ಬರ ನಿರ್ವಹಣೆಗೆ 2,600 ಕೋಟಿ ರೂ. ಅನುದಾನ


Team Udayavani, Jan 27, 2019, 9:59 AM IST

kolara.jpg

ಕೋಲಾರ: ರಾಜ್ಯದಲ್ಲಿ ಉಂಟಾಗಿರುವ ಬರ ನಿರ್ವಹಣೆಗೆ ಹಾಗೂ ಕುಡಿಯುವ ನೀರಿನ ಪೂರೈಕೆಗೆ 2,600 ಕೋಟಿ ರೂ. ಅನುದಾನವನ್ನು ಜಿಪಂಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ 70ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ಪೀಕರಿಸಿ ಅವರು ಮಾತನಾಡಿದರು.

ಬಿಡುಗಡೆಯಾದ ಅನುದಾನದಲ್ಲಿ ಈಗಾಗಲೇ 1600 ರಿಂದ 1800 ಕೋಟಿ ರೂ. ವೆಚ್ಚ ಮಾಡಲಾಗಿದೆ. ರಾಜ್ಯದಲ್ಲಿ 29 ಸಾವಿರ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಂಡಿದ್ದು, ಈಗಾಗಲೇ 27 ಸಾವಿರ ಕಾಮಗಾರಿಗಳು ಪೂರ್ಣಗೊಂಡಿವೆ. ಕುಡಿಯುವ ನೀರಿನ ಸಮಸ್ಯೆ ಕಂಡುಬಂದ 2 ದಿನಗಳಲ್ಲಿ ಸಮಸ್ಯೆ ಬಗೆಹರಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಮಸ್ಯೆ ಕಂಡುಬಂದಲ್ಲಿ ಖಾಸಗಿ ಬೋರ್‌ವೆಲ್‌ಗ‌ಳು ಅಥವಾ ಟ್ಯಾಂಕರ್‌ ಮೂಲಕ ನೀರನ್ನು ಒದಗಿಸಬೇಕು. ರಾಜ್ಯದಲ್ಲಿ 644 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಇದರಲ್ಲಿ 280 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಹಾಗೂ 364 ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗ‌ಳ ಮೂಲಕ ನೀರನ್ನು ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

8.5 ಕೋಟಿ ಮಾನವ ದಿನ: ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯದಲ್ಲಿ 8.5 ಕೋಟಿ ಮಾನವ ದಿನಗಳ ಗುರಿಯಿತ್ತು. ಈಗಾಗಲೇ ಈ ಗುರಿಯನ್ನು ಮೀರಿ 7.88 ಕೋಟಿ ಮಾನವ ದಿನಗಳ ಸೃಷ್ಟಿಸಲಾಗಿದೆ. ಮಾರ್ಚ್‌ ಅಂತ್ಯದ ವೇಳೆಗೆ 10.5 ಕೋಟಿ ಮಾನವ ದಿನಗಳ ಸೃಜಿಸುವ ಗುರಿಯಿದೆ. ಕೋಲಾರ ಜಿಲ್ಲೆಯಲ್ಲಿ 22.88 ಲಕ್ಷ ಮಾನವ ದಿನಗಳ ಗುರಿಯಿತ್ತು. ಈಗಾಗಲೇ 30.81 ಲಕ್ಷ ಮಾನವ ದಿನಗಳ ಸೃಜಿಸಿ, ಕೋಲಾರ ಜಿಲ್ಲೆ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೇಂದ್ರದ ಅನುದಾನ ಬಾಕಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ 1800 ಕೋಟಿ ರೂ.ಅನುದಾನ ಬಾಕಿ ಬರಬೇಕಿದ್ದು, ಈ ಸಂಬಂಧ ರಾಜ್ಯದ ಸಂಸದರು, ಸಚಿವರು ಒಳಗೊಂಡಂತೆ 25 ಜನರ ತಂಡ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

