ಸಿದ್ದು ಸೋಲಿಗೆ ಸ್ಪೀಕರ್ ಕಣ್ಣೀರು
Team Udayavani, Dec 10, 2018, 6:25 AM IST
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸಿದ್ದರೆ ಸೋಲಿನಿಂದ ತಪ್ಪಿಸಿಕೊಳ್ಳಬಹುದಾಗಿತ್ತು. ಆದರೆ, ಅವರು ಚಾಮುಂಡೇಶ್ವರಿ ಕ್ಷೇತ್ರವನ್ನು ಬಿಟ್ಟು ಬರಲು ಒಪ್ಪಲಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಕಣ್ಣೀರಿಟ್ಟ ಘಟನೆ ಕನಕ ಜಯಂತಿಯಲ್ಲಿ ಜರುಗಿತು.
ನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, “ಸಿದ್ದರಾಮಯ್ಯ ನನ್ನ ನಾಯಕ. ಅವರು ಹೇಳಿದ ಕಾರಣಕ್ಕಾಗಿಯೇ ಸ್ಪೀಕರ್ ಆಗಲು ಒಪ್ಪಿಕೊಂಡೆ. ಸಿದ್ದರಾಮಯ್ಯನವರನ್ನು ತಮ್ಮ ಜೀವ ಇರುವವರೆಗೂ ಕೆಳಗೆ ಬೀಳಲು ಬಿಡುವುದಿಲ್ಲ. ಅವರಿಗೆ ಸೋಲು, ಅಪಮಾನ ಮಾಡಿದವರನ್ನು ಯಾವುದೇ ಕಾರಣಕ್ಕೂ ಬಿಡಬಾರದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಾವು ಮತ್ತು ನಸೀರ್ ಅಹಮದ್ ಪರಿಪರಿಯಾಗಿ ಕೇಳಿಕೊಂಡಿದ್ದೆವು. ಆದರೆ, ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಹಿಂದಕ್ಕೆ ಸರಿಯುವುದಿಲ್ಲವೆಂದು ಹೇಳಿ ಬಿಟ್ಟಿದ್ದರು. ಒಂದು ವೇಳೆ ಅವರು ಕೋಲಾರದಿಂದ ಸ್ಪರ್ಧಿಸಿದ್ದರೆ ಇತಿಹಾಸ ಸೃಷ್ಟಿಯಾಗುತ್ತಿತ್ತು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.