲ್ಲೆಗೆ ನೀರು ಯಾವಾಗ ಬರುತ್ತದೆ ಎನ್ನುವ ಕಾತುರ ನನ್ನಲ್ಲಿದೆ. ಸರ್ಕಾರಿ ಭೂಮಿಗಳಲ್ಲಿ ಹುಲ್ಲು ಬೆಳೆದು ನಿಮ್ಮ ಹಸುಗಳಿಗೆ ನೀಡಬೇಕು ಎನ್ನುವ ಆಸೆ ನನಗಿದೆ. ನನ್ನ ಆಲೋಚನೆಯು ಜನರು, ಬಡವರ ಪರ ಇರುವುದರಿಂದ ನನ್ನ ಪರವಾಗಿ ನೀವಿದ್ದೀರಿ ಎನ್ನುವ ಆಶಾಭಾವನೆ ನನ್ನಲ್ಲಿದೆ ಎಂದರು.

ಕೊಳವೆಬಾವಿಗೆ ಚಾಲನೆ: ಕೇವಲ ಎಸ್ಸಿ, ಎಸ್ಟಿಗಳಿಗೆ ಮಾತ್ರವಲ್ಲದೆ ಎಲ್ಲ ವರ್ಗದ ರೈತರಿಗೂ ಕೊಳವೆಬಾವಿಗಳನ್ನು ಕೊರೆಯಿಸಲು 1 ತಿಂಗಳಲ್ಲೇ ಚಾಲನೆ ನೀಡಲಾಗುವುದು, ನಾನು ಪಾರ್ಟಿ, ಜಾತಿಗಳನ್ನು ದಾಟಿ ಬಂದಿರುವುದರಿಂದ ಎಲ್ಲರೂ ನನಗೆ ಸಮಾನರು ಎಂದು ತಿಳಿಸಿದರು. ಸರ್ಕಾರದ ವಿವಿಧ ಸಹಾಯಧನ ಸೇರಿದಂತೆ ಇತರೆಲ್ಲಾ ಯೋಜನೆಗಳನ್ನು ಡಿಸಿಸಿ ಬ್ಯಾಂಕ್‌ ಮೂಲಕವೇ ಅನುದಾನ ನೀಡಿ ಅನುದಾನ ನೀಡಿಕೆಗೆ ನಾನು ಬದ್ಧನಾಗಿದ್ದು, ಸರ್ಕಾರದೊಂದಿಗೆ ಚರ್ಚಿಸಿ ಅಗತ್ಯ ಕ್ರಮದ ಭರವಸೆ ನೀಡಿದರು.

ಕೊಟ್ಟ ಮಾತಿಗೆ ಎಂದೂ ತಪ್ಪುವುದಿಲ್ಲ, ತಪ್ಪಿದರೆ ಈ ಭೂಮಿಯ ಮೇಲೆಯೇ ಉಳಿಯಲ್ಲ ಎಂದು ತಿಳಿಸಿದ ಅವರು, ದೇವರ ಕೆಲಸ ಮಾಡಿದರೆಪುಣ್ಯ ಬರಲ್ಲ, ಜನರ ಕೆಲಸ ಮಾಡಿದರೆ ಪುಣ್ಯ ಬರುತ್ತದೆ ಎಂದರು.

ಸಾಲ ವಿತರಿಸಲು ವ್ಯವಸ್ಥೆ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿಗೋವಿಂದಗೌಡ ಅಧ್ಯಕ್ಷತೆವಹಿಸಿದ್ದು, ವೇಮಗಲ್ ವ್ಯಾಪ್ತಿಯ ಉರಿಗಿಲಿ ಗ್ರಾಪಂಅನ್ನು ಸಾಲ ವಿತರಣೆ ಮಾಡುವ ಸಲುವಾಗಿ ಸುಗಟೂರು ವ್ಯಾಪ್ತಿಗೆ ಸೇರಿಸಲಾಗಿದ್ದು, ಅಲ್ಲಿನ ಮಹಿಳಾ ಸಂಘಗಳಿಗೂ ಸಾಲ ನೀಡುವ ವ್ಯವಸ್ಥೆ ಮಾಡಬೇಕು ಎಂದರು.

