ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ; ಧಾರ್ಮಿಕತೆ ಬಿಂಬಿಸುವ ವಸ್ತ್ರಕ್ಕಿಲ್ಲ ಅವಕಾಶ: ಡೀಸಿ
ಸಣ್ಣಪುಟ್ಟ ಗೊಂದಲಗಳಿಗೂ ಅವಕಾಶವಾಗದಂತೆ ಎಚ್ಚರವಹಿಸಲಾಗಿದೆ
Team Udayavani, Apr 21, 2022, 6:24 PM IST
ಕೋಲಾರ: ಜಿಲ್ಲೆಯ 29 ಕೇಂದ್ರಗಳಲ್ಲಿ ನಾಳೆ ಯಿಂದ ಆರಂಭಗೊಳ್ಳುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ 17008 ವಿದ್ಯಾರ್ಥಿಗಳು ಕುಳಿತಿದ್ದು, ಸುಗಮ ಪರೀಕ್ಷೆಗೆ ಜಿಲ್ಲಾಡಳಿತ ಎಲ್ಲಾ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕತೆ ಬಿಂಬಿಸುವ ವಸ್ತ್ರ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬರುವಂತಿಲ್ಲ ಎಂದು ಶಿಕ್ಷಕರು, ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಸ್ನೇಹಾ ಹಾಗೂ ಪಿಯು ಬೋರ್ಡ್ ಉಪ ನಿರ್ದೇಶಕ ರಾಮಚಂದ್ರಪ್ಪ ಮಾಹಿತಿ ನೀಡಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕರೆದಿದ್ದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಡಾ.ಸ್ನೇಹಾ ಮಾತನಾಡಿ, ಈ ಬಾರಿ ಹೊಸದಾಗಿ 7116 ಬಾಲಕರು, 7626 ಬಾಲಕಿಯರು ಸೇರಿದಂತೆ 14742 ಮಂದಿ ಪರೀಕ್ಷೆಗೆ ಕುಳಿತಿದ್ದಾರೆ, ಪುನರಾವರ್ತಿತ ಅಭ್ಯರ್ಥಿಗಳಲ್ಲಿ 1760 ಬಾಲಕ, 1030 ಬಾಲಕಿಯರು ಸೇರಿದಂತೆ 2790 ಮಂದಿ ಪರೀಕ್ಷೆ ತೆಗೆದುಕೊಂಡಿದ್ದು, ಖಾಸಗಿಯಾಗಿ 267 ಬಾಲಕ, 189 ಬಾಲಕಿಯರು ಸೇರಿದಂತೆ 456 ಮಂದಿ ಪರೀಕ್ಷೆಗೆ ಕುಳಿತಿದ್ದಾರೆ ಮತ್ತು 984 ಬಾಲಕರು, 826 ಬಾಲಕಿಯರು ಸೇರಿದಂತೆ ಒಟ್ಟು 1810 ಮಂದಿ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.ಪರೀಕ್ಷೆಗೆ ಅಗತ್ಯ ಸಿದ್ಧತೆ ನಡೆಸಲಾಗಿದೆ ಎಂದರು.
ಒಟ್ಟು 29 ಕೆಂದ್ರಗಳಲ್ಲಿ ಸಿದ್ಧತೆ: ಕೋಲಾರದಲ್ಲಿ 11, ಬಂಗಾರಪೇಟೆ-3, ಕೆಜಿಎಫ್-3, ಶ್ರೀನಿವಾಸ ಪುರ-3, ಮುಳಬಾಗಿಲು-5, ಮಾಲೂರಿನಲ್ಲಿ 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಇದರಲ್ಲಿ 13 ಸರ್ಕಾರಿ, 6 ಅನುದಾನಿತ, 10 ಅನುದಾನರಹಿತ ಪರೀಕ್ಷಾ ಕೇಂದ್ರಗಳಾಗಿವೆ ಎಂದರು.
