ಕೆ.ಸಿ.ರೆಡ್ಡಿ ಸ್ಮಾರಕ ನಿರ್ಮಾಣಕ್ಕೆ 2 ಕೋಟಿ ರೂ.
Team Udayavani, Jul 9, 2020, 6:23 AM IST
ಕೋಲಾರ/ಕೆಜಿಎಫ್: ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದಲ್ಲಿ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಸ್ಮಾರಕ ನಿರ್ಮಾಣಕ್ಕೆ ಶಾಸಕಿ ರೂಪಕಲಾ, ಜಿಲ್ಲಾಧಿಕಾರಿ ಸಿ. ಸತ್ಯಭಾಮ ಜತೆಗೆ ಸಭೆ ನಡೆಸಿದರು. ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಸರ್ಕಾರ ಸ್ಮಾರಕ ನಿರ್ಮಾಣಕ್ಕೆ ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಿದ್ದು, 30 ಎಕರೆ ಭೂಮಿ ಗುರುತಿಸಲಾಗಿದೆ. ಸಿಬ್ಬಂದಿ ಕೊರತೆಯಿಂದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಣವನ್ನು ಪ್ರವಾಸೋದ್ಯಮ ಇಲಾಖೆಗೆ ವರ್ಗಾಯಿಸಲು ಸಿದ್ಧವಿದೆ ಎಂದು ವಿವರಿಸಿದರು.
ಪ್ರವಾಸೋದ್ಯಮ ತಾಣವಾಗಿಸಲು ಕ್ರಮ: ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ವಸಂತಮ್ಮ ಮಾತನಾಡಿ, ಕೆ.ಸಿ. ರೆಡ್ಡಿ ಸ್ಮಾರಕ ನಿರ್ಮಾಣ ಮಾಡುವ ಮೂಲಕ ಕ್ಯಾಸಂಬಳ್ಳಿಯನ್ನು ಪ್ರವಾಸೋದ್ಯಮ ಸ್ಥಳವ ನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ಇದರಿಂದಾಗಿ ಈ ಸಂಬಂಧ ಡಿಪಿಆರ್ ರಚನೆ ಮಾಡಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ವಜ್ರಕವಚಕ್ಕೆ ಅಸ್ತು: ಪೌರಾಣಿಕ ಪ್ರಸಿದ್ಧ ಗುಟ್ಟಹಳ್ಳಿ ಮೂಲ ದೇವರಿಗೆ ವಜ್ರ ಕವಚ ಮಾಡಿಸುವುದು ಭಕ್ತರ ಆಶಯವಾಗಿದ್ದು, ಇದಕ್ಕಾಗಿ ದೇವಸ್ಥಾನಕ್ಕೆ ಬಂದಿರುವ 70 ಕೆ.ಜಿ. ಬೆಳ್ಳಿಯನ್ನು ಉಪಯೋಗಿಸಿಕೊಳ್ಳಬಹುದೆಂದು ಶಾಸಕಿ ರೂಪಕಲಾ ಹೇಳಿದಾಗ ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಡಿ.ಸಿ. ಮುಜರಾಯಿ ತಹಶೀಲ್ದಾರ್ ನಾಗವೇಣಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.