ಇಲಾಖೆಗಳು ಠೇವಣಿ ಇಡಲಿ: ಸಾಲ ಪಾವತಿ ವಿಚಾರದಲ್ಲಿ ಸುಗಟೂರು ಹಾಗೂ ಹೋಳೂರು ಹೋಬಳಿಯಲ್ಲಿ ಯಾರೊಬ್ಬರೂ ನಂಬಿಕೆ ಕಳೆದುಕೊಂಡಿಲ್ಲ. ನಮ್ಮ ಮೇಲೆ ಈ ಹಿಂದೆ ದೂರು ಕೊಟ್ಟವರೇ ಈಗ ನಿಮ್ಮನ್ನು ನೋಡಿ ಕಲಿಯಬೇಕಾಗಿದೆ. ಸರ್ಕಾರದ ವಿವಿಧ ಇಲಾಖೆಗಳ ಹಣವನ್ನು ಡಿಸಿಸಿ ಬ್ಯಾಂಕಿನಲ್ಲೇ ಠೇವಣಿಯಿಟ್ಟು ವ್ಯವಹರಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಸ್ಪೀಕರ್‌ಗೆ ಮನವಿ ಮಾಡಿದ ಅವರು, ಇದರಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯ ಒದಗಿಸಲು ಸಾಧ್ಯವಾಗಲಿದೆ ಎಂದರು. ಸುಗಟೂರು ಎಸ್‌ಎಫ್‌ಸಿಎಸ್‌ ಅಧ್ಯಕ್ಷ ಟಿ.ವಿ.ತಿಮ್ಮರಾಯಪ್ಪ ಸ್ವಾಗತಿಸಿ, ಇದೀಗ 186 ಸಂಘಗಳಿಗೆ ಸಾಲ ವಿತರಿಸುತ್ತಿದ್ದು, ಇದರಲ್ಲಿ 165 ಸಂಘಗಳು ಹಳೆಯ ಸಂಘಗಳಾಗಿವೆ, 21 ಹೊಸ ಸಂಘಗಳಿಗೂ ಸಾಲ ನೀಡುತ್ತಿರುವುದಾಗಿ ತಿಳಿಸಿದರು.

9ರಂದು ಶ್ರೀನಿವಾಸಪುರದಲ್ಲಿ ಕಲ್ಯಾಣೋತ್ಸವ:

 ಲೋಕ ಕಲ್ಯಾಣಕ್ಕಾಗಿ ಪ್ರತಿ ವರ್ಷದಂತೆಯೇ ಶ್ರೀನಿವಾಸಪುರದಲ್ಲಿ ಜನ್ಮಭೂಮಿ ಸೇವಾ ಟ್ರಸ್ಟ್‌ ನಿಂದ 7ನೇ ವರ್ಷದ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸ್ಪೀಕರ್‌ ರಮೇಶ್‌ಕುಮಾರ್‌ ತಿಳಿಸಿದರು. ಆಂಧ್ರಪ್ರದೇಶದ ಸಿಂಹಾಚಲಂ ವರಾಹಾಲ ಲಕ್ಷ್ಮಿನರಸಿಂಹಸ್ವಾಮಿ ಭವ್ಯ ಮೆರವಣಿಗೆ ಹಾಗೂ ಕಲ್ಯಾಣೋತ್ಸವ ಪ್ರಯುಕ್ತ ಜೂ.4 ರಿಂದ 9ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರೂ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಮಹಿಳಾ ಸಂಘಗಳ ಸದಸ್ಯರನ್ನು ಆಹ್ವಾನಿಸಿದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.