ಜಿಲ್ಲೆಯ ಕೆಲ ಶಾಸಕರು ಬಿಜೆಪಿ ಸೇರ್ತಾರೆ

ಬಿಎಸ್‌ವೈ ಸಿಎಂ ಮಾಡಲು ಸಹಕಾರ ನೀಡುವ ಸೂಚನೆ ಸಿಕ್ಕಿದೆ: ಸಂಸದ ಮುನಿಸ್ವಾಮಿ

Team Udayavani, May 25, 2019, 4:12 PM IST

kolar-tdy-3..

ಕೋಲಾರ: ಲೋಕಸಭಾ ಚುನಾವಣೆಯ ವಿಜಯೋತ್ಸವದ ಸಂಭ್ರಮದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಜಿಲ್ಲೆಯ ಕೆಲವು ಶಾಸಕರು ಸಹಕಾರ ನೀಡುವ ಶುಭ ಸೂಚನೆ ಸಿಕ್ಕಿದೆ ಎಂದು ಸಂಸದ ಎಸ್‌.ಮುನಿಸ್ವಾಮಿ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳಿಸಲಿದ್ದು, ಬಿ.ಎಸ್‌.ಯಡಿಯೂರಪ್ಪ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಮೈತ್ರಿ ಸರ್ಕಾರದಲ್ಲಿನ ವೈಫ‌ಲ್ಯದಿಂದ ಕೆಲವು ಶಾಸಕರು ಬಿಜೆಪಿಗೆ ಬರುವುದು ನಿಶ್ಚಿತ ಎಂದು ಹೇಳಿದರು.

8 ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್‌ ಮುಕ್ತವನ್ನಾಗಿ ಮಾಡುವುದೇ ನನ್ನ ಗುರಿ, ಇದಕ್ಕೆ ಕಾರ್ಯಕರ್ತರ ಸಹಕಾರ ನೀಡಬೇಕು ಎಂದು ಕೋರಿದ ಅವರು, ತಮ್ಮ ಗೆಲುವಿಗೆ ಸಹಕಾರ ನೀಡಿದ ವಿವಿಧ ಪಕ್ಷಗಳ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು.

ಕೃತಜ್ಞತೆ: 8 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರನ್ನು ಮಾಡುವ ಮೂಲಕ ಕಾಂಗ್ರೆಸ್‌ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಮೂಲಕ ಶಾಪ ವಿಮೋಚನೆ ಗೊಳಿಸಬೇಕು. ಇದಕ್ಕೆ ಅವಕಾಶ ಕಲ್ಪಿಸಿರುವ ನಿಮಗೆಲ್ಲ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಉರುಳುವ ಸೂಚನೆಗಳು ಹೆಚ್ಚಾಗಿ ಕಾಣುತ್ತಿದ್ದು, ಈಗಾಗಲೇ ಶಾಸಕರೇ ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ. ಇನ್ನು ಕೆಲವರು ಪ್ರಯತ್ನದಲ್ಲಿದ್ದಾರೆ. ಅದರೆ ಅವಕಾಶವಾದಿಗಳಿಗೆ ನಮ್ಮಲ್ಲಿ ಜಾಗವಿಲ್ಲ ಎಂದು ಬಿಜೆಪಿ ವರಿಷ್ಠರು ತಿಳಿಸಿದ್ದಾರೆ. ನಮ್ಮ ಆಡಳಿತದ ಅವಧಿಯಲ್ಲಿ ಕೆ.ಎಚ್.ಮುನಿಯಪ್ಪ ಅವರ ರೀತಿ ಕೆಲಸ ಮಾಡದೆ ಇರುವವರನ್ನು ದೂರ ಇಡಲಾಗುತ್ತದೆ ಎಂದು ಹೇಳಿದರು.