ಹಿಜಾಬ್‌ಗಿಲ್ಲ ಪರೀಕ್ಷೆಗೆ ಅವಕಾಶ: ದ್ವಿತೀಯ ಪಿಯುಸಿ ಪರೀಕ್ಷೆಗೂ ಸಹಾ ಜಿಜಾಬ್, ಕೇಸರಿ ಶಾಲು ಮತ್ತಿತರ ಧಾರ್ಮಿಕತೆ ಬಿಂಬಿಸುವ ವಸ್ತ್ರ ಧರಿಸಿ ಬರಲು ಅವಕಾಶ ನಿರಾಕರಿಸಲಾಗಿದೆ. ಇದು ಪರೀಕ್ಷೆ ಬರೆಯಲು ಬರುವ ಖಾಸಗಿ ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕಾರ್ಯ ನಿರ್ವಹಿಸುವ ಶಿಕ್ಷಕ,ಸಿಬ್ಬಂದಿಗೂ ಅನ್ವಯವಾಗಲಿದೆ ಎಂದರು.
ಹೊಸ ಅಭ್ಯರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆಗೆ ಬರಬೇಕು, ಖಾಸಗಿ ಅಭ್ಯರ್ಥಿಗಳು ಧಾರ್ಮಿಕತೆ ಬಿಂಬಿಸದ ಸಾಮಾನ್ಯ ವಸ್ತ್ರ ಸಂಹಿತೆ ಪಾಲಿಸಲು ಸೂಚಿಸಿದ್ದು, ಇದನ್ನು ಕಟ್ಟುನಿಟ್ಟಾಗಿ ಜಾರಿ ಗೊಳಿಸಲು ಈಗಾಗಲೇ ಶಿಕ್ಷಣ ಸಚಿವರು ಆದೇಶ ನೀಡಿದ್ದಾರೆ ಎಂದರು.
ಜಿಲ್ಲೆಯಲ್ಲಿ ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಗೆ ಗುರುತಿನ ಚೀಟಿ ಇದ್ದರೆ ಮಾತ್ರವೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದು. ಪ್ರತಿ ಕೇಂದ್ರಕ್ಕೂ ಓರ್ವ ಮುಖ್ಯ ಅ ಧೀಕ್ಷಕರಿದ್ದು, ಅವರೊಂದಿಗೆ ಜಂಟಿ ಮುಖ್ಯ ಅಧೀಕ್ಷಕರು ಕಾರ್ಯನಿರ್ವಹಿಸುವರು ಎಂದರು.
ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳಾದ ದಯಾನಂದ್, ಸುಜಾತಾ, ರಮೇಶ್, ಕ್ಷೇತ್ರ ಶಿಕ್ಷಣಾ ಧಿಕಾರಿಗಳಾದ ಉಮಾದೇವಿ, ಕೆಂಪಯ್ಯ, ಚಂದ್ರಶೇಖರ್, ಎ.ಬಿ.ರಾಮಕೃಷ್ಣಪ್ಪ, ಕೃಷ್ಣಮೂರ್ತಿ, ಪ್ರಾಂಶುಪಾಲರಾದ ಬಾಲಕೃಷ್ಣ, ನರಸಾಪುರ ಮಂಜುನಾಥ್, ಮುನಿಕೃಷ್ಣಪ್ಪ ಸೇರಿದಂತೆ ಎಲ್ಲಾ ಮಾರ್ಗಾಧಿಕಾರಿಗಳು, 29 ಕೇಂದ್ರಗಳ ಮುಖ್ಯ ಅಧೀಕ್ಷಕರು ಸಭೆಯಲ್ಲಿ ಹಾಜರಿದ್ದರು.