1110 ಶುದ್ಧ ಕುಡಿವ ನೀರು ಘಟಕ: ಕೋಲಾರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಗೆ 2018-19ನೇ ಸಾಲಿನಲ್ಲಿ 40.25 ಕೋಟಿ ರೂ. ಅನುದಾನ ಹಂಚಿಕೆಯಾಗಿದ್ದು, ಪ್ರಸಕ್ತ ಸಾಲಿಗೆ ಪ್ರಾರಂಭಿಕ ಶುಲ್ಕ ಒಳಗೊಂಡಂತೆ 38.40 ಕೋಟಿ ರೂ. ಬಿಡುಗಡೆಯಾಗಿದೆ. 33.02 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕೋಲಾರ ಜಿಲ್ಲಾ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ಒಟ್ಟು 1110 ಶುದ್ಧ ಕುಡಿಯುವ ನೀರಿನ ಘಟಕಗಳು ಮುಂಜೂರಾಗಿದ್ದು, ಒಟ್ಟಾರೆ, 1073 ಘಟಕಗಳು ಪೂರ್ಣಗೊಂಡಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮೊದಲ ಹಂತದಲ್ಲಿ ಬರ ಘೋಷಣೆಯಾಗಿರುವ ತಾಲೂಕುಗಳಿಗೆ ತಲಾ 1 ಕೋಟಿ ರೂ., ಎರಡನೇ ಹಂತದಲ್ಲಿ ಬರ ಘೋಷಣೆಯಾಗಿರುವ ತಾಲೂಕುಗಳಿಗೆ ತಲಾ 50 ಲಕ್ಷ ರೂ. ಹಾಗೂ ಬರ ಘೋಷಣೆಯಾಗದಿರುವ ತಾಲೂಕುಗಳಿಗೆ 25 ಲಕ್ಷ ರೂ. ಅನುದಾನವನ್ನು ಕುಡಿಯುವ ನೀರಿನ ಬಳಕೆಗೆ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್‌ ರಚಿಸಿ ಬಳಸಲು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಶೀಘ್ರ ಕೇಂದ್ರಕ್ಕೆ ಪ್ರಸ್ತಾವನೆ: ರಾಜ್ಯದ ಬರ ನಿರ್ವಹಣೆಗೆ ಕೇಂದ್ರದಿಂದ 2,434 ಕೋಟಿ ರೂ. ಪರಿಹಾರವನ್ನು ನೀಡುವಂತೆ ಕೇಳಲಾಗಿದೆ. ಹಿಂಗಾರಿನಲ್ಲಿ 62 ತಾಲೂಕುಗಳಲ್ಲಿ ಬರ ಘೋಷಣೆ ಮಾಡಿದ್ದು, ಬರ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರದಲ್ಲೇ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ವಿವರಿಸಿದರು.

ಸರ್ಕಾರವು ರಾಜ್ಯದ ರೈತರ ನೆರವಿಗೆ ಧಾವಿಸಲು 2 ಲಕ್ಷ ರೂ.ವರೆಗಿನ ಬೆಳೆ ಸಾಲಮನ್ನಾ ಮಾಡಿದ್ದು, ಕೋಲಾರ ಜಿಲ್ಲೆಯ ಸಹಕಾರಿ ಬ್ಯಾಂಕ್‌ನ 10,503 ರೈತರು ಹಾಗೂ ವಾಣಿಜ್ಯ ಬ್ಯಾಂಕುಗಳ 28,797 ರೈತರು ಇದರ ಪ್ರಯೋಜನ ಪಡೆಯಲಿದ್ದು, ಒಟ್ಟಾರೆ 400 ಕೋಟಿ ರೂ.ಗೂ ಹೆಚ್ಚು ಸಾಲಮನ್ನಾ ಪ್ರಯೋಜನವನ್ನು ಜಿಲ್ಲೆಯ ರೈತರು ಪಡೆಯಲಿದ್ದಾರೆ. ಮುಂದಿನ ಒಂದು ತಿಂಗಳೊಳಗೆ 8 ಸಾವಿರ ಕೋಟಿ ರೂ. ಸಾಲಮನ್ನಾಕ್ಕೆ ಸರ್ಕಾರದಿಂದ ಪಾವತಿ ಮಾಡಲಾಗುವುದು ಎಂದು ತಿಳಿಸಿದರು.