ವಿಶ್ರಾಂತಿ ನೀಡಿದ್ದಾರೆ: ಕ್ಷೇತ್ರದ ಜನರ ಮೇಲೆ ನನಗೆ ಮೊದಲಿಂದಲೂ ವಿಶ್ವಾಸವಿತ್ತು, ಅವರು ಎಂದಿಗೂ ಹಣ ಆಮಿಷಗಳಿಗೆ ಆಸೆ ಪಟ್ಟವರಲ್ಲ ಎಂಬುವುದು ನನಗೆ ತಿಳಿದಿದೆ. ಕೆ.ಎಚ್.ಮುನಿಯಪ್ಪ ಕಳೆದ 28 ವರ್ಷಗಳಿಂದ ಸಂಸದರಾಗಿ ಯಾವುದೇ ಅಭಿವೃದ್ಧಿ ಮಾಡದೆ ಅನ್ಯಾಯ ಮಾಡಿದ್ದರು. ಜನತೆ ಬೇಸತ್ತು ಈ ಚುನಾವಣೆಯಲ್ಲಿ ಅವರಿಗೆ ವಿಶ್ರಾಂತಿ ನೀಡಿದ್ದಾರೆ ಎಂದು ಹೇಳಿದರು.

ಸಾಮೂಹಿಕ ಶ್ರಮ: ಕೆ.ಎಚ್.ಮುನಿಯಪ್ಪ ವಿರುದ್ಧ ಶಾಸಕ ಕೆ.ಶ್ರೀನಿವಾಸಗೌಡ, ಮಾಜಿ ಶಾಸಕರಾದ ಕೊತ್ತೂರು ಮಂಜುನಾಥ್‌, ಡಾ.ಸುಧಾಕರ್‌, ಮಂಜುನಾಥ್‌ಗೌಡ ಸೇರಿದಂತೆ ಅನೇಕರು ಪಕ್ಷಭೇದ ಮರೆತು ಒಂದು ವೇದಿಕೆಯನ್ನೇ ಸಿದ್ಧಪಡಿಸಿದ್ದರು. ಜತೆಗೆ ಬಿಜೆಪಿ ಮುಖಂಡರು ಕಾರ್ಯಕರ್ತರು ಎಲ್ಲರೂ ಸೇರಿ ಸಾಮೂಹಿಕವಾಗಿ ಶ್ರಮಿಸಿದ್ದರಿಂದ ನಾನು 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲವು ಸಾಧಿಸಲು ಸಾಧ್ಯವಾಯಿತು ಎಂದು ತಿಳಿಸಿದರು.

ಬಹುದಿನಗಳ ಕನಸು ನನಸು: ಮಾಜಿ ಶಾಸಕ ಎ.ನಾಗರಾಜ್‌ ಮಾತನಾಡಿ, ಬಿಜೆಪಿಯ ಬಹುದಿನದ ಕನಸು ನನಸಾಗಿದೆ. ನಮ್ಮ ಈ ಖುಷಿಯನ್ನು ಮುಂದಿನ 25ವರ್ಷಗಳವರೆಗೆ ಕಾಪಾಡಿ ಕೊಳ್ಳಬೇಕು. ಜನರ ವಿಶ್ವಾಸ ಪಡೆಯುವಂತ ಜನಪರವಾದ ಕೆಲಸಗಳನ್ನು ಮಾಡಬೇಕು. ಕೇಂದ್ರದಲ್ಲಿ ಕಳೆದ 5 ವರ್ಷ ನಮ್ಮದೆ ಸರ್ಕಾರ ಇದ್ದರೂ ನಾಮನಿರ್ದೆಶನಗಳು ಮಾಡದೆ ಯಾರಿಗೂ ಯಾವೂದೇ ಸ್ಥಾನ ಮಾನ ಸಿಗಲಿಲ್ಲ ಅದನ್ನು ಕೇಳುವಂತವವರು ಇರಲಿಲ್ಲ ಈಗಾ ಮುನಿಸ್ವಾಮಿಯವನ್ನು ಆಯ್ಕೆ ಮಾಡಿದ್ದು ಅವರು ನಾಮನಿರ್ದೇಶನಗಳನ್ನು ಮಾಡಲು ಕೇಂದ್ರದಲ್ಲಿ ಒತ್ತಾಯಿಸುವಂತಾಗಬೇಕು. ಕಷ್ಟ ಪಟ್ಟು ಶ್ರಮಿಸಿದ ಕಾರ್ಯಕರ್ತರಿಗೆ ಸ್ಥಾನಮಾನ ಕೊಡಿಸಬೇಕು ಎಂದು ಸಲಹೆ ನೀಡಿದರು.