ಕೇಂದ್ರಗಳ 200ಮೀ.ವ್ಯಾಪ್ತಿ ನಿಷೇಧಾಜ್ಞೆ ಜಾರಿ
ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಲಾಗಿದ್ದು, ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲ್ಪಟ್ಟ ಪೊಲೀಸ್ ಅಧಿಕಾರಿಗಳು ಪರೀಕ್ಷಾ ಆರಂಭಕ್ಕೆ ಅರ್ಧಗಂಟೆ ಮುನ್ನಾ ಕರ್ತವ್ಯಕ್ಕೆ ಹಾಜರಾಗಬೇಕು. ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳ ಬಂಡೆಲ್‌ಗಳನ್ನು ಅಂಚೆ ಕಚೇರಿಗೆ ಪರೀಕ್ಷಾ ಸಿಬ್ಬಂದಿ ಜತೆ ತೆಗೆದುಕೊಂಡು ಹೋಗಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀಟರ್ ವ್ಯಾಪ್ತಿಯಲ್ಲಿ ಡೀಸಿ ನಿಷೇದಾಜ್ಞೆ ಜಾರಿ ಮಾಡಿದ್ದಾರೆ ಎಂದು ಪಿಯು ಬೋರ್ಡ್ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದರು. ಪರೀಕ್ಷಾ ಕೇಂದ್ರಗಳಿಗೆ ಮೊಬೆ„ಲ್ ಪೋನ್, ಇ-ಕ್ಯಾಮರಾ, ಲ್ಯಾಪ್ ಟಾಪ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಎಚ್ಚರಿಕೆ ನೀಡಲಾಗಿದೆ. ಕೊಠಡಿ ಮೇಲ್ವಿಚಾರಕರಾಗಲಿ ವಿದ್ಯಾರ್ಥಿಗಳಾಗಲಿ ಮೊಬೈಲ್ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಸಿಸಿಕ್ಯಾಮರಾ ಕಣ್ಗಾವಲು
ಪರೀಕ್ಷಾ ಅವ್ಯವಹಾರ ತಡೆಗೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ, ಸಣ್ಣಪುಟ್ಟ ಗೊಂದಲಗಳಿಗೂ ಅವಕಾಶವಾಗದಂತೆ ಎಚ್ಚರವಹಿಸಲಾಗಿದೆ. ಮಾರ್ಗಾ ಧಿಕಾರಿಗಳಾಗಿ ನೇಮಕಗೊಂಡಿರುವ ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರಾಂಶುಪಾಲರನ್ನೊಳಗೊಂಡ ತಂಡ ಕಾರ್ಯನಿರ್ವಹಿಸುತ್ತಿದೆ.ಕೇಂದ್ರ ಕಚೇರಿಯ 2 ಜಾಗೃತದಳ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 1, ಪೊಲೀಸ್ ಇಲಾಖೆ ಯಿಂದ 1, ಉಪನಿರ್ದೇಶಕರ ನೇತೃತ್ವದಲ್ಲಿ 1 ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಜಾಗೃತದಳಗಳನ್ನು ರಚಿಸಲಾಗಿದೆ. ಪಿಯು ಶಿಕ್ಷಣ ಮಂಡಳಿಯಿಂದಲೇ ಪ್ರತಿ ಪರೀಕ್ಷಾ ಕೇಂದ್ರಕ್ಕೂ ಹೊರ ಜಿಲ್ಲೆಗಳ ತಲಾ ಇಬ್ಬರು
ಸ್ಥಾನಿಕ ಜಾಗೃತದಳ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಪಿಯು ಬೋರ್ಡ್ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದರು.
ವಾಹನಕ್ಕೆ ಜಿಪಿಎಸ್
ಪ್ರಶ್ನೆಪತ್ರಿಕೆಗಳನ್ನು ಎಲ್ಲಾ 29 ಕೇಂದ್ರಗಳಿಗೆ ಪರೀಕ್ಷೆಗೆ ಮುನ್ನಾ ಖಜಾನೆಯಿಂದ ಪಡೆದು ಸರಬರಾಜು ಮಾಡಲು ಪೊಲೀಸ್ ಬಂದೋ ಬಸ್ತ್ ಇರುವ 9 ವಾಹನಗಳು 9 ಮಾರ್ಗಗಳಲ್ಲಿ ಸಾಗಲಿವೆ. ಈ ಎಲ್ಲಾ ವಾಹನಗಳಿಗೂ ಜಿಪಿಎಸ್ ಅಳವಡಿಸಿದ್ದು, ಯಾವುದೇ ಅವ್ಯವಹಾರ, ಪ್ರಶ್ನೆಪತ್ರಿಕೆ ಸೋರಿಕೆ ಮತ್ತಿತರ ಸಮಸ್ಯೆಗಳು ಎದುರಾಗದಂತೆ ಎಲ್ಲಾ ಕಟ್ಟೆಚ್ಚರ ವಹಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.