ಬಾಕಿ ಬಿಡುಗಡೆಯಾಗಿಲ್ಲ: ಹಿಂದಿನ ಸರ್ಕಾರ ಜಾರಿಗೊಳಿಸಿರುವ ಅನ್ನ ಭಾಗ್ಯ, ವಿದ್ಯಾಸಿರಿ, ಕ್ಷೀರ ಭಾಗ್ಯ ಯೋಜನೆಗಳನ್ನು ಈಗಿನ ಸಮ್ಮಿಶ್ರ ಸರ್ಕಾರವೂ ಮುಂದುವರಿಕೊಂಡು ಹೋಗಿದೆ. ರಾಜ್ಯದಲ್ಲಿ ಸಮಸ್ಯೆಗಳನ್ನು ನಿವಾರಣೆ ಮಾಡಲು ಕೇಂದ್ರದಿಂದ ಬರಬೇಕಿದ್ದ ಪಾಲು ಇದುವರೆಗೂ ಬಿಡುಗಡೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪೊಲೀಸ್‌, ಗೃಹರಕ್ಷಕದಳ, ಎನ್‌ಸಿಸಿ, ಭಾರತ ಸೇವಾದಳ ಮತ್ತು ಸ್ಕೌಟ್ಸ್‌ ಗೈಡ್ಸ್‌ ಅಂತರಗಂಗೆ ವಿದ್ಯಾಸಂಸ್ಥೆಯ ವಿಕಲಚೇತನರ ತಂಡವು ಸೇರಿದಂತೆ 21 ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿದವು. ಇದೇ ಮೊದಲ ಬಾರಿಗೆ ಪ್ರೊಬೆಷನರಿ ಡಿವೈಎಸ್ಪಿ ಅನೂಷಾ ಗಣರಾಜ್ಯೋತ್ಸವ ಪಥಸಂಚಲನದ ನೇತೃತ್ವವಹಿಸಿದ್ದು ಗಮನ ಸೆಳೆಯಿತು.

ವಿವಿಧ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಾಯಿತು. ಪಥ ಸಂಚಲನದಲ್ಲಿ ಕಾಲೇಜು ವಿಭಾಗದಲ್ಲಿ ಸುಭಾಷ್‌ ಶಾಲೆಯ ಭಾರತ ಸೇವಾದಳ ತಂಡ ಪ್ರಥಮ, ಎನ್‌ಸಿಸಿ ಬಾಲಕರ ತಂಡ ದ್ವಿತೀಯ, ಎಇಎಸ್‌ ಸ್ಕೌಟ್ಸ್‌ ತಂಡ ತೃತೀಯ ಹಾಗೂ ಶಾಲಾ ವಿಭಾಗದಲ್ಲಿ ಆರ್‌.ವಿ.ಇಂಟರ್‌ ನ್ಯಾಷನಲ್‌ ಶಾಲೆ ಪ್ರಥಮ, ಮಹಿಳಾ ಸಮಾಜ ಶಾಲೆ ದ್ವಿತೀಯ, ಸುವರ್ಣ ಸೆಂಟ್ರಲ್‌ ಶಾಲೆ ತೃತೀಯ ಹಾಗೂ ವಿಶೇಷ ಸ್ಥಾನವನ್ನು ಅಂತರಗಂಗಾ ಶಾಲಾ ತಂಡ ಪಡೆದುಕೊಂಡಿತು.

ಜಿಲ್ಲಾಡಳಿತ, ಜಿಪಂ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಸಬ್ಸಿಡಿ ದರದಲ್ಲಿ 15 ಪ್ರವಾಸಿ ಟ್ಯಾಕ್ಸಿಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಈ ತಿಂಗಳ ಅಂತ್ಯಕ್ಕೆ 130 ಪ್ರವಾಸಿ ಟ್ಯಾಕ್ಸಿಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುವುದು. ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸ್ತಬ್ಧ ಚಿತ್ರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಕೆ.ಎಚ್.ಮುನಿಯಪ್ಪ, ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಶ್ರೀನಿವಾಸಗೌಡ, ಜಿಪಂ ಅಧ್ಯಕ್ಷ ಗೀತಮ್ಮ ಆನಂದರೆಡ್ಡಿ, ಉಪಾಧ್ಯಕ್ಷ ಯಶೋದಾ ಕೃಷ್ಣಮೂರ್ತಿ, ತಾಪಂ ಅಧ್ಯಕ್ಷ ಸೂಲೂರು ಆಂಜಿನಪ್ಪ, ನಗರಸಭಾಧ್ಯಕ್ಷೆ ಮಹಾಲಕ್ಷ್ಮಿ, ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಜಿಪಂ ಸಿಇಒ ಜಿ.ಜಗದೀಶ್‌, ಎಸ್ಪಿ ಡಾ.ರೋಹಿಣಿ ಕಟೋಚ್ ಸಫೆಟ್, ಅಪರ ಜಿಲ್ಲಾಧಿಕಾರಿ ಪುಷ್ಪಲತಾ, ಉಪ ವಿಭಾಗಾಧಿಕಾರಿ ಸುಭಾ ಕಲ್ಯಾಣ್‌ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಮೂಹಿಕ ಕವಾಯತು ಹಾಗೂ ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

ಟಾಪ್ ನ್ಯೂಸ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

10

Udupi: ಒಂದೇ ವೃತ್ತ; ಪೊಲೀಸ್‌ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

9

Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್‌ ಅವ್ಯವಸ್ಥೆ

8

Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.