ಬಹುತೇಕ ಖಚಿತ: ಜಿಲ್ಲಾಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ಮಾತನಾಡಿ, ಜಿಲ್ಲೆಯ ಬಹುದಿನದ ಕನಸು ಮೋದಿಯವರ ಆಡಳಿತದ 2019ರಲ್ಲಿ ನನಸಾಗಿದೆ. ಮೋದಿ ಬಿಜೆಪಿಯ ಒಂದು ಶಕ್ತಿಯಾಗಿ ಹೊರಹೊಮ್ಮಿರುವ ಹಿನ್ನೆಲೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಆಡಳಿತ ಚುಕ್ಕಾಣಿ ಹಿಡಿಯುವುದಕ್ಕೆ ಬಹುಮತ ದೊರೆತಿದೆ ಎಂದು ಹೇಳಿದರು.

ಮುಖ್ಯವಾಹಿನಿ ತರುತ್ತೇವೆ: ಜಿಪಂ ಮಾಜಿ ಸದಸ್ಯ ಎಸ್‌. ಬಿ.ಮುನಿವೆಂಕಟಪ್ಪ, ಜಿಲ್ಲೆಯಲ್ಲಿ ಹೊಸ ಇತಿಹಾಸ ನಿರ್ಮಾಣ ವಾಗಿದೆ. ಮುಂದಿನ ಚುನಾವಣೆಗಳಲ್ಲಿ ಇದೇ ರೀತಿ ಕಾರ್ಯ ನಿರ್ವಹಿಸುವ ಮೂಲಕ ಚೈತನ್ಯ ತುಂಬುವಂತಾಗಬೇಕು ಬಡವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ಸಂಸದರಾರಬೇಕು ಎಂದು ಹೇಳಿದರು.

ಪಕ್ಷದ ಜಿಲ್ಲಾ ಪ್ರಭಾರಿ ಪಾವಗಡ ಕೃಷ್ಣರೆಡ್ಡಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಾಸುದೇವರೆಡ್ಡಿ, ಗ್ರಾಮಾಂತರ ಘಕಟ ಜಿಲ್ಲಾಧ್ಯಕ್ಷ , ಬೈಚಪ್ಪ, ನಗರದ ಘಟಕದ ಅಧ್ಯಕ್ಷ ಮಾಗೇರಿ ನಾರಾಯಣಸ್ವಾಮಿ, ವಕ್ತಾರರಾದ ವಿಜಯಕುಮಾರ್‌, ಮಹೇಶ್‌ ಹಾಜರಿದ್ದರು.

ಎಂಪಿ ಕ್ಷೇತ್ರದ 6 ಶಾಸಕರು ಬಿಜೆಪಿಗೆ ಬೆಂಬಲ:

