ಪದವಿ ವಿದ್ಯಾರ್ಥಿಗಳಿಂದ ಪ್ರತ್ಯೇಕ ಪ್ರತಿಭಟನೆ
Team Udayavani, Oct 19, 2019, 4:43 PM IST
ಮಾಲೂರು: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಲಾವಿಭಾಗ ಮತ್ತು ಬಿಎಸ್‌ಡ್ಲ್ಯೂ ವಿಭಾಗದ ವಿದ್ಯಾರ್ಥಿಗಳು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಮುಖಂಡ ಬಾಲಕೃಷ್ಣ ನೇತೃತ್ವದಲ್ಲಿ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದರು. ಪ್ರಾಂಶುಪಾಲ ಕೇಶವರೆಡ್ಡಿ, ಕಲಾ ವಿಭಾಗದ ವಿದ್ಯಾರ್ಥಿಗಳನ್ನು ಕೀಳುಮಟ್ಟದಲ್ಲಿ ಕಾಣುತ್ತಿರುವುದರ ಜೊತೆಗೆ ಮಾಲೂರು ಪಟ್ಟಣದಲ್ಲಿನ ಹಳೇ ಕಟ್ಟಡಕ್ಕೆ ಕಲಾವಿಭಾಗದ ತರಗತಿ ವರ್ಗಾಯಿಸಿದ್ದಾರೆ. ಇಲ್ಲಿ ಯಾವುದೇ ಮೂಲ ಸೌಲಭ್ಯಗಳಿಲ್ಲ ಎಂದು ದೂರಿದರು.
ಯುಜಿಸಿ ಅನುದಾನ ಕೇವಲ ವಾಣಿಜ್ಯಶಾಸ್ತ್ರ ಮತ್ತು ಇತರೆ ವಿಭಾಗಕ್ಕೆ ಮಾತ್ರ ಸೀಮಿತ ಮಾಡಲಾಗುತ್ತಿದೆ. ಅನುದಾನವೂ ದುರುಪಯೋಗ ಮಾಡಲಾಗುತ್ತಿದೆ ಎಂಬ ದೂರು ಕೇಳಿಬಂದಿದೆ. ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸಮವಸ್ತ್ರ ಮಾಡಿದ್ದು ಸರಿಯಲ್ಲ. ಕಲಾ ವಿಭಾಗದ ವಿದ್ಯಾರ್ಥಿಗಳನ್ನು ಕೀಳುಮಟ್ಟದಲ್ಲಿ ಗುರುತಿಸುವ ಕೆಲಸ ಮಾಡುತ್ತಿರುವ ಪ್ರಾಂಶುಪಾಲರ ನಡೆ ಸರಿಯಲ್ಲ ಎಂದರು.
ಈ ಕೂಡಲೇ ಬೆಂಗಳೂರು ಉತ್ತರ ವಿವಿಯ ಅಡಳಿತ ಮಂಡಳಿಯು ಮಾಲೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಅಗುತ್ತಿರುವ ಅನ್ಯಾಯ ಮತ್ತು ತಾರತಮ್ಯ ಹೋಗಲಾಡಿಸಬೇಕು ಎಂದು ಮನವಿ ಮಾಡಿದರು. ವಿದ್ಯಾರ್ಥಿಗಳ ಜೊತೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಎಸ್. ಎಂ.ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.