ಕ್ರಿಸ್‌ಮಸ್, ಹೊಸವರ್ಷ ಸರಳವಾಗಿ ಆಚರಿಸಿ
Team Udayavani, Dec 23, 2020, 4:00 PM IST
ಕೋಲಾರ: ಸಾರ್ವಜನಿಕರ ಆರೋಗ್ಯದದೃಷ್ಟಿಯಿಂದ ಕ್ರಿಸ್‌ಮಸ್ ಹಬ್ಬ ಹಾಗೂ ಹೊಸ ವರ್ಷದ ಸಂಭ್ರಮಾಚರಣೆ ಸರಳ, ಭಕ್ತಿಪೂರ್ವಕಮತ್ತು ಅರ್ಥಗರ್ಭಿತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದ್ದಾರೆ.
ನಿಷೇಧ: ಜಿಲ್ಲಾದ್ಯಂತ ಸಾಮಾಜಿಕ ಅಂತರ ವಿಲ್ಲದೇ ಹೆಚ್ಚಿನ ಜನರು ಸೇರುವ ಸಾಮೂಹಿಕಕೂಟಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಛಯಗಳಲ್ಲಿ ಹಾಗೂ ಜನ ಸೇರತಕ್ಕಂಥ ಸ್ಥಳಗಳಲ್ಲಿ ಆಯೋಜಿಸುವುದು, ಆಚರಣೆನಡೆಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಸ್ತಲಾಘವ,ಆಲಿಂಗನ ನಿಷೇಧ: ಚರ್ಚ್‌ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮೇಲ್ವಿಚಾರಕರು ಅಥವಾ ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸತಕ್ಕದ್ದು.
ಹಬ್ಬದ ಆಚರಣೆ ಸಂದರ್ಭದಲ್ಲಿ ಹಸ್ತಲಾಘವಮತ್ತು ಆಲಿಂಗನ ನಿಷೇಧಿಸಿದೆ. ಡಿ.30 ರಿಂದಜನವರಿ 2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರವಾದ ಸ್ಥಳ ಅಥವಾಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ ನಿಷೇಧಿಸಲಾಗಿದೆ.
ಕ್ಲಬ್, ಪಬ್ ಓಪನ್: ವಿಶೇಷ ಡಿಜೆ-ಡಾನ್ಸ್ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿ, ಇತ್ಯಾದಿನಿಷೇಧಿಸಿದೆ. ಆದರೆ ಕ್ಲಬ್, ಪಬ್, ರೆಸ್ಟೋರೆಂಟ್‌ಗಳನ್ನು ಪ್ರತಿನಿತ್ಯದಂತೆ ತೆರೆಯಲಿದ್ದು, ನಡೆಸಲು ನಿರ್ಬಂಧವಿಲ್ಲ. ಹೊಸ ವರ್ಷಾಚರಣೆ ಸಂಬಂಧದಲ್ಲಿಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳಲ್ಲಿ ಮತ್ತುಸಾಮಾಜಿಕ ಅಂತರವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿಜನರ ಸೇರುವಿಕೆ ಹಾಗೂ ಸಂಭ್ರಮಾಚರಣೆ ನಿಷೇಧಿಸಿದೆ. ಆದರೆ ಈ ಸ್ಥಳಗಳಲ್ಲಿ ಪ್ರತಿನಿತ್ಯಸಾಮಾನ್ಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿಲ್ಲ.
ಥರ್ಮಲ್ ಸ್ಕ್ರೀನಿಂಗ್: 65 ವರ್ಷ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು, ಸಾರ್ವ ಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಹೋಟೆಲ್, ಮಾಲ್, ಪಬ್, ರೆಸ್ಟೋ ರೆಂಟ್‌ಗಳು ಹಾಗೂ ಅಂತಹ ಸ್ಥಳಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಕಡ್ಡಾಯವಾಗಿ ಇರಿಸತಕ್ಕದ್ದು.
ಸ್ಥಳ ಕಾಯ್ದಿರಿಸುವ ವ್ಯವಸ್ಥೆ: ಹೋಟೆಲ್‌ಗಳು, ಮಾಲ್‌ಗಳು, ಪಬ್, ರೆಸ್ಟೋರೆಂಟ್‌ಗಳು ಹಾಗೂ ಅಂತಹ ಸ್ಥಳ ಪ್ರದೇಶಗಳಲ್ಲಿ ಅದರ ಮಾಲೀಕರು ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಅಗತ್ಯವಿದ್ದಲ್ಲಿ ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್‌ಲೈನ್ ಮುಖಾಂತರ ಅಥವಾ ಟೋಕನ್ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಕಲ್ಪಿಸಬೇಕೆಂದು ತಿಳಿಸಿದ್ದಾರೆ.
ಉಲ್ಲಂಘಿಸಿದರೆ ಕಾನೂನು ಕ್ರಮ : ಮಾರ್ಗಸೂಚಿಗಳು ಡಿ.20 ರಿಂದ ಜನವರಿ 2, 2021 ರವರೆಗೆ ಚಾಲ್ತಿಯಲ್ಲಿರುತ್ತದೆ. ಯಾವುದೇ ವ್ಯಕ್ತಿ ಈ ಆದೇಶವನ್ನು ಉಲ್ಲಂಘಿ ಸಿದಲ್ಲಿ ಅಂತಹವ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರಕಲಂ 51 ರಿಂದ 60ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಕಲಂ 188 ಮತ್ತು 270 ರ ರೀತ್ಯಾ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.