ಕೋಲಾರ: ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಮೈತ್ರಿ ಸರ್ಕಾರದ ವಿರುದ್ಧ ಶಾಸಕರು ತಿರುಗಿ ಬಿದ್ದಿದ್ದಾರೆ. ರಾಜಕೀಯ ಬದಲಾವಣೆಗಳು ಆರಂಭವಾಗಿದ್ದು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಎರಡೂ ಪಕ್ಷಗಳವರೂ ಏನೇ ಪ್ರಯತ್ನಪಟ್ಟರು ವಿಫಲವಾಗುತ್ತದೆ ಎಂದು ಸಂಸದ ಎಸ್‌.ಮುನಿಸ್ವಾಮಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಜೆಡಿಎಸ್‌ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ವೈಫಲ್ಯದಿಂದಲ್ಲೇ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಿದೆ ಎಂದರು. ಚುನಾವಣೆಯಲ್ಲಿ ನನಗೆ ಬೆಂಬಲ ನೀಡಿದ ಜಿಲ್ಲೆಯ ಶಾಸಕರು ಸಹ ಸರ್ಕಾರ ರಚನೆಗೆ ಬೆಂಬಲ ನೀಡಲು ಮುಂದಾಗಿದ್ದಾರೆ. ಇಂತದನ್ನೆಲ್ಲಾ ಬಹಿರಂಗಪಡಿಸಲಾಗುವುದಿಲ್ಲ. ಮುಂದೆ ಆಗುವ ಬದಲಾವಣೆಗಳನ್ನು ಕಂಡು ನೀವೆ ಆಶ್ಚರ್ಯಚಕಿತರಾಗುತ್ತೀರಾ ಎಂದು ಹೇಳಿದರು. ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಶಾಸಕರು ಬೆಂಬಲ ನೀಡಲಿದ್ದು, ಸದ್ಯ ಸಂಪರ್ಕದಲ್ಲಿರುವ ಶಾಸಕರು ಸೇರಿದಂತೆ ಒಟ್ಟು ಆರು ಮಂದಿ ಬೆಂಬಲ ನೀಡುತ್ತಾರೆ. ಜತೆಗೆ ಮುನಿಯಪ್ಪ ವಿರೋಧಿ ಬಣದವರು ಸಹ ಸಾಕಷ್ಟು ಮಂದಿ ಬಿಜೆಪಿಗೆ ಬರುತ್ತಾರೆ ಎಂದರು.
ಪಕ್ಷದಲ್ಲಿ ಯಾರು ಏನೆಂಬುದರ ಅರಿವಿದೆ:

ನನಗೆ ಪಕ್ಷದಲ್ಲಿ ಯಾರು, ಏನು, ಹೇಗೆಂಬುವುದು ಚುನಾವಣೆಯಲ್ಲಿ ಚೆನ್ನಾಗಿ ಅರಿತಿದ್ದೇನೆ. ನನ್ನ ಪ್ರಕಾರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ನಾಯಕತ್ವದ ಕೊರತೆಯಿದೆ. ಅನೇಕ ಅವಕಾಶ, ಸೌಕರ್ಯಗಳಿಂದಲೂ ವಂಚಿತರಾಗಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಮುಖಂಡರೊಂದಿಗೆ ಚರ್ಚಿ ಕೆಲಸ ಮಾಡದವರ ಹುದ್ದೆ ಬದಲಾವಣೆಗೆ ಕ್ರಮಕೈಗೊಳ್ಳಲಾಗುವುದು ಎಂದು ಬಿಜೆಪಿ ವಿಜೇತ ಅಭ್ಯರ್ಥಿ ಮುನಿಸ್ವಾಮಿ ಹೇಳಿದರು. ದುಡಿದವರು, ಯಾರು ವಂಚಿಸಿದವರು, ಯಾರು ತಟಸ್ಥರಾದವರು, ಯಾರು ಎಲ್ಲವು ನನಗೆ ತಿಳಿದಿದೆ. ಪಕ್ಷಕ್ಕೆ ದ್ರೋಹ ಮಾಡಿದವರನ್ನು, ಪಾರ್ಟಿ ವಿರುದ್ಧ ಹಾದಿ ಬೀದಿಗಳಲ್ಲಿ ಧಕ್ಕೆ ತರುವಂತ ಮಾತುಗಳನ್ನಾಡುವವರನ್ನು, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡುಗುವವರನ್ನು ನಾನೆಂದು ಕ್ಷಮಿಸುವುದಿಲ್ಲ. ಪಕ್ಷದಲ್ಲಿ ಶಿಸ್ತು ಬದ್ಧತೆಗಳನ್ನು ಕಾಪಾಡಿ ಕೊಳ್ಳಬೇಕು ಎಂದು ಎಚ್ಚರಿಸಿದರು. ಮುಂದಿನ ದಿನಗಳಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಪ್ರಯತ್ನಿಸುತ್ತೇನೆ. ಮೇ 29ರಂದು ನಡೆಯಲಿರುವ ಪುರಸಭೆ ಚುನಾವಣೆಯಲ್ಲಿ ಕೆಲ ವಾರ್ಡ್‌ಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಗೆಲುವು ಖಚಿತ ಎಂದು ವಿಶ್ವಾಸವ್ಯಕ್ತಪಡಿಸಿದರು.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.